ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಭೇಟಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ವೈಎಸ್ಆರ್ ಕಾಂಗ್ರೆಸ್ನ ಎಂಎಲ್ಸಿ ಮಯಾನಾ ಜಾಕಿಯಾ ಖಾನಂ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಯಾನಾ ಜಾಕಿಯಾ ಖಾನಂ ಮತ್ತು ಇತರ ಇಬ್ಬರ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನೀಡಿದ ದೂರಿನ ಪ್ರಕಾರ, ಖಾನಂ, ಆಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೃಷ್ಣ ತೇಜ ಮತ್ತು ಮತ್ತೊಬ್ಬ ವ್ಯಕ್ತಿ ಪಿ ಚಂದ್ರಶೇಖರ್ ವಿಐಪಿ ದರ್ಶನ ಮತ್ತು ವೇದಾಶೀರ್ವಾದಂ, ಧಾರ್ಮಿಕ ವಿಧಿಗಳನ್ನು ನೀಡುವುದಾಗಿ ವ್ಯಕ್ತಿಯೊಬ್ಬನಿಗೆ 65,000 ರೂ.ಗಳನ್ನು ವಂಚಿಸಿದ್ದಾರೆ ಎಂಬುದು ತಿಳಿದುಬಂದಿದೆ.
ದೂರನ್ನು ಸ್ವೀಕರಿಸಿದ ನಂತರ, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಯಿತು. ಈ ಹಿಂದೆ ಇದೇ ಪ್ರಕರಣದಲ್ಲಿ 41 ವರ್ಷದ ಉದ್ಯಮಿಯೊಬ್ಬರಿಗೆ ತಿರುಮಲ ದೇವಸ್ಥಾನದಲ್ಲಿ ವಿಐಪಿ ದರ್ಶನಕ್ಕೆ ಅನುಕೂಲ ಮಾಡಿಕೊಡುವುದಾಗಿ ಹೇಳಿ ಸೈಬರ್ ಕ್ರಿಮಿನಲ್‌ಗಳು 64,000 ರೂ.ಗಳನ್ನು ವಂಚಿಸಿದ್ದರು.
ವ್ಯಕ್ತಿಗೆ ತಿರುಪತಿ ದೇವಸ್ಥಾನದಲ್ಲಿ ವಿಐಪಿ ದರ್ಶನ ನೀಡುವುದಾಗಿ ವಾಟ್ಸಾಪ್ ಸಂದೇಶ ಬಂದಿತ್ತು. ಕಳುಹಿಸಿದವರು ತಿರುಮಲ ತಿರುಪತಿ ದೇವಸ್ಥಾನದ ಉದ್ಯೋಗಿ ಎಂದು ಪರಿಚಯಿಸಿಕೊಂಡರು. ಈ ಸಂದೇಶಕ್ಕೆ ಪ್ರತಿಕ್ರಿಯಿಸಿದ ಉದ್ಯಮಿ ರಾಕೇಶ್ ಆನಂದ್ ಲಾಲ್ವಾನಿ, ಬುಕಿಂಗ್ ಮೊತ್ತವನ್ನು ಪಾವತಿಸುವಂತೆ ಆರೋಪಿಗಳು ಮನವೊಲಿಸಿದರು.
ಆರಂಭದಲ್ಲಿ, ಲಾಲ್ವಾನಿ 30,000 ರೂ.ಗಳನ್ನು ವರ್ಗಾಯಿಸಿದರು, ಮತ್ತು ನಂತರ ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿ 29,000 ರೂ. ಅಲ್ಲದೆ ಹೆಚ್ಚುವರಿಯಾಗಿ 5 ಸಾವಿರ ರೂ. ಪಡೆಯಲಾಗಿತ್ತು. ಲಾಲ್ವಾನಿ ಅವರ ದೂರಿನ ಮೇರೆಗೆ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ