AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Acid Attack: ದೆಹಲಿಯಲ್ಲಿ 17ರ ಹರೆಯದ ಶಾಲಾ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ

Acid Attack on School Girl: ದೆಹಲಿಯ ದ್ವಾರಕಾದಲ್ಲಿ ಬಾಲಕಿಯ ಮೇಲೆ ಬಾಲಕಿ ಜತೆ ಆಕೆಯ ತಂಗಿ ಕೂಡಾ ಇದ್ದಳು. ತಮಗೆ ಪರಿಚಿತರಾಗಿರುವ ವ್ಯಕ್ತಿಗಳೇ ಈ ಕೃತ್ಯವೆಸಗಿದ್ದಾರೆ ಎಂದು ಆಕೆ ಸಂದೇಹ ವ್ಯಕ್ತ ಪಡಿಸಿದ್ದಾಳೆ. ಇದೀಗ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಈ ಪ್ರಕರಣ ಬಗ್ಗೆ ತನಿಖೆ ನಡೆಯುತ್ತಿದೆ.

Delhi Acid Attack: ದೆಹಲಿಯಲ್ಲಿ 17ರ ಹರೆಯದ ಶಾಲಾ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ
ಬಾಲಕಿ ಮೇಲೆ ಆ್ಯಸಿಡ್ ದಾಳಿ (ಸಿಸಿಟಿವಿ ದೃಶ್ಯ)
TV9 Web
| Edited By: |

Updated on:Dec 14, 2022 | 2:01 PM

Share

ದೆಹಲಿ: ದೆಹಲಿಯ (Delhi) ದ್ವಾರಾಕಾದಲ್ಲಿ ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17ರ ಹರೆಯದ ಶಾಲಾ ವಿದ್ಯಾರ್ಥಿನಿಗೆ ಆ್ಯಸಿಡ್ (Acid Attack) ಎರಚಿರುವ ಘಟನೆ ವರದಿಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆ್ಯಸಿಡ್ ದಾಳಿಗೊಳಗಾಗಿರುವ 12ನೇ ತರಗತಿ ವಿದ್ಯಾರ್ಥಿನಿ ಸಫ್ದಾರ್‌ಜಂಗ್ ಆಸ್ಪತ್ರೆಯಲ್ಲಿ (Safdarjung hospital) ಚಿಕಿತ್ಸೆ ಪಡೆಯುತ್ತಿದ್ದು ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಸ್ತುತ ಪ್ರಕರಣದಲ್ಲಿ ಬಾಲಕಿಯ ಕುಟುಂಬ ನೀಡಿದ ದೂರಿನನ್ವಯ ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ನಡೆದಿದೆ. ಬೆಳಗ್ಗೆ 9 ಗಂಟೆಗೆ ಮೋಹನ್ ಗಾರ್ಡನ್ ಪ್ರದೇಶದಲ್ಲಿ ನಡೆದಿರುವ ಆ್ಯಸಿಡ್ ದಾಳಿಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಬೆಳಗ್ಗೆ ಸರಿ ಸುಮಾರು 7.30ಕ್ಕೆ ಬೈಕ್​​ನಲ್ಲಿ ಬಂದ ವ್ಯಕ್ತಿಗಳು 17ರ ಹರೆಯದ ಬಾಲಕಿ ಮೇಲೆ ಆ್ಯಸಿಡ್ ನಂತಿರುವ ವಸ್ತು ಎರಚಿದ್ದಾರೆ ಎಂದು ಕರೆ ಮಾಡಿದ ವ್ಯಕ್ತಿ ಹೇಳಿದ್ದರು ಎಂದು ಉಪ ಪೊಲೀಸ್ ಆಯುಕ್ತ (ದ್ವಾರಕಾ) ಎಂ. ಹರ್ಷವರ್ಧನ್ ಹೇಳಿದ್ದಾರೆ. ಘಟನೆ ನಡೆದಾಗ ಬಾಲಕಿ ಜತೆ ಆಕೆಯ ತಂಗಿ ಕೂಡಾ ಇದ್ದಳು. ತಮಗೆ ಪರಿಚಿತರಾಗಿರುವ ವ್ಯಕ್ತಿಗಳೇ ಈ ಕೃತ್ಯವೆಸಗಿದ್ದಾರೆ ಎಂದು ಆಕೆ ಸಂದೇಹ ವ್ಯಕ್ತ ಪಡಿಸಿದ್ದಾಳೆ. ಇದೀಗ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಈ ಪ್ರಕರಣ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ಹೇಳಿದ್ದಾರೆ. ಆರೋಪಿಗಳು ಅಪ್ರಾಪ್ತರೇ ಅಥವಾ ಅಲ್ಲವೇ ಎಂಬುದು ತಕ್ಷಣಕ್ಕೆ ಗೊತ್ತಾಗಿಲ್ಲ. ಬಲ್ಲಮೂಲಗಳ ಪ್ರಕಾರ ಆರೋಪಿಗಳು ಸಂತ್ರಸ್ತೆಯ ನೆರೆಹೊರೆಯವರೇ ಆಗಿದ್ದಾರೆ.

ದಾಳಿಗೆ ಕಾರಣ ಏನೆಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದು, ಸಂತ್ರಸ್ತೆ ಮತ್ತು ಆಕೆಯ ಪೋಷಕರ ಹೇಳಿಕೆಯನ್ನು ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಾಹಿತಿ ಪಡೆದ ಮಹಿಳಾ ಆಯೋಗ

ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಆಸಿಡ್ ದಾಳಿಯ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ಘಟನೆಯ ಬಗ್ಗೆ ವಿಚಾರಣೆಗೆ ತಂಡವನ್ನು ಸಫ್ದಾರ್‌ಜಂಗ್ ಆಸ್ಪತ್ರೆಗೆ ಕಳುಹಿಸಿದೆ. ಮಹಿಳಾ ಆಯೋಗವು ವರದಿಯಾದ ಅಪರಾಧ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತದೆ. ಆಯೋಗದ ತಂಡವು ಈ ವಿಷಯವನ್ನು ವಿಚಾರಣೆ ಮಾಡಲು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಆಸ್ಪತ್ರೆಗೆ ತಲುಪಲಿದೆ ಎಂದು ಆಯೋಗದ ಹೇಳಿಕೆಯಲ್ಲಿ ತಿಳಿಸಿದೆ. ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು, ಆಯೋಗವು ಸಂತ್ರಸ್ತೆಗೆ ನ್ಯಾಯ ದೊರಕಿಸಲು ಒತ್ತಾಯಿಸಿದೆ.

ಇದನ್ನೂ ಓದಿ: ದೆಹಲಿ ಹತ್ಯೆ ಮಾದರಿಯಲ್ಲಿ ತಂದೆಯನ್ನೇ ಕೊಂದು ದೇಹವನ್ನು 30 ತುಂಡು ಮಾಡಿ ಬೋರ್​ವೆಲ್​ಗೆ ಹಾಕಿದ ಮಗ!

ಎರಡೂ ಕಣ್ಣಿಗೂ ಹೊಕ್ಕಿದ ಆ್ಯಸಿಡ್

ಮಗಳ ಎರಡೂ ಕಣ್ಣಿಗೂ ಆ್ಯಸಿಡ್ ಹೊಕ್ಕಿದೆ ಎಂದು ಸಂತ್ರಸ್ತೆಯ ಅಪ್ಪ ಹೇಳಿದ್ದಾರೆ. ಆರೋಪಿಗಳು ಮುಖ ಮುಚ್ಚಿದ್ದರಿಂದ ಅವರನ್ನು ಇನ್ನೂ ಪತ್ತೆ ಹಚ್ಚಬೇಕಿದೆ. ನಮ್ಮ ಸಣ್ಣ ಮಗಳು ಮನೆಗೆ ಓಡುತ್ತಾ ಬಂದು ಅಕ್ಕನಿಗೆ ಆ್ಯಸಿಡ್ ಎರಚಲಾಗಿದೆ ಎಂದು ಹೇಳಿದ್ದಳು. ಆ್ಯಸಿಡ್ ಎರಚಿದ ಹುಡುಗರು ಮುಖ ಮುಚ್ಚಿದ್ದರು, ಅವರನ್ನು ಪತ್ತೆ ಹಚ್ಚಬೇಕಿದೆ ಎಂದು ಅವರು ಹೇಳಿದ್ದಾರೆ.

Published On - 1:38 pm, Wed, 14 December 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?