Amit Shah: ಯುವಸಮುದಾಯ ಸುಭಾಷ್​ ಚಂದ್ರ ಬೋಸ್ ಜೀವನಚರಿತ್ರೆ ಓದಬೇಕು: ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ

ಸುಭಾಸ್ ಚಂದ್ರ ಬೋಸರ 125ನೇ ಜನ್ಮ ವರ್ಷಾಚರಣೆ ನಡೆಸಲು ಮೋದಿ ಕೈಗೊಂಡಿರುವ ನಿರ್ಧಾರದಿಂದ, ದೇಶದಲ್ಲಿ ದೊಡ್ಡ ಪ್ರಮಾಣದ ಬದಲಾವಣೆಯಾಗಲಿದೆ ಎಂದು ಅಮಿತ್ ಶಾ ತಿಳಿಸಿದರು.

Amit Shah: ಯುವಸಮುದಾಯ ಸುಭಾಷ್​ ಚಂದ್ರ ಬೋಸ್ ಜೀವನಚರಿತ್ರೆ ಓದಬೇಕು: ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ
ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ
Follow us
TV9 Web
| Updated By: ganapathi bhat

Updated on:Apr 06, 2022 | 7:53 PM

ಕೊಲ್ಕತ್ತಾ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್​ ಚಂದ್ರ ಬೋಸರ 125ನೇ ಜನ್ಮ ದಿನವನ್ನು ಆಚರಿಸಲು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಇಂದು (ಫೆ.19) ಹೇಳಿದರು. ಇದರಿಂದಾಗಿ ದೇಶದಲ್ಲಿ ದೊಡ್ಡ ಬದಲಾವಣೆ ಉಂಟಾಗಲಿದೆ ಎಂದೂ ಅವರು ತಿಳಿಸಿದರು.

ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಅಮಿತ್ ಶಾ, ರಾಷ್ಟ್ರೀಯ ಗ್ರಂಥಾಲಯದಲ್ಲಿ ನಡೆದ ಶೌರ್ಯಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ‘ಯುವಸಮುದಾಯವು ನೇತಾಜಿ ಸುಭಾಷ್ ಚಂದ್ರ ಬೋಸರ ಜೀವನಚರಿತ್ರೆಯನ್ನು ಓದಬೇಕು ಎಂದು ಕರೆನೀಡಿದರು. ಸುಭಾಷ್ ಚಂದ್ರ ಬೋಸರ ಜೀವನಚರಿತ್ರೆ ಬಹಳಷ್ಟು ವಿಚಾರಗಳನ್ನು ಕಲಿಸಿಕೊಡುತ್ತದೆ. ಅವರ 125ನೇ ಜನ್ಮ ದಿನಾಚರಣೆಯನ್ನು ಆಚರಿಸಲು ಸಮಿತಿಯೊಂದನ್ನು ರಚಿಸಲಾಗಿದೆ’ ಎಂದು ಹೇಳಿದರು.

ಸುಭಾಸ್ ಚಂದ್ರ ಬೋಸರ 125ನೇ ಜನ್ಮ ವರ್ಷಾಚರಣೆ ನಡೆಸಲು ಮೋದಿ ಕೈಗೊಂಡಿರುವ ನಿರ್ಧಾರದಿಂದ, ದೇಶದಲ್ಲಿ ದೊಡ್ಡ ಪ್ರಮಾಣದ ಬದಲಾವಣೆಯಾಗಲಿದೆ ಎಂದೂ ಅಮಿತ್ ಶಾ ತಿಳಿಸಿದರು.

ಮಮತಾ ಬ್ಯಾನರ್ಜಿ ಸರ್ಕಾರವನ್ನು ತೆರವುಗೊಳಿಸಿ ಆ ಜಾಗದಲ್ಲಿ ಬಿಜೆಪಿ ಸರ್ಕಾರ ತರುವುದಷ್ಟೇ ನಮ್ಮ ಉದ್ದೇಶವಲ್ಲ. ಪಶ್ಚಿಮ ಬಂಗಾಳದ ಒಟ್ಟಾರೆ ಪರಿಸ್ಥಿತಿ ಬದಲಿಸಬೇಕು. ಬಡವರು, ಮಹಿಳೆಯರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ. ಬಂಗಾಳದಲ್ಲಿ ಅಧಿಕಾರದ ಬದಲಾವಣೆಯ ಬಗ್ಗೆ ನಾವು ಮಾತನಾಡುತ್ತಿಲ್ಲ. ಗಂಗಾಸಾಗರಕ್ಕೆ ಗೌರವ ತರುವ ಬಗ್ಗೆ, ಇಲ್ಲಿನ ಮೀನುಗಾರರ ಬದುಕಿನಲ್ಲಿ ಬದಲಾವಣೆ ತರುವ ಬಗ್ಗೆ ನಾವು ಮಾತನಾಡುತ್ತಿದ್ದೇವೆ ಎಂದು ಶಾ ನಿನ್ನೆ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಮಮತಾ ಬ್ಯಾನರ್ಜಿ ಸರ್ಕಾರ ಅಧಿಕಾರದಲ್ಲಿರುವವರೆಗೆ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಾಗಿರಲು ಸಾಧ್ಯವೇ? ಬಂಗಾಳ ಪ್ರಗತಿಯ ದಿಕ್ಕಿನಲ್ಲಿ ಮುನ್ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದರು.

ಮುಂಬರುವ ಏಪ್ರಿಲ್-ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣಾ ಪೂರ್ವ ತಯಾರಿ, ಪಕ್ಷ ಸಂಘಟನೆಯಲ್ಲಿ ಬಿಜೆಪಿ ಪಕ್ಷ ಭರ್ಜರಿಯಾಗಿ ತೊಡಗಿಕೊಂಡಿದೆ. ಬಿಜೆಪಿ ನಾಯಕ ಅಮಿತ್ ಶಾ ಪಶ್ಚಿಮ ಬಂಗಾಳಕ್ಕೆ ಎರಡು ದಿನದ ಪ್ರವಾಸ ಕೈಗೊಂಡಿದ್ದಾರೆ. ಎರಡನೇ ದಿನ ಪ್ರವಾಸದಲ್ಲಿ ಇಂದು ಭಾಗವಹಿಸಿದ್ದಾರೆ.

ಬಂಗಾಳಿ ನಟ ಯಶ್ ದಾಸ್​ಗುಪ್ತ ಭೇಟಿ

ಶೌರ್ಯಾಂಜಲಿ ಕಾರ್ಯಕ್ರಮದಲ್ಲಿ ಅಮಿತ್ ಶಾ

ಇದನ್ನೂ ಓದಿ: Amit Shah: ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಶೇ 33 ಮೀಸಲಾತಿ: ಪಶ್ಚಿಮ ಬಂಗಾಳ ರ‍್ಯಾಲಿಯಲ್ಲಿ ಅಮಿತ್ ಶಾ

ಜಮ್ಮು-ಕಾಶ್ಮೀರಕ್ಕೆ ಸೂಕ್ತ ಸಮಯದಲ್ಲಿ ರಾಜ್ಯ ಸ್ಥಾನಮಾನ ಸಿಗುತ್ತದೆ: ಲೋಕಸಭೆಯಲ್ಲಿ ಅಮಿತ್ ಶಾ ಪ್ರತ್ಯುತ್ತರ

Published On - 4:11 pm, Fri, 19 February 21

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ