ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಯಾರಾದರೂ ಮಾಡಿದವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ನಗರದಲ್ಲಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿಯ ದುಪಟ್ಟಾವನ್ನು ಎಳೆದಿದ್ದರು, ಆಗ ಬಾಲಕಿ ಕೆಳಗೆ ಬಿದ್ದಾಗ ಮತ್ತೋರ್ವ ಬೈಕ್ನ್ನು ಆಕೆಯ ಮೈಮೇಲೆ ಹತ್ತಿಸಿ ಕೊಲೆ ಮಾಡಿದ್ದ.
ಶುಕ್ರವಾರ ಘಟನೆ ನಡೆದಿದೆ, ಶನಿವಾರ ರಾತ್ರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 354 ಜೊತೆಗೆ POCSO ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಆರೋಪಿಗಳನ್ನು ಸೆಹಬಾಜ್ ಮತ್ತು ಆತನ ಸಹೋದರ ಅರ್ಬಾಜ್ ಎಂದು ಗುರುತಿಸಲಾಗಿದೆ. ಭಾನುವಾರ ಪರಾರಿಯಾಗಲು ಪ್ರಯತ್ನಿಸುವಾಗ ಮತ್ತೊಬ್ಬ ಆರೋಪಿಯ ಕಾಲು ಮುರಿತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂಥ ಅಪರಾಧ ಕೃತ್ಯ ಎಸಗಿದರೆ ಯಮರಾಜ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ.
ಮತ್ತಷ್ಟು ಓದಿ: ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರ ಗುಂಡೇಟು
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಲವಾದ ಕಾನೂನು ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಆದಿತ್ಯನಾಥ್ ಎತ್ತಿ ಹಿಡಿದರು. ವ್ಯವಸ್ಥೆಗೆ ಅಡ್ಡಿಪಡಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಒತ್ತಿ ಹೇಳಿದರು.
ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯು ಆದಿತ್ಯನಾಥ್ ಸರ್ಕಾರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸುತ್ತಿರುವುದನ್ನು ತನ್ನ ಸಾಧನೆಗಳಲ್ಲಿ ಒಂದು ಎಂದು ಆಗಾಗ ಹೇಳಿಕೊಳ್ಳುತ್ತಿರುತ್ತಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ