ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ; ರಕ್ತದಲ್ಲಿ ಪತ್ರ!

Congress Protest: Happy Birthday PM Modi. Happy Unemployment Day ಎಂದು ರಕ್ತದಲ್ಲಿ ಪತ್ರ ಬರೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 80 ಕ್ಕೂ ಹೆಚ್ಚು ಜನ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದಲ್ಲಿ ಪತ್ರ ಬರೆದು ವಿರೋಧ ವ್ಯಕ್ತವಾಗಿದೆ.

ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ; ರಕ್ತದಲ್ಲಿ ಪತ್ರ!
ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ
Follow us
TV9 Web
| Updated By: ganapathi bhat

Updated on: Sep 15, 2021 | 2:48 PM

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಆಚರಣೆಯನ್ನು ನಿರುದ್ಯೋಗಿಗಳ ದಿನವಾಗಿ ಆಚರಿಸಲು ದಾವಣಗೆರೆ ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು ಪ್ರಧಾನಿಗೆ ಪೋಸ್ಟ್ ಮಾಡಿದ್ದಾರೆ. ದಾವಣಗೆರೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪೋಸ್ಟ್ ಮಾಡಲಾಗಿದೆ. ಅಷ್ಟೇ ಅಲ್ಲದೆ, ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಲಾಗಿದೆ. Happy Birthday PM Modi. Happy Unemployment Day ಎಂದು ರಕ್ತದಲ್ಲಿ ಪತ್ರ ಬರೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 80 ಕ್ಕೂ ಹೆಚ್ಚು ಜನ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದಲ್ಲಿ ಪತ್ರ ಬರೆದು ವಿರೋಧ ವ್ಯಕ್ತವಾಗಿದೆ.

ಇತ್ತ, ನರೇಂದ್ರ ಮೋದಿ ಜನ್ಮದಿನಕ್ಕೆ ಬಿಜೆಪಿ ವಿವಿಧ ಯೋಜನೆಗಳನ್ನು ಹಾಕಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್​ 17 ರಂದು 71 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೇ, ಮೋದಿ ರಾಜಕೀಯದಲ್ಲಿ ಉನ್ನತ ಹುದ್ದೆಗೇರಿ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ಸೇವಾ ಮತ್ತು ಸಮರ್ಪಣ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಅಭಿಯಾನ ಸೆಪ್ಟೆಂಬರ್​ 17 ರಿಂದ ಪ್ರಾರಂಭವಾಗಿ, 20 ದಿನಗಳ ಕಾಲ ನಡೆಯಲಿದೆ. ಈ 20 ದಿನಗಳ ಅಭಿಯಾನದ ಪ್ರಯುಕ್ತ ಬಿಜೆಪಿ ದೇಶಾದ್ಯಂದ ಸಾಮೂಹಿಕ ಸ್ವಚ್ಛತಾ ಕೆಲಸ ನಡೆಸಲಿದೆ. ಹಾಗೇ ರಕ್ತದಾನ ಶಿಬಿರಗಳಂಥ ಸಮಾಜ ಸೇವಾ ಕಾರ್ಯ ಹಮ್ಮಿಕೊಳ್ಳಲಿದೆ. ಆಚರಣೆ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈಗಾಗಲೇ ಎಲ್ಲ ಘಟಕಗಳಿಗೂ ನಿರ್ದೇಶನ ನೀಡಿದ್ದಾರೆ. ಉತ್ತರಪ್ರದೇಶ ಬಿಜೆಪಿ 71 ಸ್ಥಳಗಳಲ್ಲಿ ಗಂಗಾನದಿಯನ್ನು ಸ್ವಚ್ಛಗೊಳಿಸಲಿದೆ.

ಇನ್ನೊಂದು ಬಹುಮುಖ್ಯವಾಗಿ, ದೇಶಾದ್ಯಂತ ಎಲ್ಲ ಬಿಜೆಪಿ ಬೂತ್​ಗಳಿಂದ ಪ್ರಧಾನಿ ನರೇಂದ್ರ ಮೋದಿಗೆ 5 ಕೋಟಿಗಳಷ್ಟು ಅಂಚೆಪತ್ರ ಕಳಿಸುವ ಮೂಲಕ ಅಭಿನಂದನೆ ಸಲ್ಲಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ತಾವು ಸಾರ್ವಜನಿಕ ಸೇವೆಗೆ ತೊಡಗಿಸಿಕೊಳ್ಳುವುದಲ್ಲದೆ, ಬಿಜೆಪಿ ಪಕ್ಷದ ಪ್ರತಿ ಸದಸ್ಯರೂ ತಮ್ಮನ್ನು ತಾವು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ತುಂಬ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲು 5 ಕೋಟಿ ಪೋಸ್ಟ್ ಕಾರ್ಡ್​ ಕಳಿಸಿಕೊಡಲಾಗುವುದು ಎಂದು ಬಿಜೆಪಿ ಹೇಳಿಕೆ ಬಿಡುಗಡೆ ಮಾಡಿದೆ.

Cong Protest Unemployment Day

ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ

ಇದನ್ನೂ ಓದಿ: ಪ್ರಧಾನಿ ಮೋದಿಗೆ 5 ಕೋಟಿ ಪೋಸ್ಟ್​ಕಾರ್ಡ್​ ಕಳಿಸಲಿರುವ ಬಿಜೆಪಿ; ಹುಟ್ಟುಹಬ್ಬದ ನಿಮಿತ್ತ ಸೇವಾ-ಸಮರ್ಪಣ ಅಭಿಯಾನ

ಇದನ್ನೂ ಓದಿ: ಗುಜರಿ ವಸ್ತುಗಳಿಂದಲೇ ನಿರ್ಮಾಣವಾಯ್ತು 14 ಅಡಿ ಎತ್ತರದ ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ!

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ