Yogi Adityanath: ಇಂದು ಪ್ರಮಾಣವಚನ ಸ್ವೀಕರಿಸಲಿರುವ ಯೋಗಿ; ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಭಾಗಿ

PM Narendra Modi: ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಧಾನಿ ಮೋದಿ ಉಪಸ್ಥಿತರಿರಲಿದ್ದು, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

Yogi Adityanath: ಇಂದು ಪ್ರಮಾಣವಚನ ಸ್ವೀಕರಿಸಲಿರುವ ಯೋಗಿ; ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಭಾಗಿ
ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ
Follow us
TV9 Web
| Updated By: shivaprasad.hs

Updated on:Mar 25, 2022 | 8:48 AM

ಲಖನೌ: ಉತ್ತರ ಪ್ರದೇಶ ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರಾಗಿ ಯೋಗಿ ಆದಿತ್ಯನಾಥ (Yogi Adityanath) ಅವರನ್ನು ಗುರುವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಇಂದು (ಶುಕ್ರವಾರ, ಮಾ.25) ಎರಡನೇ ಬಾರಿಗೆ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಅದ್ದೂರಿಯಾಗಿ ಸಮಾರಂಭ ನಡೆಯಲಿದೆ. ಸುಮಾರು ಮೂರು ದಶಕಗಳ ನಂತರ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕಾರಕ್ಕೆ ಬಂದ ಅಪರೂಪದ ದಾಖಲೆಯನ್ನು ಬಿಜೆಪಿ ಬರೆದಿದ್ದು, ಪ್ರಮಾಣವಚನ ಸಮಾರಂಭಕ್ಕೆ ಸಾವಿರಾರು ಮಂದಿ ಗಣ್ಯರು ಸಾಕ್ಷಿಯಾಗಲಿದ್ದಾರೆ. ಪೂರ್ಣ ಐದು ವರ್ಷಗಳ ಸಿಎಂ ಆಗಿದ್ದ ನಂತರ ಮತ್ತೆ ಅಧಿಕಾರಕ್ಕೇರಲಿರುವ ಉತ್ತರ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಲಿದ್ದಾರೆ ಯೋಗಿ ಆದಿತ್ಯನಾಥ್. ಪ್ರಮಾಣ ವಚನ ಸಮಾರಂಭವನ್ನು ಶಕ್ತಿ ಪ್ರದರ್ಶನದ ಮಾದರಿಯಲ್ಲಿ ಬಿಜೆಪಿ ನಡೆಸಲಿದ್ದು, ಚುನಾವಣಾ ಫಲಿತಾಂಶ ಪ್ರಕಟಗೊಂಡ ಎರಡು ವಾರಗಳ ನಂತರ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 273 ಸ್ಥಾನಗಳೊಂದಿಗೆ ಭಾರಿ ಬಹುಮತ ಪಡೆದುಕೊಂಡಿತ್ತು.

  1. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿಯ ಹಿರಿಯ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
  2. ಮೂಲಗಳ ಪ್ರಕಾರ, ಲಕ್ನೋದಲ್ಲಿ ಸುಮಾರು 85 ಸಾವಿರ ಜನರು ಈ ಪ್ರಮಾಣ ವಚನ ಕಾರ್ಯಕ್ರಮದ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಭವ್ಯವಾದ ವೇದಿಕೆಯನ್ನು ನಿರ್ಮಿಸಲಾಗಿದ್ದು, ‘ನ್ಯೂ ಯುಪಿ ಆಫ್ ನ್ಯೂ ಇಂಡಿಯಾ’ ಎಂಬ ಘೋಷಣೆಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಲಾಗಿದೆ.
  3. ಗುರುವಾರ ಶಾಸಕಾಂಗದ ಪಕ್ಷದ ಸಭೆಯಲ್ಲಿ ಮಾತನಾಡಿದ್ದ ಯೋಗಿ ಆದಿತ್ಯನಾಥ್, ‘‘ಉತ್ತರಪ್ರದೇಶದಲ್ಲಿ ಉತ್ತಮ ಆಡಳಿತದ ಬಗ್ಗೆ ನನಗೆ ಮಾರ್ಗದರ್ಶನ ನೀಡಿದವರು ಪ್ರಧಾನಿ ನರೇಂದ್ರ ಮೋದಿ. ನನಗೆ 2017 ರಲ್ಲಿ ಆಡಳಿತಾತ್ಮಕ ಅನುಭವ ಇರಲಿಲ್ಲ, ಯುಪಿಯಲ್ಲಿ ಉತ್ತಮ ಆಡಳಿತದ ಬಗ್ಗೆ ಪ್ರಧಾನಿ ಮೋದಿ ನನಗೆ ಮಾರ್ಗದರ್ಶನ ನೀಡಿದರು’’ ಎಂದಿದ್ದರು.
  4. ”ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವು ವಿರೋಧದ ಪ್ರಚಾರದ ನಡುವೆಯೂ ಪ್ರಭಾವ ಬೀರಿತು. 2017ರಲ್ಲಿ ಯುಪಿ ಕಲ್ಯಾಣ ಯೋಜನೆಗಳನ್ನು ಬಳಸಿಕೊಳ್ಳುವಲ್ಲಿ ಹಿಂದಿತ್ತು. ಈಗ ಅಗ್ರಸ್ಥಾನದಲ್ಲಿದೆ” ಎಂದು ಆದಿತ್ಯನಾಥ್ ನುಡಿದಿದ್ದರು.
  5. ಯುಪಿಯನ್ನು ನಂಬರ್ 1 ಆರ್ಥಿಕತೆ ಮಾಡಲು ಬಿಜೆಪಿ ಮುಂದಿನ ಐದು ವರ್ಷಗಳನ್ನು ಮೀಸಲಿಡಲಿದೆ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ‘‘ಮುಂದಿನ ಐದು ವರ್ಷಗಳು ಯುಪಿ ವೈಭವವನ್ನು ಮರುಸ್ಥಾಪಿಸುವುದು ಮತ್ತು ಅದನ್ನು ದೇಶದ ನಂಬರ್ ಒನ್ ಆರ್ಥಿಕತೆಯನ್ನಾಗಿ ಮಾಡುವುದು’’ ಎಂದು ಅವರು ಹೇಳಿದ್ದಾರೆ.
  6. ಸಮಾರಂಭದಲ್ಲಿ ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆ ಇದೆ. ಗುಜರಾತ್‌ನ ಭೂಪೇಂದ್ರ ಪಟೇಲ್, ಹರಿಯಾಣದ ಮನೋಹರ್ ಲಾಲ್ ಖಟ್ಟರ್, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕದ ಬಸವರಾಜ ಬೊಮ್ಮಾಯಿ ಮತ್ತು ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಬಿಹಾರ, ನಾಗಾಲ್ಯಾಂಡ್, ಮೇಘಾಲಯಗಳ ಆಡಳಿತಾರೂಢ ಸರ್ಕಾರದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದೆ.
  7. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತು ನಟ ಅನುಪಮ್ ಖೇರ್ ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಕಾರ್ಯಕ್ರಮಕ್ಕೆ ನೋಯ್ಡಾದ ಪ್ರಮುಖ 30 ಜನ ಹೂಡಿಕೆದಾರರನ್ನೂ ಆಹ್ವಾನಿಸಲಾಗಿದೆ.
  8. ಎಸ್​ಪಿ ನಾಯಕ ಅಖಿಲೇಶ್ ಯಾದವ್ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಅವರು 2017ರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಪ್ರಸ್ತುತ ಅಖಿಲೇಶ್ ಯಾದವ್ ಅಜಂಗಢದಿಂದ ಲೋಕಸಭೆಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕರ್ಹಾಲ್ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಇದರಿಂದ ಅವರು ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
  9. ಉತ್ತರ ಪ್ರದೇಶದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಾಗ ಸಂತ-ರಾಜಕಾರಣಿ ಯೋಗಿ ಆದಿತ್ಯನಾಥ್ ಅವರು ಅಚ್ಚರಿಯ ಆಯ್ಕೆಯಾಗಿದ್ದರು. ಐದು ಬಾರಿ ಲೋಕಸಭಾ ಸಂಸದರಾಗಿದ್ದ ಅವರು ಇದೀಗ ಯುಪಿಯಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
  10. ಇಂದು ಸಂಜೆ 4 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ:

ಊರ ಜಾತ್ರೆಯಲ್ಲಿ ಸಿದ್ದರಾಮಯ್ಯ ಸಖತ್ ಸ್ಟೆಪ್: ಅಪ್ಪನ ಡಾನ್ಸ್ ನೋಡಿ ಮಗನಿಗೆ ಖುಷಿ

Vladimir Putin: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಸ್ತಿ 1526064000000 ಕೋಟಿ ರೂಪಾಯಿಯಂತೆ ಹೌದಾ?

Published On - 8:47 am, Fri, 25 March 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ