AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಎಚ್ಚರಿಕೆ ನೀಡಿದ ಯೋಗಿ ಆದಿತ್ಯನಾಥ್

ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಯಾರಾದರೂ ಮಾಡಿದವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ನಗರದಲ್ಲಿ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿಯ ದುಪಟ್ಟಾವನ್ನು ಎಳೆದಿದ್ದರು, ಆಗ ಬಾಲಕಿ ಕೆಳಗೆ ಬಿದ್ದಾಗ ಮತ್ತೋರ್ವ ಬೈಕ್​ನ್ನು ಆಕೆಯ ಮೈಮೇಲೆ ಹತ್ತಿಸಿ ಕೊಲೆ ಮಾಡಿದ್ದ.

ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಎಚ್ಚರಿಕೆ ನೀಡಿದ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್Image Credit source: The Economic Times
ನಯನಾ ರಾಜೀವ್
|

Updated on: Sep 18, 2023 | 9:51 AM

Share

ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಯಾರಾದರೂ ಮಾಡಿದವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ನಗರದಲ್ಲಿ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿಯ ದುಪಟ್ಟಾವನ್ನು ಎಳೆದಿದ್ದರು, ಆಗ ಬಾಲಕಿ ಕೆಳಗೆ ಬಿದ್ದಾಗ ಮತ್ತೋರ್ವ ಬೈಕ್​ನ್ನು ಆಕೆಯ ಮೈಮೇಲೆ ಹತ್ತಿಸಿ ಕೊಲೆ ಮಾಡಿದ್ದ.

ಶುಕ್ರವಾರ ಘಟನೆ ನಡೆದಿದೆ, ಶನಿವಾರ ರಾತ್ರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 354 ಜೊತೆಗೆ POCSO ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಗಳನ್ನು ಸೆಹಬಾಜ್ ಮತ್ತು ಆತನ ಸಹೋದರ ಅರ್ಬಾಜ್ ಎಂದು ಗುರುತಿಸಲಾಗಿದೆ. ಭಾನುವಾರ ಪರಾರಿಯಾಗಲು ಪ್ರಯತ್ನಿಸುವಾಗ ಮತ್ತೊಬ್ಬ ಆರೋಪಿಯ ಕಾಲು ಮುರಿತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂಥ ಅಪರಾಧ ಕೃತ್ಯ ಎಸಗಿದರೆ ಯಮರಾಜ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ.

ಮತ್ತಷ್ಟು ಓದಿ: ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರ ಗುಂಡೇಟು

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಲವಾದ ಕಾನೂನು ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಆದಿತ್ಯನಾಥ್ ಎತ್ತಿ ಹಿಡಿದರು. ವ್ಯವಸ್ಥೆಗೆ ಅಡ್ಡಿಪಡಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಒತ್ತಿ ಹೇಳಿದರು.

ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯು ಆದಿತ್ಯನಾಥ್ ಸರ್ಕಾರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸುತ್ತಿರುವುದನ್ನು ತನ್ನ ಸಾಧನೆಗಳಲ್ಲಿ ಒಂದು ಎಂದು ಆಗಾಗ ಹೇಳಿಕೊಳ್ಳುತ್ತಿರುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು