YS Sharmila: ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

| Updated By: ರಶ್ಮಿ ಕಲ್ಲಕಟ್ಟ

Updated on: Jan 16, 2024 | 8:30 PM

ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್​ ಶರ್ಮಿಳಾ ನೇಮಕಗೊಂಡಿದ್ದಾರೆ.

YS Sharmila: ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ
ವೈಎಸ್​ ಶರ್ಮಿಳಾ
Image Credit source: India Today
Follow us on

ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್​ ಶರ್ಮಿಳಾ(YS Sharmila) ನೇಮಕಗೊಂಡಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದ್ದರಿಂದ ಜನವರಿ 4 ರಂದು ಕಾಂಗ್ರೆಸ್‌ಗೆ ಸೇರಿದರು.
ಆಂಧ್ರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ ಒಂದು ದಿನದ ನಂತರ ಕಾಂಗ್ರೆಸ್​ನಲ್ಲಿ ಈ ಬೆಳವಣಿಗೆ ನಡೆದಿದೆ.

ಕಾಂಗ್ರೆಸ್ ನಾಯಕ ಗಿಡುಗು ರುದ್ರರಾಜು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಜನವರಿ 15 ಸೋಮವಾರ ರಾಜೀನಾಮೆ ನೀಡಿದ್ದರು. ಶರ್ಮಿಳಾ ಅವರು ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿದರು ಮತ್ತು ಜನವರಿ 4 ರಂದು ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.


ಈ ಬೆಳವಣಿಗೆಗೆ ಒಂದು ದಿನ ಮೊದಲು, ಸಿಎಂ ಜಗನ್ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಕೆಲವು ವಿರೋಧ ಪಕ್ಷದ ಮೈತ್ರಿಗಳು ಕುಟುಂಬಗಳನ್ನು ಒಡೆಯಲು ಪ್ರಯತ್ನಿಸುತ್ತಿವೆ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದರು, ಸುಳ್ಳು ಭರವಸೆಗಳನ್ನು ನೀಡಿ ಮೋಸಕ್ಕೆ ದಾರಿ ಮಾಡಿಕೊಡುತ್ತಾರೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: YS Sharmila: ಆಂಧ್ರಪ್ರದೇಶ ಕಾಂಗ್ರೆಸ್​ನಲ್ಲಿ ವೈಎಸ್​ ಶರ್ಮಿಳಾ ಬಗ್ಗೆ ಶುರುವಾಯ್ತಾ ಅಪಸ್ವರ?

ಒಂದು ದಿನದ ನಂತರ, ಖರ್ಗೆ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಶರ್ಮಿಳಾ, ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ನೋಡುವುದು ನನ್ನ ತಂದೆಯ ಕನಸಾಗಿತ್ತು ಮತ್ತು ನಾನು ಅದರ ಭಾಗವಾಗಲಿದ್ದೇನೆ ಎಂಬುದು ಸಂತಸದ ಸುದ್ದಿ, ಅದು ನಡೆದೇ ನಡೆಯುತ್ತದೆ ಎಂದಿದ್ದರು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:26 pm, Tue, 16 January 24