AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ತಂದೆ, ಅಜ್ಜನನ್ನು ಕೊಂದು ಚಿಕ್ಕಪ್ಪನ ಮೇಲೂ ಹಲ್ಲೆ ನಡೆಸಿದ ಯುವಕ

ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ತಂದೆ ಹಾಗೂ ಅಜ್ಜನನ್ನು ಹತ್ಯೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಚಿಕ್ಕಪ್ಪನ ಮೇಲೂ ಹಲ್ಲೆ ನಡೆಸಿದ್ದಾನೆ. ಆತ ಮಾದಕ ವ್ಯಸನಿಯಾಗಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗಗೊಂಡಿದೆ. ಮಂಗಳವಾರ ರಾತ್ರಿ ಸಂತೋಷಿಮಾತಾ ಚಾಲ್‌ನಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಆತನ ಕುಟುಂಬ ಸದಸ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಆತನ ತಂದೆ ಮನೋಜ್ ಭಟ್ರೆ (57) ಮತ್ತು ಅಜ್ಜ ಬಾಬು ಭಟ್ರೆ (79) ಸ್ಥಳದಲ್ಲೇ ಸಾವನ್ನಪ್ಪಿದರು. ಅವರ ಚಿಕ್ಕಪ್ಪ ಅನಿಲ್ ಬಾಬು ಭಟ್ರೆ (54) ಗಂಭೀರ ಗಾಯಗೊಂಡಿದ್ದು, ಪ್ರಸ್ತುತ ನಾಯರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂಬೈ: ತಂದೆ, ಅಜ್ಜನನ್ನು ಕೊಂದು ಚಿಕ್ಕಪ್ಪನ ಮೇಲೂ ಹಲ್ಲೆ ನಡೆಸಿದ ಯುವಕ
ಬಂಧನ
ನಯನಾ ರಾಜೀವ್
|

Updated on: Sep 25, 2025 | 8:00 AM

Share

ಮುಂಬೈ, ಸೆಪ್ಟೆಂಬರ್ 25: ಯುವಕನೊಬ್ಬ ತಂದೆ, ಅಜ್ಜನನ್ನು ಕೊಂದು ಚಿಕ್ಕಪ್ಪನ ಮೇಲೂ ಹಲ್ಲೆ ನಡೆಸಿರುವ ಘಟನೆ ಮುಂಬೈನ ಅಂಧೇರಿಯಲ್ಲಿ ನಡೆದಿದೆ. ಆ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಕೊಲೆ(Murder) ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪೊಲೀಸರ ಪ್ರಕಾರ, ಆರೋಪಿ ಚೇತನ್ ಮನೋಜ್ ಭಟ್ರೆ ಮಾದಕ ವ್ಯಸನಿಯಾಗಿದ್ದು, ಆತನನ್ನು ಬಂಧಿಸಲಾಗಿದೆ.

ಮಂಗಳವಾರ ರಾತ್ರಿ ಸಂತೋಷಿಮಾತಾ ಚಾಲ್‌ನಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಆತನ ಕುಟುಂಬ ಸದಸ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಆತನ ತಂದೆ ಮನೋಜ್ ಭಟ್ರೆ (57) ಮತ್ತು ಅಜ್ಜ ಬಾಬು ಭಟ್ರೆ (79) ಸ್ಥಳದಲ್ಲೇ ಸಾವನ್ನಪ್ಪಿದರು. ಅವರ ಚಿಕ್ಕಪ್ಪ ಅನಿಲ್ ಬಾಬು ಭಟ್ರೆ (54) ಗಂಭೀರ ಗಾಯಗೊಂಡಿದ್ದು, ಪ್ರಸ್ತುತ ನಾಯರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಎಂಐಡಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯು ಮಾದಕ ವ್ಯಸನಿಯಾಗಿದ್ದು, ಅವನ ತಂದೆ ಮತ್ತು ಅಜ್ಜನಿಂದ ಆಗಾಗ ಕಿರುಕುಳ ಅನುಭವಿಸಿದ್ದ ಮತ್ತು ನಿಂದನೆಗೆ ಒಳಗಾಗಿದ್ದ ಎನ್ನಲಾಗಿದೆ. ನಿರಂತರ ದೌರ್ಜನ್ಯದಿಂದ ಹತಾಶೆಗೊಂಡು, ಅವನು ಕುಟುಂಬದ ಮೂವರು ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅಧಿಕಾರಿ ಹೇಳಿದರು.

ಮತ್ತಷ್ಟು ಓದಿ: ಎರಡನೇ ಗರ್ಲ್​​ಫ್ರೆಂಡ್ ಮಾತು ಕೇಳಿ ಲಿವ್​-ಇನ್ ಸಂಗಾತಿಯ ಕೊಂದ ಯುವಕ

ಮತ್ತೊಂದು ಘಟನೆ ಹೆಂಡತಿ ಯಾರೊಂದಿಗೋ ಓಡಿ ಹೋಗಿದ್ದಕ್ಕೆ ವ್ಯಕ್ತಿಯೊಬ್ಬ ನಾದಿನಿಯನ್ನು ಹತ್ಯೆ(Murder) ಮಾಡಿ, ಆಕೆಯ ಮಗಳ ಬೆರಳು ಕತ್ತರಿಸಿರುವ ಭಯಾನಕ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಖ್ಯಾಲಾದಲ್ಲಿ ಘಟನೆ ನಡೆದಿದೆ. ತನ್ನ ಹೆಂಡತಿ ಇನ್ನೊಬ್ಬ ವ್ಯಕ್ತಿಯೊಂದಿಗೆ ಓಡಿಹೋಗಲು ಅವರು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿರುವ ಆತ ಈ ದುಷ್ಕೃತ್ಯವೆಸಗಿದ್ದಾನೆ. ಮೃತರನ್ನು ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ ನುಸ್ರತ್ (39) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಅಕ್ಬರಿ (42) ಮತ್ತು ನುಸ್ರತ್ ಅವರ ಪುತ್ರಿ ಸಾನಿಯಾ (20) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣದ ದೂರುದಾರ ಉಸ್ಮಾನ್ (19) ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿ ಇಸ್ತೇಕರ್ ಅಹ್ಮದ್ ಅಲಿಯಾಸ್ ಬಬ್ಬು (49) ವೃತ್ತಿಯಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದು, ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಗಾಜಿಯಾಬಾದ್‌ನ ಲೋನಿ ನಿವಾಸಿ ಬಬ್ಬು ಬೆಳಗ್ಗೆ 7 ಗಂಟೆ ಸುಮಾರಿಗೆ ನುಸ್ರತ್ ನಿದ್ರಿಸುತ್ತಿದ್ದಾಗ ಆಕೆಯ ಮನೆಗೆ ಹೋಗಿದ್ದಾನೆ. ಅವನು ಹೊಸದಾಗಿ ಖರೀದಿಸಿದ ಕ್ಲೀವರ್ ಅನ್ನು ಟಿಫಿನ್ ಬಾಕ್ಸ್ ಒಳಗೆ ಬಚ್ಚಿಟ್ಟಿದ್ದ. ನುಸ್ರತ್ ಎಚ್ಚರಗೊಂಡು ಅವನಿಗೆ ಚಹಾ ಕೊಟ್ಟಾಗ, ಆತ ಆಯುಧವನ್ನು ಹೊರತೆಗೆದು ಆಕೆಯ ಎದೆ ಮತ್ತು ಕುತ್ತಿಗೆಯ ಮೇಲೆ ಹಲವು ಬಾರಿ ಹಲ್ಲೆ ಮಾಡಿ ಆಕೆಯನ್ನು ಕೊಂದಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!