ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆಗೆ ಅವಕಾಶ ನೀಡುತ್ತೆ: ಯೋಗಿ ಆದಿತ್ಯನಾಥ್

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆ ಮಾಡಲು ಅವಕಾಶ ನೀಡುತ್ತದೆ ಎಂದು ಕಾಂಗ್ರೆಸ್​ ಹೇಳಿದೆ.

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆಗೆ ಅವಕಾಶ ನೀಡುತ್ತೆ: ಯೋಗಿ ಆದಿತ್ಯನಾಥ್
Follow us
ನಯನಾ ರಾಜೀವ್
|

Updated on: Apr 28, 2024 | 11:55 AM

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ತಿನ್ನುವ ಹಕ್ಕನ್ನು ನೀಡುತ್ತದೆ ಇದು ಗೋಹತ್ಯೆಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಯೋಗಿ ಆದಿತ್ಯನಾಥ್(Yogi Adityanath) ಹೇಳಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ, ಹಿಂದೂ ಧರ್ಮದಲ್ಲಿ ಗೋವನ್ನು ತಾಯಿಯಂತೆ ಪೂಜಿಸಲಾಗುತ್ತದೆ. ನಾಚಿಕೆ ಇಲ್ಲದ ಜನರು ಗೋಮಾಂಸ ತಿನ್ನುವ ಹಕ್ಕಿನ ಭರವಸೆ ನೀಡುತ್ತಾರೆ, ಭಾರತ ಇದಕ್ಕೆ ಎಂದಾದರೂ ಒಪ್ಪಿಕೊಳ್ಳುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಪಸಂಖ್ಯಾತರಿಗೆ ಅವರವರ ಇಷ್ಟದ ಆಹಾರ ತಿನ್ನುವ ಸ್ವಾತಂತ್ರ್ಯ ಕೊಡಬೇಕು ಎಂದರೆ ಗೋಹತ್ಯೆಗೆ ಅವಕಾಶ ಕೊಡುವ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ದೇಶದಲ್ಲಿ ಹಿಂದೂ ಸಮುದಾಯವು ಗೋಮಾಂಸವನ್ನು ಸಂಪೂರ್ಣವಾಗಿ ತ್ಯಜಿಸುತ್ತದೆ, ಏಕೆಂದರೆ ಅವರು ಗೋವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಈ ನಿಟ್ಟಿನಲ್ಲಿ ಮುಸ್ಲಿಮರಿಗೆ ವಿನಾಯಿತಿ ನೀಡುವ ಕಾಂಗ್ರೆಸ್ನ ಪ್ರಯತ್ನವು ಎಲ್ಲರಿಗೂ ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದರು.

ಉತ್ತರ ಪ್ರದೇಶ ಈಗಾಗಲೇ ಗೋಹತ್ಯೆ ವಿರುದ್ಧ ಕಠಿಣ ಕಾನೂನುಗಳನ್ನು ಹೊಂದಿದ್ದು, 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದವರೆಗೆ ದಂಡ ವಿಧಿಸುವ ಅವಕಾಶವನ್ನು ಹೊಂದಿದೆ. ಉತ್ತರ ಪ್ರದೇಶ ಸರ್ಕಾರವು 2020 ರಲ್ಲಿ ಗೋಹತ್ಯೆ ಕುರಿತು ಸುಗ್ರೀವಾಜ್ಞೆಯನ್ನು ಜಾರಿಗೊಳಿಸುವ ಮೂಲಕ ಕಾನೂನಾಗಿ ರೂಪಿಸಿತು.

ಮತ್ತಷ್ಟು ಓದಿ: ಯೋಗಿ ಆದಿತ್ಯನಾಥ್ ದೇಶದ ಎರಡನೇ ಜನಪ್ರಿಯ ಮುಖ್ಯಮಂತ್ರಿ, ಮೊದಲನೆಯವರು ಯಾರು?

2020 ರಲ್ಲಿ, ಯೋಗಿ ಸರ್ಕಾರವು ಸುಗ್ರೀವಾಜ್ಞೆಯನ್ನು ಪ್ರಕಟಿಸಿತು ಮತ್ತು ನಂತರ ಅದನ್ನು ರಾಜ್ಯದಲ್ಲಿ ಜಾರಿಗೆ ತರಲು ಕಾನೂನನ್ನು ಜಾರಿಗೊಳಿಸಿತು. ಯುಪಿಎ ಸರ್ಕಾರದ ಅವಧಿಯಲ್ಲಿ 2004ರಿಂದ 2014ರವರೆಗೆ ಕಾಂಗ್ರೆಸ್​ ಇಂತಹ ಪ್ರಯತ್ನಗಳನ್ನು ಮಾಡಿದೆ. ಕರ್ನಾಟಕದಲ್ಲಿ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಮೀಸಲಾತಿಯಲ್ಲಿ ಮುಸ್ಲಿಮರಿಗೆ ಕೋಟಾ ನೀಡಲು ಕಾಂಗ್ರೆಸ್​ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಸಾಚಾರ್ ಸಮಿತಿಯ ಶಿಫಾರಸುಗಳನ್ನು ಉಲ್ಲೇಕಿಸಿ ಮಾತನಾಡಿ ಎಸ್​ಸಿ ಎಸ್​ಟಿ ಮತ್ತು ಒಬಿಸಿ ಕೋಟಾಕ್ಕೆ ಶೇ.6ರಷ್ಟು ಮೀಸಲಾತಿ ನೀಡುವ ಮೂಲಕ ಅದನ್ನು ಜಾರಿಗೆ ತರಲು ಹೊರಟಿದೆ ಎಂದಿದ್ದಾರೆ.

ದೇಶದ ಸಂಪನ್ಮೂಲದ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ದೇಶವನ್ನು ಮತ್ತಷ್ಟು ವಿಭಜಿಸಲು ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು. ಭಾರತ್ ಮಾತಾ ಕಿ ಜೈ ಮತ್ತು ವಂದೇ ಮಾತರಂ ಘೋಷಣೆ ಕೂಗಲು ಹಿಂದೇಟು ಹಾಕುವವರಿಗೆ ಮತ ಹಾಕಬಾರದು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ