ಡ್ರೈವಿಂಗ್ ಲೈಸೆನ್ಸ್, ಆರ್ಸಿ ವ್ಯಾಲಿಡಿಟಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ
ಕೊರೊನಾ ವೈರಸ್ ಎರಡನೇ ಅಲೆ ಹರಡುವ ಭೀತಿ ಎಲ್ಲೆಡೆ ಹೆಚ್ಚಾಗಿದೆ. ಈಗಾಗಲೇ ಇಂಗ್ಲೆಂಡ್ನಿಂದ ಬಂದ ಸಾಕಷ್ಟ ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವಾಹನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ಸಿಂಧುತ್ವ ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.
ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ, ವಾಹನ ಫಿಟ್‌ನೆಸ್ ಪ್ರಮಾಣಪತ್ರದ ಸಿಂಧುತ್ವವನ್ನು ಮಾರ್ಚ್ 31, 2021ರವರೆಗೆ ವಿಸ್ತರಣೆ ಮಾಡಿದೆ.
ಕೊರೊನಾ ವೈರಸ್ ಎರಡನೇ ಅಲೆ ಹರಡುವ ಭೀತಿ ಎಲ್ಲೆಡೆ ಹೆಚ್ಚಾಗಿದೆ. ಈಗಾಗಲೇ ಇಂಗ್ಲೆಂಡ್ನಿಂದ ಬಂದ ಸಾಕಷ್ಟು ಜನರಲ್ಲಿ ಹೊಸ ವಿಧದ ಕೊರೊನಾ ವೈರಾಣು ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವಾಹನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ಸಿಂಧುತ್ವ ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.
ನಿಮ್ಮ ವಾಹನ ಪರವಾನಗಿ ವ್ಯಾಲಿಡಿಟಿ ಸೇರಿ ಇತರ ದಾಖಲೆಳೆಗಳ ವ್ಯಾಲಿಡಿಟಿ ಅಂತ್ಯಗೊಂಡಿದ್ದರೆ ನೀವು ಅದೇ ದಾಖಲೆಗಳನ್ನು ಇಟ್ಟುಕೊಂಡು ಮಾರ್ಚ್ 31ರವರೆಗೂ ವಾಹನ ಓಡಿಸಬಹುದು.
ಬ್ರಿಟನ್ನಲ್ಲಿ ಕೊರೊನಾ ವೈರಾಣು ಹೊಸ ಅವತಾರ ತಾಳಿದೆ. ಈ ಮೂಲಕ 2ನೇ ಅಲೆಯ ಭೀತಿಯಿಂದ ಬ್ರಿಟನ್ ಮತ್ತೆ ಲಾಕ್ಡೌನ್ ಮೊರೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೊರೊನಾ ಮೊದಲ ಅಲೆಗಿಂತಲೂ 2ನೇ ಅಲೆ ಭೀಕರ ಮತ್ತು ಅಪಾಯಕಾರಿ ಎಂಬ ವಾದಗಳು ಇರುವ ಕಾರಣ ಇತರೆ ದೇಶಗಳು ಬ್ರಿಟನ್ನಿಗೆ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಯಾನ ಸ್ಥಗಿತಗೊಳಿಸಿವೆ. ಭಾರತದಲ್ಲಿ ಈ ವೈರಾಣು ಪತ್ತೆ ಆಗಿರುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ.
ಕರ್ನಾಟಕ ಮೂಲ ಸೌಕರ್ಯಕ್ಕೆ ಒತ್ತು: ಕೇಂದ್ರದಿಂದ 1.16 ಲಕ್ಷ ಕೋಟಿ ರೂ. ಯೋಜನೆ- ನಿತಿನ್ ಗಡ್ಕರಿ