ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಕ್ಕೆ ಯುವ ಕಾಂಗ್ರೆಸ್​ ಒತ್ತಾಯ

ಗಾಂಧಿ ಕುಟುಂಬಕ್ಕೆ ಹೊರತಾದವರೊಬ್ಬರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಅವರು ಹೇಳಿದ್ದರು.

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಕ್ಕೆ ಯುವ ಕಾಂಗ್ರೆಸ್​ ಒತ್ತಾಯ
ರಾಹುಲ್ ಗಾಂಧಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 06, 2021 | 11:22 PM

ಪಣಜಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (All India Congress Committee – AICC) ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು ಎಂದು ಒತ್ತಾಯಿಸುವ ಠರಾವನ್ನು ಯುವ ಕಾಂಗ್ರೆಸ್​ ಅನುಮೋದಿಸಿದೆ.

ಭಾರತೀಯ ಯುವ ಕಾಂಗ್ರೆಸ್ (Indian Youth Congress – IYC) ಟ್ವಿಟರ್​ನಲ್ಲಿ ಠರಾವಿನ ಪ್ರತಿಯನ್ನು ಪೋಸ್ಟ್ ಮಾಡಿದೆ. ಕಾಂಗ್ರೆಸ್​ನ ಇಂದಿನ ಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಯೋಚಿಸಿದರೆ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾದರೆ ಒಳ್ಳೆಯದು ಎಂದು ಯುವ ಕಾಂಗ್ರೆಸ್ ಹೇಳಿದೆ.

ಗೋವಾದ ಪಣಜಿ ಸಮೀಪದ ರೆಸಾರ್ಟ್ ಒಂದರಲ್ಲಿ ಯುವ ಕಾಂಗ್ರೆಸ್​ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಭೆ ನಡೆಯಿತು. ಯುವ ಕಾಂಗ್ರೆಸ್​ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮತ್ತು ಯುವ ಕಾಂಗ್ರೆಸ್​ನ ಉಸ್ತುವಾರಿ ಮತ್ತು ಎಐಸಿಸಿ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲಾವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮುಂದಿನ ದಿನಗಳಲ್ಲಿ ದೇಶವನ್ನು ಬಾಧಿಸುತ್ತಿರುವ ಸಮಸ್ಯೆಗಳ ಬಗ್ಗೆ ಯುವ ಕಾಂಗ್ರೆಸ್​ ಬೀದಿಗಿಳಿದು ಹೋರಾಡಲಿದೆ. ಜನರ ನಡುವೆ ಹೋರಾಟಗಳನ್ನು ಸಂಘಟಿಸಲಿದೆ ಎಂದು ಶ್ರೀನಿವಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2017ರಲ್ಲಿ ಸೋನಿಯಾ ಗಾಂಧಿಯಿಂದ ಎಐಸಿಸಿ ಅಧ್ಯಕ್ಷ ಪದವಿ ಪಡೆದುಕೊಂಡಿದ್ದ ರಾಹುಲ್ ಗಾಂಧಿ 2019ರಲ್ಲಿ ಪಕ್ಷದ ಕಳಪೆ ಸಾಧನೆಯ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಹುಲ್ ಗಾಂಧಿ ಅವರ ರಾಜೀನಾಮೆಯು ಕಾಂಗ್ರೆಸ್ ಪಕ್ಷದಲ್ಲಿ ಕೆಲ ವಾರಗಳ ಕಾಲ ಕ್ಷೋಭೆ ಉಂಟು ಮಾಡಿತ್ತು. ರಾಹುಲ್ ಗಾಂಧಿ ಅವರ ಮನಸ್ಸು ಬದಲಿಸಲು ಹಲವು ನಾಯಕರು ಯತ್ನಿಸಿ ವಿಫಲರಾಗಿದ್ದರು. ಸತತ 19 ವರ್ಷಗಳ ಕಾಲ ಪಕ್ಷದ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ನಂತರದ ದಿನಗಳಲ್ಲಿ ಹಂಗಾಮಿ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಗಾಂಧಿ ಕುಟುಂಬಕ್ಕೆ ಹೊರತಾದವರೊಬ್ಬರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಅವರು ಹೇಳಿದ್ದರು. ಕಳೆದ 135 ವರ್ಷಗಳಿಂದ ನೆಹರು-ಗಾಂಧಿ ಕುಟುಂಬಕ್ಕೆ ಸೇರಿದವರೇ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿಕೊಂಡಿದ್ದಾರೆ.

(Youth Congress Passed Resolution to Appoint Rahul Gandhi as AICC Chief)

ಇದನ್ನೂ ಓದಿ: ಜಿಡಿಪಿ ಏರಿಕೆ ಎಂದರೆ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ  ರಾಹುಲ್ ಗಾಂಧಿ ವಾಗ್ದಾಳಿ

ಇದನ್ನೂ ಓದಿ: ನಾನೂ ಹುತಾತ್ಮರ ಮಗ, ಈ ಅವಮಾನ ಸಹಿಸುವುದಿಲ್ಲ; ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕರಣಕ್ಕೆ ರಾಹುಲ್ ಗಾಂಧಿ ಕಿಡಿ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ