AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTube: ಯೂಟ್ಯೂಬ್​ನಿಂದ ನಾನು ತಿಂಗಳಿಗೆ 4 ಲಕ್ಷ ರೂಪಾಯಿ ಸಂಪಾದಿಸ್ತೇನೆ – ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ

ಯೂಟ್ಯೂಬ್ನಿಂದ ನಾನು ತಿಂಗಳಿಗೆ 4 ಲಕ್ಷ ರೂಪಾಯಿ ಸಂಪಾದಿಸ್ತೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೋವಿಡ್ ಸಮಯದಲ್ಲಿ ತಮ್ಮ ಸಮಯವನ್ನು ಹೇಗೆ ಬಳಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ

YouTube: ಯೂಟ್ಯೂಬ್​ನಿಂದ ನಾನು ತಿಂಗಳಿಗೆ 4 ಲಕ್ಷ ರೂಪಾಯಿ ಸಂಪಾದಿಸ್ತೇನೆ - ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ
ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ
TV9 Web
| Edited By: |

Updated on:Sep 17, 2021 | 12:18 PM

Share

ಮುಂಬೈ: ಮಹಾಮಾರಿ ಕೊರೊನಾ ಸಮಯದಲ್ಲಿ ಲಾಕ್ಡೌನ್ನಿಂದಾಗಿ ಜನರು ಕೆಲಸವಿಲ್ಲದೆ ಮನೆಯಲ್ಲೇ ಕುಳಿತಿದ್ದಾಗ ಅದೆಷ್ಟೂ ಮಂದಿ ತಮ್ಮ ಹೊಸ ಹೊಸ ಐಡಿಯಾಗಳಿಂದ ಯೂಟ್ಯೂಬ್ ಚಾನಲ್ ಕ್ರಿಎಟ್ ಮಾಡಿ ಹಣ ಮಾಡಿದ್ದಾರೆ. ಹೊಸ ಹೊಸ ಪ್ರತಿಭೆಗಳು ಈ ಸಮಯದಲ್ಲಿ ಅನಾವರಣಗೊಂಡಿವೆ. ಅದರಂತೆಯೇ ಯೂಟ್ಯೂಬ್ನಿಂದ ನಾನು ತಿಂಗಳಿಗೆ 4 ಲಕ್ಷ ರೂಪಾಯಿ ಸಂಪಾದಿಸ್ತೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೋವಿಡ್ ಸಮಯದಲ್ಲಿ ತಮ್ಮ ಸಮಯವನ್ನು ಹೇಗೆ ಬಳಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಪ್ರಗತಿಯನ್ನು ಪರಿಶೀಲಿಸಲು ಹೋದಾಗ, ಹರಿಯಾಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ನಿತಿನ್ ಗಡ್ಕರಿ ಕೊರೊನಾ ಸಮಯದಲ್ಲಿ ಕಳೆದ ದಿನಗಳನ್ನು ಮೆಲುಕು ಹಾಕಿದ್ದಾರೆ. ಕೋವಿಡ್ -19 ಸಮಯದಲ್ಲಿ, ನಾನು ಎರಡು ಕೆಲಸಗಳನ್ನು ಮಾಡಿದ್ದೇನೆ. ನಾನು ಮನೆಯಲ್ಲಿ ಅಡುಗೆ ಮಾಡುತ್ತಿದ್ದೆ ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಉಪನ್ಯಾಸ ನೀಡುತ್ತಿದೆ.

“ನಾನು ಆನ್‌ಲೈನ್‌ನಲ್ಲಿ ಅನೇಕ ಉಪನ್ಯಾಸಗಳನ್ನು ನೀಡಿದ್ದೇನೆ, ಹಾಗೂ ಅದನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸದ್ಯ ಈಗ ಅನೇಕ ಮಂದಿ ಆ ವಿಡಿಯೋಗಳನ್ನು ನೋಡುತ್ತಿದ್ದಾರೆ. ದೊಡ್ಡ ವೀಕ್ಷಕರ ಬಳಗದಿಂದಾಗಿ, ಯೂಟ್ಯೂಬ್ ಈಗ ನನಗೆ ತಿಂಗಳಿಗೆ 4 ಲಕ್ಷ ರೂಪಾಯಿಗಳನ್ನು ನೀಡುತ್ತಿದೆ ಎಂದು ನಿತಿನ್ ಗಡ್ಕರಿ ಕೊರೊನಾ ಸಮಯದಲ್ಲಾದ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದ್ದಾರೆ.

ನಾನು ನನ್ನ ಮಾವನ ಮನೆಯನ್ನು ಕೆಡವಲು ಆದೇಶ ನೀಡಿದ್ದೆ ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ತನ್ನ ಪತ್ನಿಗೆ ಹೇಳದೆ ತನ್ನ ಮಾವನ ಮನೆಯನ್ನು ಕೆಡವಲು ಆದೇಶ ನೀಡಿದ್ದೆ ಎಂಬ ತನ್ನ ಹಿಂದಿನ ಒಂದು ಘಟನೆಯನ್ನು ನೆನೆಪಿಸಿಕೊಂಡಿದ್ದಾರೆ.

ನಾನು ಹೊಸದಾಗಿ ಮದುವೆಯಾಗಿದ್ದೆ. ನನ್ನ ಮಾವನ ಮನೆ ರಸ್ತೆ ಮಧ್ಯದಲ್ಲಿತ್ತು. ನನ್ನ ಹೆಂಡತಿಗೆ ಹೇಳದೆ, ನಾನು ನನ್ನ ಮಾವನ ಮನೆಯನ್ನು ಕೆಡವಲು ಆದೇಶಿಸಿದ್ದೆ. ಆದ್ರೆ ತನಗೂ ಅಲ್ಲಿ ಮನೆ ಇದೆ ಮತ್ತು ರಸ್ತೆ ನಿರ್ಮಿಸಲು ಅದನ್ನು ನೆಲಸಮ ಮಾಡಬೇಕಾಗಿದೆ ಎಂದು ಅಧಿಕಾರಿಗಳು ನನಗೆ ತಿಳಿಸಿದ್ದ ಮೇಲೆಯೇ ಈ ಸಂಗತಿ ನನಗೆ ತಿಳಿದದ್ದು ಎಂದರು.

ಇನ್ನು ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯನ್ನು ಸುಮಾರು ₹ 95,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಮಾರ್ಚ್ 2023 ರ ವೇಳೆಗೆ ಮುಗಿಯಲಿದೆ. ಬಹುತೇಕ ಕೆಲಸಗಳನ್ನು ಗುತ್ತಿಗೆದಾರರಿಗೆ ಈಗಾಗಲೇ ನೀಡಲಾಗಿದೆ. ಗುರುಗ್ರಾಮದ ಲೋಡ್ಕಿ ಗ್ರಾಮದಲ್ಲಿ ನಡೆಯುತ್ತಿರುವ ಯೋಜನೆಯ ಕೆಲಸದ ಸ್ಥಿತಿಯನ್ನು ಪರಿಶೀಲಿಸಿದ ನಂತರ ಗಡ್ಕರಿ ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಗುರುಗ್ರಾಮ್ ಲೋಕಸಭಾ ಸದಸ್ಯ ರಾವ್ ಇಂದರ್ಜಿತ್ ಸಿಂಗ್ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಜಿಲ್ಲಾಡಳಿತ, ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: ದಲಿತರ ನಿಂದನೆ ಮಾಡಿದ ಬಿಗ್​ ಬಾಸ್​ ಸ್ಪರ್ಧಿ​ಗೆ ಬಿಸಿ ಮುಟ್ಟಿಸಿದ ಯೂಟ್ಯೂಬ್​

Published On - 12:07 pm, Fri, 17 September 21

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ