AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಉತ್ತರ ಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ನನಗೆ ಉತ್ತಮ ಆಡಳಿತದಲ್ಲಿ ಮಾರ್ಗದರ್ಶನ ನೀಡಿದ್ದಾರೆ ಎಂದ ಆದಿತ್ಯನಾಥ

''ನನಗೆ 2017 ರಲ್ಲಿ ಆಡಳಿತಾತ್ಮಕ ಅನುಭವ ಇರಲಿಲ್ಲ, ಯುಪಿಯಲ್ಲಿ ಉತ್ತಮ ಆಡಳಿತದ ಬಗ್ಗೆ ಪ್ರಧಾನಿ ಮೋದಿ ನನಗೆ ಮಾರ್ಗದರ್ಶನ ನೀಡಿದರು" ಎಂದಿದ್ದಾರೆ ಯೋಗಿ ಆದಿತ್ಯನಾಥ.

ನಾಳೆ ಉತ್ತರ ಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ನನಗೆ ಉತ್ತಮ ಆಡಳಿತದಲ್ಲಿ ಮಾರ್ಗದರ್ಶನ ನೀಡಿದ್ದಾರೆ ಎಂದ ಆದಿತ್ಯನಾಥ
ಯೋಗಿ ಆದಿತ್ಯನಾಥ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Mar 24, 2022 | 9:57 PM

Share

ಲಖನೌ: ಉತ್ತರ ಪ್ರದೇಶ ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರಾಗಿ ಯೋಗಿ ಆದಿತ್ಯನಾಥ (Yogi Adityanath) ಅವರನ್ನು ಗುರುವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಶುಕ್ರವಾರ ಎರಡನೇ ಬಾರಿಗೆ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸದಾಗಿ ಆಯ್ಕೆಯಾದ ಪಕ್ಷದ ಶಾಸಕರು ಲಖನೌದ ಲೋಕಭವನದಲ್ಲಿ ಭೇಟಿಯಾದರು. ಅಲ್ಲಿ ಪಕ್ಷದ ಹಿರಿಯ ನಾಯಕ ಸುರೇಶ್ ಕುಮಾರ್ ಖನ್ನಾ ಅವರು ಆದಿತ್ಯನಾಥ ಅವರ ಹೆಸರನ್ನು ಪ್ರಸ್ತಾಪಿಸಿದರು. ಆದಿತ್ಯನಾಥ ಅವರು ರಾಜ್ಯದಲ್ಲಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ನಂತರ ಅಧಿಕಾರಕ್ಕೆ ಮರಳಿದ ಮೊದಲ ಯುಪಿ ಸಿಎಂ ಆಗಿದ್ದಾರೆ. ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ ಉತ್ತರಪ್ರದೇಶದಲ್ಲಿ ಉತ್ತಮ ಆಡಳಿತದ ಬಗ್ಗೆ ನನಗೆ ಮಾರ್ಗದರ್ಶನ ನೀಡಿದವರು ಪ್ರಧಾನಿ ನರೇಂದ್ರ ಮೋದಿ. “ನನಗೆ 2017 ರಲ್ಲಿ ಆಡಳಿತಾತ್ಮಕ ಅನುಭವ ಇರಲಿಲ್ಲ, ಯುಪಿಯಲ್ಲಿ ಉತ್ತಮ ಆಡಳಿತದ ಬಗ್ಗೆ ಪ್ರಧಾನಿ ಮೋದಿ ನನಗೆ ಮಾರ್ಗದರ್ಶನ ನೀಡಿದರು” ಎಂದಿದ್ದಾರೆ. ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವು ವಿರೋಧದ ಪ್ರಚಾರದ ನಡುವೆಯೂ ಪ್ರಭಾವ ಬೀರಿತು ಎಂದು ಹೇಳಿದ ಅವರು, ಈಗ ಉತ್ತರ ಪ್ರದೇಶದಲ್ಲಿ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬಹುದು ಎಂದು ಹೇಳಿದರು.  ಇತ್ತೀಚೆಗೆ ಮುಕ್ತಾಯಗೊಂಡ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ಉಲ್ಲೇಖಿಸಿದ ಆದಿತ್ಯನಾಥ, ಜನರು ಜಾತಿವಾದವನ್ನು ಮೀರಿ ಬೆಳೆದಿದ್ದಾರೆ.ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತಕ್ಕೆ ತಮ್ಮ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕೇಂದ್ರದ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುತ್ತಿದ್ದ ತಡೆಗೋಡೆ ಕಳೆದ ಐದು ವರ್ಷಗಳಲ್ಲಿ ಮುರಿದುಹೋಗಿದೆ. “ಬಡವರಿಗಾಗಿಯೂ ಮನೆ ನಿರ್ಮಿಸಬಹುದು ಎಂದು ಜನರು ಮೊದಲ ಬಾರಿಗೆ ಭಾವಿಸಿದರು. ಮೊದಲ ಬಾರಿಗೆ ನೇರವಾಗಿ ಬಡವರ ಖಾತೆಗೆ ಹಣ ಹೋಗುತ್ತದೆ ಎಂದು ತಿಳಿಯಿತು ಎಂದು ಎಂದು ಆದಿತ್ಯನಾಥ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಆದಿತ್ಯನಾಥ ಅವರ ಪ್ರಮಾಣ ವಚನ ಸಮಾರಂಭವು ಶುಕ್ರವಾರ ಪ್ರಧಾನಿ ಮೋದಿ ಮತ್ತು ಬಿಜೆಪಿಯ ಉನ್ನತ ನಾಯಕರ ಸಮ್ಮುಖದಲ್ಲಿ ನಡೆಯಲಿದೆ.

ಇದನ್ನೂ ಓದಿ: ಕಾಶ್ಮೀರ್ ಫೈಲ್ಸ್​​​ ತೆರಿಗೆ ಮುಕ್ತ ಮಾಡುವುದಕ್ಕಿಂತ ಯೂಟ್ಯೂಬ್​​ನಲ್ಲೇ ಹಾಕಿಬಿಡಿ, ಎಲ್ಲರೂ ನೋಡಲಿ: ಅರವಿಂದ ಕೇಜ್ರಿವಾಲ್

Published On - 9:46 pm, Thu, 24 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ