ಪ್ರೀತಿಸಿ ಕೊನೆಗೆ ಜಾತಿ ಬೇರೆ ಎಂದು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಹೈದರಾಬಾದ್‌ನಲ್ಲಿ ಪ್ರೇಮಿಯ ಜಾತಿ ನಿರಾಕರಣೆಯಿಂದ ಮನನೊಂದು ಹೌಸ್ ಸರ್ಜನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿದ್ದಿಪೇಟೆಯ ವೈದ್ಯಕೀಯ ಕಾಲೇಜಿನಲ್ಲಿ ಸಹೋದ್ಯೋಗಿ ಪ್ರೇಮಿ ಮದುವೆಯಾಗಲು ನಿರಾಕರಿಸಿದ ನಂತರ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ಜಾತಿ ತಾರತಮ್ಯದ ಆಳವನ್ನು ಬಿಂಬಿಸುತ್ತವೆ.

ಪ್ರೀತಿಸಿ ಕೊನೆಗೆ ಜಾತಿ ಬೇರೆ ಎಂದು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ
ಸಾವು-ಸಾಂದರ್ಭಿಕ ಚಿತ್ರ
Image Credit source: Hindustan Times

Updated on: Jan 07, 2026 | 9:25 AM

ಹೈದರಾಬಾದ್, ಜನವರಿ 07: ಪ್ರೀತಿಸಿ ಕೊನೆಗೆ ಜಾತಿ ಬೇರೆ ಎಂದು ಮದುವೆ(Marriage)ಯಾಗಲು ನಿರಾಕರಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವತಿ ಹೌಸ್ ಸರ್ಜನ್ ಆಗಿ ಕೆಲಸ ನಿರ್ವಹಿಸುತ್ತಿದ್ದಳು, ಅಲ್ಲೇ ಕೆಲಸ ಮಾಡುತ್ತಿರುವ ಸಹೋದ್ಯೋಗಿ ಮೇಲೆ ಪ್ರೇಮಾಂಕುರವಾಗಿತ್ತು. ಮದುವೆಯಾಗುವುದಾಗಿ ನಂಬಿಸಿ ಕೊನೆಗೆ ಕೈಕೊಟ್ಟಿದ್ದಕ್ಕೆ ಆಕೆ ಮನನೊಂದು ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜನವರಿ 3ರಂದು ಕಾಲೇಜಿನ ಹಾಸ್ಟೆಲ್​​ನಲ್ಲಿ ಕಳೆನಾಶಕ ಸೇವಿಸಿದ್ದಳು, ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದಳು, ಆಕೆಯ ರೂಮ್​ ಮೇಟ್​ಗಳು ಆಕೆಯನ್ನು ಸಿದ್ದಿಪೇಟೆಯ ಆಸ್ಪತ್ರೆಗೆ ಮತ್ತು ನಂತರ ಹೈದರಾಬಾದ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆಕೆಯ ಜನವರಿ 4ರಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಸಂತ್ರಸ್ತೆಯ ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್ಎಸ್ ಮತ್ತು ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಓದಿ: ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

ಯುವತಿ ಜೋಗುಳಂಬ-ಗಡ್ವಾಲ್ ಜಿಲ್ಲೆಯ ಬಡ ಕುಟುಂಬಕ್ಕೆ ಸೇರಿದ್ದು, ಸಮಾಜ ಕಲ್ಯಾಣ ಶಾಲೆಯಲ್ಲಿ ಅಧ್ಯಯನ ಮಾಡಿ ನಂತರ 2020 ರಲ್ಲಿ ಸಿದ್ದಿಪೇಟೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೇಡಿದ್ದರು. ಆಕೆ ಶಿಕ್ಷಣ, ಕ್ರೀಡೆ ಎಲ್ಲದರಲ್ಲೂ ಮುಂದಿದ್ದಳು. ಆದರೆ ಪ್ರೀತಿ ಮಾಡಿ ಸೋತಿದ್ದಾಳೆ.
ಆಕೆಯ ಪೋಷಕರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ, ಆಕೆಯ ಅಕ್ಕ ಸಾಫ್ಟ್​ವೇರ್ ಎಂಜಿನಿಯರ್, ಯುವತಿ ಸಿದ್ದಿಪೇಟೆಯ ಸರ್ಕಾರಿ ಕಾಲೇಜಿನಲ್ಲಿ ಇಂಟರ್ನ್​ಶಿಪ್ ಮಾಡುತ್ತಿದ್ದಳು.

ಅಲ್ಲಿ ಕಳೆದ ವರ್ಷ ಸಹೋದ್ಯೋಗಿಯ ಪರಿಚಯವಾಗಿತ್ತು, ಬಳಿಕ ಸ್ನೇಹ ನಂತರ ಪ್ರೀತಿಯಾಗಿ ಮಾರ್ಪಟ್ಟಿತ್ತು. ಆಕೆ ಹಿಂದುಳಿದ ವರ್ಗಕ್ಕೆ ಸೇರಿರುವ ಕಾರಣ ಆಕೆಯನ್ನು ಮದುವೆಯಾಗಲು ಸಾಧ್ಯವಿಲ್ಲ ಎಂದು ಆತ ನಿರಾಕರಿಸಿಬಿಟ್ಟಿದ್ದ.

ಹಿಂದುಳಿದ ವರ್ಗಕ್ಕೆ ಸೇರಿದ ಆರೋಪಿಯು ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಆದರೆ ನಂತರ ಜಾತಿ ವ್ಯತ್ಯಾಸವನ್ನು ಉಲ್ಲೇಖಿಸಿ ನಿರಾಕರಿಸಿದ್ದ, ಇದರಿಂದಾಗಿ ಆಕೆ ಈ ಕಠಿಣ ಕ್ರಮ ತೆಗೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ