ಬಿಜೆಪಿ ಮುಸ್ಲಿಮನಿಗೆ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ, ನೀವು ಅದನ್ನು ತಪ್ಪು ಎಂದು ಸಾಬೀತು ಮಾಡಿದಿರಿ: ಪದ್ಮಶ್ರೀ ಪುರಸ್ಕೃತ ಕ್ವಾದ್ರಿ

ನಾನು ಈ ಪ್ರಶಸ್ತಿಯನ್ನು ಪಡೆಯಲು 10 ವರ್ಷಗಳಿಂದ ಪ್ರಯತ್ನಿಸಿದೆ. ಬಿಜೆಪಿ ಸರ್ಕಾರ ಬಂದಾಗ, ನಾನು ಈ ಪ್ರಶಸ್ತಿಯನ್ನು ಪಡೆಯುವುದಿಲ್ಲ ಎಂದು ಭಾವಿಸಿದ್ದೆ, ಏಕೆಂದರೆ ಬಿಜೆಪಿ ಎಂದಿಗೂ ಮುಸ್ಲಿಮರಿಗೆ ಏನನ್ನೂ ನೀಡುವುದಿಲ್ಲ, ಆದರೆ ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕ ಪ್ರಧಾನಿ ಮೋದಿ ಆ ಭಾವನೆ ತಪ್ಪು ಎಂದು ಸಾಬೀತುಪಡಿಸಿದರು ಎಂದ ಕ್ವಾದ್ರಿ.

ಬಿಜೆಪಿ ಮುಸ್ಲಿಮನಿಗೆ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ, ನೀವು ಅದನ್ನು ತಪ್ಪು ಎಂದು ಸಾಬೀತು ಮಾಡಿದಿರಿ: ಪದ್ಮಶ್ರೀ ಪುರಸ್ಕೃತ ಕ್ವಾದ್ರಿ
ಕ್ವಾದ್ರಿ ಜತೆ ಮೋದಿ ಮಾತು
Follow us
ರಶ್ಮಿ ಕಲ್ಲಕಟ್ಟ
|

Updated on: Apr 05, 2023 | 10:49 PM

ಕರ್ನಾಟಕದ ಖ್ಯಾತ ಕಲಾವಿದ ರಶೀದ್ ಅಹ್ಮದ್ ಕ್ವಾದ್ರಿ (Rashid Ahmed Quadri)ಅವರು ಬುಧವಾರ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು (Padma Shri) ಸ್ವೀಕರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಧನ್ಯವಾದ ಅರ್ಪಿಸಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೌರವವನ್ನು ಪಡೆಯುವ ಭರವಸೆಯನ್ನು ಕಳೆದುಕೊಂಡಿದ್ದೆ. ಏಕೆಂದರೆ ಬಿಜೆಪಿ ಮುಸ್ಲಿಮನಿಗೆ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ. ಆದರೆ ನೀವು ಅದನ್ನು ತಪ್ಪು ಎಂದು ಸಾಬೀತು ಪಡಿಸಿರುವುದಾಗಿ ಮೋದಿ ಅವರಲ್ಲಿ ಕ್ವಾದ್ರಿ ಹೇಳಿದ್ದಾರೆ. ಸಮಾರಂಭ ಮುಗಿದ ನಂತರ ಪ್ರಧಾನಮಂತ್ರಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.

ಪ್ರಶಸ್ತಿ ಪುರಸ್ಕತರಿಗೆ ಅಭಿನಂದನೆ ಸಲ್ಲಿಸಿ ಮೋದಿ ಹಸ್ತಲಾಘವ ಮಾಡಿದಾಗ, ಕ್ವಾದ್ರಿ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಪದ್ಮ ಪ್ರಶಸ್ತಿಯನ್ನು ನಿರೀಕ್ಷಿಸಿದ್ದೆ, ಆದರೆ ನನಗೆ ಅದು ಸಿಗಲಿಲ್ಲ, ನಿಮ್ಮ ಸರ್ಕಾರ ಬಂದಾಗ, ಈಗ ಬಿಜೆಪಿ ಸರ್ಕಾರ ನನಗೆ ಯಾವುದೇ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ. ಆದರೆ ನೀವು ಅದನ್ನು ತಪ್ಪು ಎಂದು ಸಾಬೀತುಪಡಿಸಿದ್ದೀರಿ. ನಾನು ನಿಮಗೆ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಹೀಗೆ ಹೇಳಿದ ಕೂಡಲೇ ಮೋದಿ ನಮಸ್ಕಾರ ಮಾಡಿ ಮುಗುಳ್ನಕ್ಕು ಮುಂದೆ ಸಾಗಿದ್ದಾರೆ.

ನಾನು ಈ ಪ್ರಶಸ್ತಿಯನ್ನು ಪಡೆಯಲು 10 ವರ್ಷಗಳಿಂದ ಪ್ರಯತ್ನಿಸಿದೆ. ಬಿಜೆಪಿ ಸರ್ಕಾರ ಬಂದಾಗ, ನಾನು ಈ ಪ್ರಶಸ್ತಿಯನ್ನು ಪಡೆಯುವುದಿಲ್ಲ ಎಂದು ಭಾವಿಸಿದ್ದೆ, ಏಕೆಂದರೆ ಬಿಜೆಪಿ ಎಂದಿಗೂ ಮುಸ್ಲಿಮರಿಗೆ ಏನನ್ನೂ ನೀಡುವುದಿಲ್ಲ, ಆದರೆ ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕ ಪ್ರಧಾನಿ ಮೋದಿ ಆ ಭಾವನೆ ತಪ್ಪು ಎಂದು ಸಾಬೀತುಪಡಿಸಿದರು ಎಂದು ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಕ್ವಾದ್ರಿ ಹೇಳಿದ್ದಾರೆ.

ಜೂನ್ 5, 1955 ರಂದು ಜನಿಸಿದ ಕ್ವಾದ್ರಿ ಅವರು ಬಿದ್ರಿ ಕುಶಲಕರ್ಮಿಗಳ ಕುಟುಂಬದಿಂದ ಬಂದವರು. 1984 ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ, 1988 ರಲ್ಲಿ ರಾಷ್ಟ್ರೀಯ ಪ್ರಶಸ್ತಿ, 1996 ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಕ್ವಾದ್ರಿಗೆ ಹಲವರು ಪ್ರಶಸ್ತಿಗಳು ಲಭಿಸಿವೆ.

ಇದನ್ನೂ ಓದಿ: Padma Awards 2023: ನಾಟು ನಾಟು ಸಂಗೀತ ಸಂಯೋಜಕ ಕೀರವಾಣಿ, ಸುಧಾಮೂರ್ತಿ ಸೇರಿ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ

ಕರ್ನಾಟಕದಿಂದ ಒಟ್ಟು ಎಂಟು ಮಂದಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಮಾಜಕಾರ್ಯ ಕ್ಷೇತ್ರದಲ್ಲಿ ತಮ್ಮ ಕೊಡುಗೆಗಾಗಿ ಸುಧಾ ಮೂರ್ತಿ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಎಸ್‌ಎಂ ಕೃಷ್ಣ, ಎಸ್‌ಎಲ್ ಭೈರಪ್ಪ, ವಿಜ್ಞಾನ ಮತ್ತು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಖಾದರವಲಿ ದೂದೇಕುಲ, ಪುರಾತತ್ವ ಕ್ಷೇತ್ರದಲ್ಲಿ ಎಸ್ ಸುಬ್ಬರಾಮ್, ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ನಾಡೋಜ ಪಿಂಡಿಪಾಪನಹಳ್ಳಿ ಮಿನಿವೆಂಕಟಪ್ಪ ಮತ್ತು ಶಾ ಅಹಮದ್ ಅವರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ