ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೊಸ ಕಾನೂನು ತರಲು ಉತ್ತರ ಪ್ರದೇಶ ಸರ್ಕಾರ ನಿರ್ಧಾರ

ಪ್ರಮುಖ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಅದರ ಹಿನ್ನಲೆಯಲ್ಲೇ ಪರೀಕ್ಷೆ ರದ್ದು ಈ ಎಲ್ಲ ಗದ್ದಲಗಳ ನಡುವೆಯೇ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ರಾಜ್ಯದಲ್ಲಿ ಸಾರ್ವಜನಿಕ ಪರೀಕ್ಷೆಗಳ ಸುಗ್ರೀವಾಜ್ಞೆ 2024 ಅನ್ನು ಪರಿಚಯಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ತೀರ್ಮಾನಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೊಸ ಕಾನೂನು ತರಲು ಉತ್ತರ ಪ್ರದೇಶ ಸರ್ಕಾರ ನಿರ್ಧಾರ
ಯೋಗಿ ಆದಿತ್ಯನಾಥ್
Follow us
ರಶ್ಮಿ ಕಲ್ಲಕಟ್ಟ
|

Updated on:Jun 25, 2024 | 7:09 PM

ಲಕ್ನೋ ಜೂನ್ 25: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  (Yogi Adityanath)ನೇತೃತ್ವದ ಸರ್ಕಾರವು ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಮತ್ತು RO-ARO ಪರೀಕ್ಷೆಯಲ್ಲಿ ಇತ್ತೀಚಿನ ಪ್ರಶ್ನೆ ಪತ್ರಿಕೆ ಸೋರಿಕೆಯ (Paper leaks) ನಂತರ ಉತ್ತರ ಪ್ರದೇಶ (Uttar pradesh), ರಾಜ್ಯದಲ್ಲಿ ಸಾರ್ವಜನಿಕ ಪರೀಕ್ಷೆಗಳ ಸುಗ್ರೀವಾಜ್ಞೆ 2024 ಅನ್ನು ಪರಿಚಯಿಸಲು ಸಿದ್ಧವಾಗಿದೆ. ಪರೀಕ್ಷಾ ಅಕ್ರಮದಲ್ಲಿ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ಮತ್ತು ₹ 1 ಕೋಟಿ ವರೆಗೆ ದಂಡ ವಿಧಿಸುವ ನಿಬಂಧನೆಗಳನ್ನು ಒಳಗೊಂಡಿರುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಯುಪಿ ಪೊಲೀಸ್‌ನ 60,244 ಕಾನ್‌ಸ್ಟೆಬಲ್‌ಗಳ ಹುದ್ದೆಗಳ ಅತಿ ದೊಡ್ಡ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಫೆಬ್ರವರಿಯಲ್ಲಿ ಸೋರಿಕೆಯಾಗಿದ್ದವು. ನಂತರ, ಪರಿಶೀಲನಾ ಅಧಿಕಾರಿಗಳು ಮತ್ತು ಸಹಾಯಕ ಪರಿಶೀಲನಾ ಅಧಿಕಾರಿಗಳಿಗೆ (ROs/AROs) UPPSC ಪೂರ್ವಭಾವಿ ನೇಮಕಾತಿ ಪರೀಕ್ಷೆಯಲ್ಲಿಯೂ ಮಾರ್ಚ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ ರದ್ದುಗೊಳಿಸಲಾಯಿತು.

ಸುಗ್ರೀವಾಜ್ಞೆಯ ಪ್ರಮುಖ ನಿಬಂಧನೆಗಳು ಯಾವುವು?

  • ಸುಗ್ರೀವಾಜ್ಞೆಯು ಸಾರ್ವಜನಿಕ ಸೇವಾ ನೇಮಕಾತಿ ಪರೀಕ್ಷೆಗಳು, ಬಡ್ತಿ ಪರೀಕ್ಷೆಗಳು ಮತ್ತು ಪದವಿಗಳು, ಡಿಪ್ಲೋಮಾಗಳು ಮತ್ತು ಪ್ರಮಾಣಪತ್ರಗಳಿಗೆ ಪ್ರವೇಶ ಪರೀಕ್ಷೆಗಳನ್ನು ಒಳಗೊಂಡಿದೆ.
  • ನಕಲಿ ಪ್ರಶ್ನೆಪತ್ರಿಕೆಗಳನ್ನು ವಿತರಿಸುವುದು ಮತ್ತು ನಕಲಿ ಉದ್ಯೋಗ ವೆಬ್‌ಸೈಟ್‌ಗಳನ್ನು ರಚಿಸುವುದು ಮುಂತಾದ ಅಪರಾಧಗಳು ಶಿಕ್ಷಾರ್ಹವಾಗಿರುತ್ತವೆ. ಉಲ್ಲಂಘಿಸುವವರಿಗೆ ಎರಡು ವರ್ಷದಿಂದ ಜೀವಾವಧಿವರೆಗೆ ಜೈಲು ಶಿಕ್ಷೆ ಮತ್ತು ₹ 1 ಕೋಟಿ ವರೆಗೆ ದಂಡ ವಿಧಿಸಬಹುದು ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
  • ಪರೀಕ್ಷೆಯಲ್ಲಿ ಅಡಚಣೆ ಉಂಟಾದರೆ, ಸಾಲ್ವರ್ ಗ್ಯಾಂಗ್‌ಗಳಿಂದ ಹಣಕಾಸಿನ ನಷ್ಟವನ್ನು ಮರುಪಡೆಯಲು ಮತ್ತು ಶಾಶ್ವತವಾಗಿ ಒಳಗೊಂಡಿರುವ ಕಂಪನಿಗಳು ಮತ್ತು ಸೇವಾ ಪೂರೈಕೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸುಗ್ರೀವಾಜ್ಞೆ ಅನುಮತಿಸುತ್ತದೆ. ಕಾನೂನು ಕ್ರಿಮಿನಲ್ ಚಟುವಟಿಕೆ ನಡೆದರೆ ತಪ್ಪಿತಸ್ಥರ ಆಸ್ತಿ ವಶಪಡಿಸಲು ಅನುಮತಿಸುತ್ತದೆ ಮತ್ತು ಎಲ್ಲಾ ಅಪರಾಧಗಳನ್ನು ಸೆಷನ್ಸ್ ನ್ಯಾಯಾಲಯದಿಂದ ಗುರುತಿಸಬಹುದಾದ, ಜಾಮೀನು ರಹಿತ ಮತ್ತು ವಿಚಾರಣೆಗೆ ಒಳಪಡಿಸುತ್ತದೆ. ಜಾಮೀನಿನ ಬಗ್ಗೆ ಕಟ್ಟುನಿಟ್ಟಿನ ನಿಬಂಧನೆಗಳನ್ನು ಸಹ ವಿವರಿಸಲಾಗಿದೆ.
  • ಯುಪಿ ವಿಧಾನಸಭೆಯು ಅಧಿವೇಶನದಲ್ಲಿಲ್ಲದ ಕಾರಣ, ಈ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸರ್ಕಾರವು ಸುಗ್ರೀವಾಜ್ಞೆಯ ಮಾರ್ಗವನ್ನು ಆರಿಸಿಕೊಂಡಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ನಡುವೆಯೇ ಸುಗ್ರೀವಾಜ್ಞೆ

ಭಾರತದಾದ್ಯಂತ ಹಲವಾರು ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳು ಪರಿಶೀಲನೆಗೆ ಒಳಪಟ್ಟಿರುವ ಸಮಯದಲ್ಲಿ ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಅನಿಶ್ಚಿತತೆಯನ್ನು ಉಂಟುಮಾಡುತ್ತದೆ.

ಇದನ್ನೂ ಓದಿ: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ

ವಿವಾದದಲ್ಲಿರುವ ಪರೀಕ್ಷೆಗಳು

1. NEET-UG 2024: ಆಪಾದಿತ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ಸೇರಿದಂತೆ NEET-UG 2024 ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ ಲೋಪಗಳಿಗಾಗಿ NTAಯನ್ನು ಪ್ರಶ್ನಿಸಲಾಗಿದೆ

2. UGC-NET: ಜೂನ್ 18ರಂದು ನಡೆದ UGC-NET ಪರೀಕ್ಷೆಯನ್ನು ರದ್ದುಗೊಳಿಸಿದ್ದು ತನಿಖೆಯನ್ನು CBI ಗೆ ಹಸ್ತಾಂತರಿಸಲಾಯಿತು. ಇದೀಗ ಪರೀಕ್ಷಾ ಪತ್ರಿಕೆಯ ಡಾರ್ಕ್ ನೆಟ್  ಸೋರಿಕೆಯ ತನಿಖೆ ನಡೆಯುತ್ತಿದೆ.

3. CSIR-UGC NET: ವ್ಯವಸ್ಥಾಪನಾ ಸಮಸ್ಯೆಗಳಿಂದಾಗಿ ಜಂಟಿ CSIR-UGC NET ಯ ಜೂನ್ ನಲ್ಲಿ ನಡೆದ ಪರೀಕ್ಷೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

4. NEET-PG: ಜೂನ್ 23 ಕ್ಕೆ ನಿಗದಿಪಡಿಸಲಾಗಿದೆ, NEET-PG ಪ್ರವೇಶ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಯ ಪಾರದರ್ಶಕತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಂದೂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Tue, 25 June 24

ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್