AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯ ರ‍್ಯಾಲಿಗೆ ಬಾರದೆ ಚಿಕ್ಕಪ್ಪನ ಅಂತ್ಯಕ್ರಿಯೆಗೆ ತೆರಳಿದ್ದ ಯೂತ್ ಕಾಂಗ್ರೆಸ್ ನಾಯಕ ಅಮಾನತು!

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾಗವಹಿಸಿದ್ದ ಪಕ್ಷದ ಬೃಹತ್ ರ‍್ಯಾಲಿಗೆ ಗೈರುಹಾಜರಾಗಿ, ಹತ್ತಿರದ ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಯೂತ್ ಕಾಂಗ್ರೆಸ್ ನಾಯಕನೊಬ್ಬನನ್ನು ಪಕ್ಷದ ಹುದ್ದೆಯಿಂದ ವಜಾಗೊಳಿಸಿರುವ ಘಟನೆ ನಡೆದಿದೆ. ಪಕ್ಷದ ಶಿಸ್ತು ಮತ್ತು ಕಾರ್ಯಕ್ರಮಗಳ ಹಾಜರಾತಿಗೆ ಆದ್ಯತೆ ನೀಡದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು, ಈ ನಿರ್ಧಾರವು ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಹುಲ್ ಗಾಂಧಿಯ ರ‍್ಯಾಲಿಗೆ ಬಾರದೆ ಚಿಕ್ಕಪ್ಪನ ಅಂತ್ಯಕ್ರಿಯೆಗೆ ತೆರಳಿದ್ದ ಯೂತ್ ಕಾಂಗ್ರೆಸ್ ನಾಯಕ ಅಮಾನತು!
ರಾಹುಲ್ ಗಾಂಧಿImage Credit source: PTI
ಸುಷ್ಮಾ ಚಕ್ರೆ
|

Updated on: Nov 05, 2026 | 5:28 PM

Share

ನವದೆಹಲಿ, ನವೆಂಬರ್ 5: ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನವೆಂಬರ್ 1ರಂದು ನಡೆದ ‘ಇಂಡಿಯಾ’ ಒಕ್ಕೂಟದ ಬೃಹತ್ ರ‍್ಯಾಲಿಗೆ ಗೈರುಹಾಜರಾದ ಕಾರಣಕ್ಕೆ ಭಾರತೀಯ ಯೂತ್ ಕಾಂಗ್ರೆಸ್ ಶಿಸ್ತುಕ್ರಮ ಕೈಗೊಂಡಿದ್ದು, ಸುಮಾರು 200ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಹುದ್ದೆಯಿಂದ ಅಮಾನತುಗೊಳಿಸಿದೆ. ತನ್ನ ಚಿಕ್ಕಪ್ಪ ತೀರಿಹೋದ ಕಾರಣದಿಂದ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯ ರ‍್ಯಾಲಿಗೆ ಬರಲಾಗದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೋಹಿತ್ ರಜೋರಿಯಾ ಅವರನ್ನು ಸಹ ಯಾವುದೇ ವಿವರಣೆ ನೀಡಲು ಅವಕಾಶ ನೀಡದೆ ತಕ್ಷಣವೇ ವಜಾಗೊಳಿಸಲಾಗಿದೆ.

ಲಭ್ಯವಿರುವ ದಾಖಲೆಗಳ ಪ್ರಕಾರ, 7 ರಾಜ್ಯಗಳ ಸುಮಾರು 185ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಅಂತಿಮವಾಗಿ ಈ ಸಂಖ್ಯೆ 500ಕ್ಕೆ ಏರುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ ಗರಿಷ್ಠ 60, ಗುಜರಾತ್‌ನಲ್ಲಿ 49, ಪಶ್ಚಿಮ ಬಂಗಾಳದಲ್ಲಿ 26, ತೆಲಂಗಾಣದಲ್ಲಿ 14, ಉತ್ತರ ಪ್ರದೇಶದಲ್ಲಿ 13, ಹಿಮಾಚಲ ಪ್ರದೇಶದಲ್ಲಿ 13 ಮತ್ತು ಹರಿಯಾಣದಲ್ಲಿ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಧೈರ್ಯವಿದ್ದರೆ ಚರ್ಚೆಗೆ ಬನ್ನಿ, ಎಸ್‌ಐಆರ್ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ: ರಾಹುಲ್ ಗಾಂಧಿಗೆ ನೇರ ಸವಾಲು

15 ವರ್ಷ ಸೇವೆ ಸಲ್ಲಿಸಿದ ನಾಯಕನ ಅಮಾನತು:

ಯೂತ್ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೋಹಿತ್ ರಜೋರಿಯಾ ಮಾತನಾಡಿ, “ಕಾಂಗ್ರೆಸ್ ಪಕ್ಷಕ್ಕಾಗಿ 15 ವರ್ಷ ದುಡಿದಿದ್ದೇನೆ. ಪ್ರತಿಭಟನೆ ನಡೆಸಿ 15 ಎಫ್‌ಐಆರ್ ದಾಖಲಾಗಿ 3-4 ಬಾರಿ ಜೈಲಿಗೂ ಹೋಗಿದ್ದೇನೆ. ಚಿಕ್ಕಪ್ಪನ ಅಂತ್ಯಕ್ರಿಯೆಯ ಕಾರ್ಯಕ್ರಮದ ಬಗ್ಗೆ ನಮ್ಮ ಪಕ್ಷದ ನಾಯಕರಿಗೆ ಮೊದಲೇ ಮಾಹಿತಿ ನೀಡಿದ್ದರೂ, ಒಂದು ಕಾರ್ಯಕ್ರಮ ತಪ್ಪಿದ್ದಕ್ಕೆ ವಿವರಣೆ ಕೇಳದೆ ವಜಾಗೊಳಿಸಿರುವುದು ಸರಿಯಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸುಳ್ಳು ಹೇಳಿ ನಂಬಿಸಬೇಡಿ, ವಿದೇಶಿ ನೆರವಿನಿಂದಲೇ ನೀವು ಪ್ರಧಾನಿಯಾಗಿದ್ದು’; ಮೋದಿ ಕುರಿತು ರಾಹುಲ್ ಗಾಂಧಿ ಆರೋಪ

ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯ ಹಾಜರಾತಿಯನ್ನು ಪರಿಶೀಲಿಸಲು ‘ವಿತ್ ಐವೈಸಿ’ ಆ್ಯಪ್ ಹಾಗೂ ಮಿಂಟೋ ರಸ್ತೆಯಲ್ಲಿ ಬಾರ್‌ಕೋಡ್ ಸ್ಕ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಈ ರ‍್ಯಾಲಿಯಲ್ಲಿ 15,000ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು ಎಂದು ಯೂತ್ ಕಾಂಗ್ರೆಸ್ ಹೇಳಿಕೊಂಡರೂ, ಆ್ಯಪ್‌ನಲ್ಲಿ ಕೇವಲ 2,831 ಪದಾಧಿಕಾರಿಗಳ ಹಾಜರಾತಿ ಮಾತ್ರ ರಿಜಿಸ್ಟರ್ ಆಗಿತ್ತು. ಹೀಗಾಗಿ, ಕಾರ್ಯಕ್ರಮಕ್ಕೆ ಬಾರದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು