ತೆಲಂಗಾಣದಲ್ಲಿ ಮತ್ತೊಂದು ದಾರುಣ, ಪ್ರಿಯಕರ ಮೋಸ ಮಾಡಿದ್ದಕ್ಕೆ ಯುವತಿ ನೇಣಿಗೆ ಶರಣು

Telangana: ಇತ್ತೀಚಿನ ಬೆಳವಣಿಗೆಗಳು ತೀವ್ರ ಆತಂಕಕ್ಕೆ ಕಾರಣವಾಗಿವೆ. ಭವ್ಯ ಭವಿಷ್ಯ ಕಾಣಬೇಕಿರುವ ಯುವತಿಯರು ಕಾಲನ ವಶವಾಗುತ್ತಿದ್ದಾರೆ. ಕಾರಣವೇನೇ ಇರಲಿ, ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ ಎಂಬುದನ್ನು ಯುವ ಜನತೆ ಅರಿತುಕೊಳ್ಳಬೇಕಿದೆ.

ತೆಲಂಗಾಣದಲ್ಲಿ ಮತ್ತೊಂದು ದಾರುಣ, ಪ್ರಿಯಕರ ಮೋಸ ಮಾಡಿದ್ದಕ್ಕೆ ಯುವತಿ ನೇಣಿಗೆ ಶರಣು
ಪ್ರಿಯಕರ ಮೋಸ ಮಾಡಿದ್ದಕ್ಕೆ ಯುವತಿ ನೇಣಿಗೆ ಶರಣು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 27, 2023 | 4:56 PM

ಇತ್ತೀಚಿನ ಬೆಳವಣಿಗೆಗಳು ತೀವ್ರ ಆತಂಕಕ್ಕೆ ಕಾರಣವಾಗಿವೆ. ಭವ್ಯ ಭವಿಷ್ಯ ಕಾಣಬೇಕಿರುವ ಯುವತಿಯರು ಕಾಲನ ವಶವಾಗುತ್ತಿದ್ದಾರೆ. ಕಾರಣವೇನೇ ಇರಲಿ, ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ ಎಂಬುದನ್ನು ಯುವ ಜನತೆ ಅರಿತುಕೊಳ್ಳಬೇಕಿದೆ. ಅಪರೂಪದ ಮಾನವ ಜೀವನಕ್ಕೆ ಬಲವಂತವಾಗಿ ಎಂಡ್ ಕಾರ್ಡ್ ಹಾಕುತ್ತಿದ್ದಾರೆ. ವಾರಂಗಲ್ (Warangal) ವೈದ್ಯಕೀಯ ವಿದ್ಯಾರ್ಥಿನಿ (woman) ಪ್ರೀತಿ ಆತ್ಮಹತ್ಯೆ (suicide) ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ದುರಂತ ನಡೆದಿದೆ. ಅದೇ ವಾರಂಗಲ್ ಜಿಲ್ಲೆಯ ಮತ್ತೊಬ್ಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರೇಮಿಯ (lover) ವಂಚನೆಯಿಂದಾಗಿ (cheat) ಆಕೆ ನೇಣು ಬಿಗಿದುಕೊಂಡಿದ್ದಾಳೆ.

ವಿವರಕ್ಕೆ ಹೋದರೆ.. ಎಲ್ಕತುರ್ಥಿ ಮಂಡಲದ ಗೋಪಾಲಪುರದ ಪೋಗುಲ ಉಷಾರಾಣಿ ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನೊಬ್ಬ ಪ್ರೀತಿಸಿ ಮೋಸ ಮಾಡಿದ್ದಕ್ಕೆ ಮನನೊಂದ ಭೂಪಾಲಪಲ್ಲಿ ಜಿಲ್ಲೆಯ ಯುವತಿ ಇಂದು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Also Read:

ಹಿಂದೂಯಿಸಂ ಒಂದು ಧರ್ಮವಲ್ಲ, ಅದು ಜೀವನ ಕ್ರಮ: ಸುಪ್ರೀಂಕೋರ್ಟ್

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಕಂಡ ಕುಟುಂಬಸ್ಥರು ಆಸ್ಪತ್ರೆಗೆ ದೌಡಾಯಿಸಿದರಾದರೂ ಅದಾಗಲೇ ಉಷಾರಾಣಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಆಕೆಯ ಕುಟುಂಬಸ್ಥರು ರೋದಿಸುತ್ತಿದ್ದಾರೆ. ನಂತರ ಮೃತ ದೇಹವನ್ನು ಹುಜೂರಾಬಾದ್ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Ragging: ರ‍್ಯಾಗಿಂಗ್​ನಿಂದ ಬೇಸತ್ತು 4 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸಾವು

ರ‍್ಯಾಗಿಂಗ್​ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಹೈದರಾಬಾದ್​ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. 26 ವರ್ಷದ ಡಿ.ಪ್ರೀತಿ ಕಾಲೇಜಿನಲ್ಲಿ ಹಿರಿಯರ ವಿದ್ಯಾರ್ಥಿಗಳ ಕಿರುಕುಳದಿಂದ (ರ‍್ಯಾಗಿಂಗ್) ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಎಂಜಿಎಂ ಆಸ್ಪತ್ರೆಯಲ್ಲಿ ಪ್ರೀತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಪ್ರೀತಿಯನ್ನು ಹೈದರಾಬಾದ್​ನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಪ್ರೀತಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೊಹಮ್ಮದ್ ಅಲಿ ಸೈಫ್ ಎಂಬ ಸ್ನಾತಕೋತ್ತರ ಎರಡನೇ ವರ್ಷದ ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್​, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಕಿರುಕುಳದ ಆರೋಪದ ಮೇಲೆ ಬಂಧಿಸಲಾಗಿದೆ . ವಿದ್ಯಾರ್ಥಿಯ ವಿರುದ್ಧ ಕಾಲೇಜು ಮತ್ತು ಆಸ್ಪತ್ರೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರೀತಿಯ ತಂದೆ ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Mon, 27 February 23

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು