Uttar Pradesh Budget: ಯೋಗಿ ಆದಿತ್ಯನಾಥ್ ಸರ್ಕಾರದಿಂದ 6.1 ಲಕ್ಷ ಕೋಟಿ ಬಜೆಟ್; ಮಹಿಳಾ ಸುರಕ್ಷೆಗೆ 523 ಕೋಟಿ ಮೀಸಲು

ಯೋಗಿ ಆದಿತ್ಯನಾಥ್ ಭಾರೀ ಬಹುಮತದೊಂದಿಗೆ 2ನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಮಂಡಿಸಿದ ಮೊದಲ ಬಜೆಟ್ ಇದು.

Uttar Pradesh Budget: ಯೋಗಿ ಆದಿತ್ಯನಾಥ್ ಸರ್ಕಾರದಿಂದ 6.1 ಲಕ್ಷ ಕೋಟಿ ಬಜೆಟ್; ಮಹಿಳಾ ಸುರಕ್ಷೆಗೆ 523 ಕೋಟಿ ಮೀಸಲು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 26, 2022 | 1:26 PM

ಲಖನೌ: ಉತ್ತರ ಪ್ರದೇಶ ಸರ್ಕಾರವು (Uttar Pradesh Govt) 2022-23ನೇ ಆರ್ಥಿಕ ವರ್ಷದ ಬಜೆಟ್​ ಮಂಡಿಸಿದೆ. ಯೋಗಿ ಆದಿತ್ಯನಾಥ್ ಭಾರೀ ಬಹುಮತದೊಂದಿಗೆ 2ನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಮಂಡಿಸಿದ ಮೊದಲ ಬಜೆಟ್ ಇದು. 37 ವರ್ಷಗಳ ನಂತರ ಸತತ 2ನೇ ಅವಧಿಗೆ ಪಕ್ಷವನ್ನು ಅಧಿಕಾರಕ್ಕೆ ತಂದ ಸಾಧನೆಯನ್ನು ಯೋಗಿ ಆದಿತ್ಯನಾಥ್ ಮಾಡಿದ್ದಾರೆ. ಈ ಬಾರಿಯ ಬಜೆಟ್ ಮೊತ್ತವೂ ದಾಖಲೆ ಪ್ರಮಾಣದಲ್ಲಿದೆ. ಪ್ರಧಾನಿ ಮೋದಿ ಅವರ ಆಶಯಕ್ಕೆ ಉತ್ತರ ಪ್ರದೇಶವನ್ನು ರೂಪಿಸುವುದಾಗಿ ಯೋಗಿ ಆದಿತ್ಯನಾಥ್ ಆಶಯ ವ್ಯಕ್ತಪಡಿಸಿದ್ದಾರೆ.

ಬಜೆಟ್ ಭಾಷಣಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಇದು ಸಾರ್ವಜನಿಕರ ಕ್ಷೇಮಕ್ಕಾಗಿ ರೂಪಿಸಿರುವ ಬಜೆಟ್. ಉತ್ತರ ಪ್ರದೇಶದ ಸರ್ವಾಂಗೀಣ ಪ್ರಗತಿ ನಮ್ಮ ಗುರಿ’ ಎಂದು ಹೇಳಿದ್ದರು. ವಿಧಾನಸಭೆಯಲ್ಲಿ ಮಂಡಿಸುವ ಮೊದಲು ಮುಖ್ಯಮಂತ್ರಿ ಅಧಿಕೃತ ನಿವಾಸದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಾಯಿತು.

‘ನಮ್ಮದು ಸಾರ್ವಜನಿಕ ಪ್ರಗತಿಗಾಗಿ ರೂಪಿಸಿದ ಬಜೆಟ್. ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಡಬಲ್ ಎಂಜಿನ್ ಸರ್ಕಾರದ ವೇಗವನ್ನು ಇದು ರಾಜ್ಯದ ಅಭಿವೃದ್ಧಿಗೆ ನೀಡಲಿದೆ. ಉತ್ತರ ಪ್ರದೇಶವು ದೇಶದ ಪ್ರಗತಿಯ ಎಂಜಿನ್ ಆಗಲಿದೆ’ ಎಂದು ಯೋಗಿ ಆದಿತ್ಯನಾಥ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು.

ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಮಾತನಾಡಿ, ‘ಬಿಜೆಪಿಯು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಸಾಕಾರಗೊಳಿಸುವಂತೆ ಈ ಬಜೆಟ್ ರೂಪಿಸಲಾಗಿದೆ’ ಎಂದು ಹೇಳಿದರು. ಕಳೆದ ಆರ್ಥಿಕ ವರ್ಷದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ₹ 5,50,270.78 ಕೋಟಿ ಮೊತ್ತದ ಬಜೆಟ್ ಮಂಡಿಸಿತ್ತು.

ಉತ್ತರ ಪ್ರದೇಶದಲ್ಲಿ ಇಂದು ಮಂಡನೆಯಾದ ಬಜೆಟ್​ನ 10 ಮುಖ್ಯ ಅಂಶಗಳಿವು…

  1. ವಿಮಾನ ನಿಲ್ದಾಣಗಳು ಮತ್ತು ಐತಿಹಾಸಿಕ ಮಹತ್ವದ ಸ್ಮಾರಕಗಳ ರಕ್ಷಣೆಗಾಗಿ ವಿಶೇಷ ರಕ್ಷಣಾ ಪಡೆಯನ್ನು ರೂಪಿಸಲು ₹ 276.66 ಕೋಟಿ ಮೀಸಲಿಡಲಾಗಿದೆ.
  2. ಪೊಲೀಸ್ ಇಲಾಖೆಯ ಸಂಕಷ್ಟ ನಿರ್ವಹಣಾ ವ್ಯವಸ್ಥೆಯ (Police Emergency Management System) 2ನೇ ಹಂತವು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿದೆ. ಇದಕ್ಕಾಗಿ ₹ 730.88 ಕೋಟಿ ಮೀಸಲಿಡಲಾಗಿದೆ.
  3. ಉತ್ತರ ಪ್ರದೇಶದಲ್ಲಿ ಮಹಿಳೆಯರ ರಕ್ಷಣೆಗಾಗಿ ₹ 523.34 ಕೋಟಿ ಮೀಸಲಿಡಲಾಗಿದೆ.
  4. ದೇಶವನ್ನು 5 ಶತಕೋಟಿ ಡಾಲರ್ ಆರ್ಥಿಕತೆಯಾಗಿ ರೂಪಿಸಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶವು 1 ಶತಕೋಟಿ ಡಾಲರ್ ಆರ್ಥಿಕತೆಯಾಗುವ ಗುರಿ ಹೊಂದಿದೆ.
  5. ಮುಂದಿನ ಐದು ವರ್ಷಗಳಲ್ಲಿ ಉತ್ತರ ಪ್ರದೇಶ ಸರ್ಕಾರವು 2 ಕೋಟಿ ಸ್ಮಾರ್ಟ್​ಫೋನ್ ಅಥವಾ ಟ್ಯಾಬ್ಲೆಟ್​ಗಳನ್ನು ವಿತರಿಸಲಿದೆ.
  6. ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ‘ಯುಪಿ ಸಿಎಂ ಬಾಲ್ ಸೇವಾ ಯೋಜನೆಯಡಿಯಲ್ಲಿ ₹ 2,500 ನೀಡಲಿದೆ.
  7. ಉತ್ತರ ಪ್ರದೇಶದಲ್ಲಿ ಸ್ಟಾರ್ಟ್​ಅಪ್​ಗಳಿಗೆ ಪ್ರೋತ್ಸಾಹ ನೀಡಲೆಂದು 100 ಇನ್​ಕ್ಯುಬೇಟರ್​ಗಳನ್ನು ಆರಂಭಿಸಲಾಗುವುದು. 10,000 ಸ್ಟಾರ್ಟ್​ಅಪ್​ಗಳನ್ನು ಆರಂಭಿಸುವ ಗುರಿ ಇರಿಸಿಕೊಳ್ಳಲಾಗಿದೆ.
  8. ಮೆಡಿಕಲ್ ಸೀಟ್​ಗಳ ಸಂಖ್ಯೆ ಹೆಚ್ಚಿಸಲು ₹ 500 ಕೋಟಿ ಮೀಸಲಿಡಲಾಗಿದೆ.
  9. ಮೀರತ್, ಬಹ್ರೈಚ್, ಕಾನ್​ಪುರ, ಅಝಂಗಡ ಮತ್ತು ರಾಮ್​ಪುರಗಳಲ್ಲಿ ಎಟಿಎಸ್ ಕೇಂದ್ರಗಳನ್ನು ಆರಂಭಿಸಲಾಗುವುದು.
  10. ಲಖನೌ ನಗರದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಉತ್ತರ ಪ್ರದೇಶ ವಿಧಿವಿಜ್ಞಾನ ಸಂಸ್ಥೆ ಆರಂಭಿಸಲಾಗುವುದು.

 ಈ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:25 pm, Thu, 26 May 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್