AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವುದೇ ಸ್ಥಳದಲ್ಲಿ, ಯಾವ ಸಮಯದಲ್ಲಾದರೂ ಚರ್ಚೆಗೆ ಸಿದ್ಧ’; 4ನೇ ಬಾರಿ ಸಿಜೆಪಿಗೆ ಕೇಂದ್ರ ಸರ್ಕಾರ ಆಹ್ವಾನ

ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಮಾತುಕತೆಗೆ ಆಹ್ವಾನ ನೀಡಿರುವ ಕೇಂದ್ರ ಸರ್ಕಾರ, ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಲ್ಲಿ ಬೇಕಾದರೂ ಚರ್ಚೆ ನಡೆಸಲು ಸಿದ್ಧ ಎಂದು ಪುನರುಚ್ಚರಿಸಿದೆ. ನಿನ್ನೆ ಮಧ್ಯಾಹ್ನದಿಂದ ಚರ್ಚೆಗಾಗಿ ಸರ್ಕಾರ ಈಗಾಗಲೇ 4 ಪ್ರಸ್ತಾವನೆಗಳನ್ನು ಕಳುಹಿಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಸರ್ಕಾರದ ಪ್ರಸ್ತಾವನೆಗಳ ಕುರಿತು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪ್ರತಿಭಟನಾಕಾರರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.

'ಯಾವುದೇ ಸ್ಥಳದಲ್ಲಿ, ಯಾವ ಸಮಯದಲ್ಲಾದರೂ ಚರ್ಚೆಗೆ ಸಿದ್ಧ'; 4ನೇ ಬಾರಿ ಸಿಜೆಪಿಗೆ ಕೇಂದ್ರ ಸರ್ಕಾರ ಆಹ್ವಾನ
Union Minister Jitendra SinghImage Credit source: PTI
ಸುಷ್ಮಾ ಚಕ್ರೆ
|

Updated on:Jul 23, 2026 | 4:28 PM

Share

ನವದೆಹಲಿ, ಜುಲೈ 23: ಕಾಕ್ರೋಚ್ ಜನತಾ ಪಾರ್ಟಿಯ (CJP) ಪ್ರತಿನಿಧಿಗಳನ್ನು ಚರ್ಚೆಗೆ ಬರುವಂತೆ ಕೇಂದ್ರ ಸರ್ಕಾರ 4ನೇ ಬಾರಿಗೆ ಆಹ್ವಾನಿಸುತ್ತಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ (Jitendra Singh) ಇಂದು ತಿಳಿಸಿದ್ದಾರೆ. ಚರ್ಚೆಗಾಗಿ ಸರ್ಕಾರ ಈಗಾಗಲೇ 4 ಅಧಿಕೃತ ಪ್ರಸ್ತಾವನೆಗಳನ್ನು ಕಳುಹಿಸಿಕೊಟ್ಟಿದ್ದು, ಯಾವುದೇ ಸಮಯದಲ್ಲಿಯಾದರೂ ಮಾತುಕತೆ ನಡೆಸಲು ಮುಕ್ತವಾಗಿದೆ ಎಂದು ಅವರು ಹೇಳಿದ್ದಾರೆ. ಈ ಪರಿಷ್ಕೃತ ಪ್ರಸ್ತಾವನೆಯ ಕುರಿತು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ನಿನ್ನೆ ಮಧ್ಯಾಹ್ನದಿಂದಲೇ ಸಿಜೆಪಿ ಪ್ರತಿನಿಧಿಗಳಿಗೆ ಆಹ್ವಾನ ಕಳುಹಿಸಲಾಗಿದೆ. ನಿನ್ನೆ ಮಧ್ಯಾಹ್ನದಿಂದ ಇದುವರೆಗೂ 4 ಬಾರಿ ಅವರನ್ನು ಮಾತುಕತೆಗೆ ಆಹ್ವಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿ ಸಂಘಟನೆಯ ಅನುಕೂಲಕ್ಕೆ ತಕ್ಕಂತೆ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರ ಕಚೇರಿ ಅಥವಾ ನಿವಾಸ ಎರಡದಲ್ಲಿ ಎಲ್ಲಿ ಬೇಕಾದರೂ ಸಭೆಗಳನ್ನು ನಡೆಸಬಹುದು ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ

“ನಾವು ಯಾವುದೇ ಪ್ರತಿಷ್ಠೆಯ ಬಗ್ಗೆ ಯೋಚಿಸುತ್ತಿಲ್ಲ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ನಾನು ಇಬ್ಬರೂ ಚರ್ಚೆಯಲ್ಲಿ ಭಾಗವಹಿಸಲಿದ್ದೇವೆ. ಮಾತುಕತೆಯ ಮೂಲಕವೇ ನಾವು ಪರಿಹಾರ ಕಂಡುಕೊಳ್ಳಬಹುದು. ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಮತ್ತು ಮಾತುಕತೆಯ ಮೂಲಕ ಪ್ರತಿಯೊಂದು ಸಮಸ್ಯೆಯನ್ನು ಬಗೆಹರಿಸುವುದೇ ಸರ್ಕಾರದ ಮುಖ್ಯ ಆದ್ಯತೆಯಾಗಿದೆ” ಎಂದು ಜಿತೇಂದ್ರ ಸಿಂಗ್ ಪುನರುಚ್ಚರಿಸಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಪೇಪರ್ ಲೀಕ್ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತುರ್ತು ನ್ಯಾಯ ಒದಗಿಸಲು ಮತ್ತು ಕಠಿಣ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ನೀಟ್ ಪೇಪರ್ ಸೋರಿಕೆ: ಮೌನ ಮುರಿದ ಪ್ರಧಾನಿ, ಫಾಸ್ಟ್​ ಟ್ರ್ಯಾಕ್ ಕೋರ್ಟ್​ ಮಾಡಿ ಅಪರಾಧಿಗಳಿಗೆ ಶಿಕ್ಷೆ ಕೊಡ್ತೀವಿ ಎಂದ ಮೋದಿ

ನೀಟ್ (NEET) ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಈ ಸಂಧಾನ ಮಾತುಕತೆಯ ಆಫರ್ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Thu, 23 July 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ