ಲಖನೌ: ಉತ್ತರ ಪ್ರದೇಶ ಸರ್ಕಾರವು (Uttar Pradesh Govt) 2022-23ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಿದೆ. ಯೋಗಿ ಆದಿತ್ಯನಾಥ್ ಭಾರೀ ಬಹುಮತದೊಂದಿಗೆ 2ನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಮಂಡಿಸಿದ ಮೊದಲ ಬಜೆಟ್ ಇದು. 37 ವರ್ಷಗಳ ನಂತರ ಸತತ 2ನೇ ಅವಧಿಗೆ ಪಕ್ಷವನ್ನು ಅಧಿಕಾರಕ್ಕೆ ತಂದ ಸಾಧನೆಯನ್ನು ಯೋಗಿ ಆದಿತ್ಯನಾಥ್ ಮಾಡಿದ್ದಾರೆ. ಈ ಬಾರಿಯ ಬಜೆಟ್ ಮೊತ್ತವೂ ದಾಖಲೆ ಪ್ರಮಾಣದಲ್ಲಿದೆ. ಪ್ರಧಾನಿ ಮೋದಿ ಅವರ ಆಶಯಕ್ಕೆ ಉತ್ತರ ಪ್ರದೇಶವನ್ನು ರೂಪಿಸುವುದಾಗಿ ಯೋಗಿ ಆದಿತ್ಯನಾಥ್ ಆಶಯ ವ್ಯಕ್ತಪಡಿಸಿದ್ದಾರೆ.
ಬಜೆಟ್ ಭಾಷಣಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಇದು ಸಾರ್ವಜನಿಕರ ಕ್ಷೇಮಕ್ಕಾಗಿ ರೂಪಿಸಿರುವ ಬಜೆಟ್. ಉತ್ತರ ಪ್ರದೇಶದ ಸರ್ವಾಂಗೀಣ ಪ್ರಗತಿ ನಮ್ಮ ಗುರಿ’ ಎಂದು ಹೇಳಿದ್ದರು. ವಿಧಾನಸಭೆಯಲ್ಲಿ ಮಂಡಿಸುವ ಮೊದಲು ಮುಖ್ಯಮಂತ್ರಿ ಅಧಿಕೃತ ನಿವಾಸದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ಗೆ ಅನುಮೋದನೆ ಪಡೆದುಕೊಳ್ಳಲಾಯಿತು.
‘ನಮ್ಮದು ಸಾರ್ವಜನಿಕ ಪ್ರಗತಿಗಾಗಿ ರೂಪಿಸಿದ ಬಜೆಟ್. ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಡಬಲ್ ಎಂಜಿನ್ ಸರ್ಕಾರದ ವೇಗವನ್ನು ಇದು ರಾಜ್ಯದ ಅಭಿವೃದ್ಧಿಗೆ ನೀಡಲಿದೆ. ಉತ್ತರ ಪ್ರದೇಶವು ದೇಶದ ಪ್ರಗತಿಯ ಎಂಜಿನ್ ಆಗಲಿದೆ’ ಎಂದು ಯೋಗಿ ಆದಿತ್ಯನಾಥ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು.
ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಮಾತನಾಡಿ, ‘ಬಿಜೆಪಿಯು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಸಾಕಾರಗೊಳಿಸುವಂತೆ ಈ ಬಜೆಟ್ ರೂಪಿಸಲಾಗಿದೆ’ ಎಂದು ಹೇಳಿದರು. ಕಳೆದ ಆರ್ಥಿಕ ವರ್ಷದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ₹ 5,50,270.78 ಕೋಟಿ ಮೊತ್ತದ ಬಜೆಟ್ ಮಂಡಿಸಿತ್ತು.
ಉತ್ತರ ಪ್ರದೇಶದಲ್ಲಿ ಇಂದು ಮಂಡನೆಯಾದ ಬಜೆಟ್ನ 10 ಮುಖ್ಯ ಅಂಶಗಳಿವು…
ಈ ಸುದ್ದಿಯನ್ನು ಇಂಗ್ಲಿಷ್ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:25 pm, Thu, 26 May 22