ದೇವಸ್ಥಾನದಲ್ಲಿ ಸೆಲ್ಫಿ ವೇಳೆ ಅಂತರ ಕಾಯ್ದುಕೊಳ್ಳುವಂತೆ ಸ್ವಚ್ಛತಾ ಸಿಬ್ಬಂದಿಗೆ ಸನ್ನೆ ಮಾಡಿದ ನಟಿ, ರಾಜಕಾರಣಿ ರೋಜಾ

ನಟಿ ಹಾಗೂ ರಾಜಕಾರಣಿ ರೋಜಾ ಅವರು ತಮಿಳುನಾಡಿನ ದೇವಸ್ಥಾನವೊಂದಕ್ಕೆ ಭೇಟಿ ನೀಡಿದಾಗ ಜನರು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ, ಆದರೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ನಗು ನಗುತ್ತಾ ಬಂದಿದ್ದ ಸ್ವಚ್ಛತಾ ಸಿಬ್ಬಂದಿಗೆ ಅಂತರ ಕಾಯ್ದುಕೊಳ್ಳುವಂತೆ ರೋಜಾ ಸನ್ನೆ ಮಾಡಿದ ಅವರ ಮುಖವೇ ಬಾಡಿ ಹೋಗಿತ್ತು.

ದೇವಸ್ಥಾನದಲ್ಲಿ ಸೆಲ್ಫಿ ವೇಳೆ ಅಂತರ ಕಾಯ್ದುಕೊಳ್ಳುವಂತೆ ಸ್ವಚ್ಛತಾ ಸಿಬ್ಬಂದಿಗೆ ಸನ್ನೆ ಮಾಡಿದ ನಟಿ, ರಾಜಕಾರಣಿ ರೋಜಾ
ರೋಜಾImage Credit source: India Today
Follow us
ನಯನಾ ರಾಜೀವ್
|

Updated on:Jul 17, 2024 | 10:22 AM

ಸಾಮಾನ್ಯವಾಗಿ ರಾಜಕಾರಣಿಗಳಿಗಿಂತ ನಟರ ಬಗ್ಗೆ ಜನರಿಗೆ ಕುತೂಹಲ ಜಾಸ್ತಿ, ಒಂದೊಮ್ಮೆ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡರೆ ಅವರನ್ನು ಮುತ್ತಿಕೊಳ್ಳುತ್ತಾರೆ, ಅಂಥದ್ದೇ ಘಟನೆ ತಮಿಳುನಾಡಿನ ದೇವಸ್ಥಾನದಲ್ಲೂ ನಡೆಯಿತು. ನಟಿ ಹಾಗೂ ವೈಎಸ್​ಆರ್​ಪಿ ನಾಯಕಿ ರೋಜಾ ಸೆಲ್ವಸ್ವಾಮಿ ತಮ್ಮ ಪತಿ ಜತೆಗೆ ತಮಿಳುನಾಡಿನ ತಿರುಚೆಂದೂರ್ ಮುರುಗನ್ ದೇವಸ್ಥಾನಕ್ಕೆ ತೆರಳಿದ್ದರು.

ಅಲ್ಲಿದ್ದವರು ನಾ ಮುಂದು ತಾ ಮುಂದು ಎಂದು ಸೆಲ್ಫಿಗೆ ಮುಗಿ ಬಿದ್ದರು, ಆದರೆ ಸ್ವಚ್ಛತಾ ಸಿಬ್ಬಂದಿ ಅವರ ಬಳಿಗೆ ಬಂದಾಗ ಅಂತರ ಕಾಯ್ದುಕೊಳ್ಳುವಂತೆ ಸನ್ನೆ ಮಾಡಿರುವ ವಿಡಿಯೋ ಇದೀಗ ಹೆಚ್ಚು ವೈರಲ್ ಆಗುತ್ತಿದೆ.

ರೋಜಾ ಮತ್ತು ಅವರ ಪತಿ ಮತ್ತು ನಿರ್ದೇಶಕ ಆರ್‌ಕೆ ಸೆಲ್ವಮಣಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ತಿರುಚೆಂದೂರಿನಲ್ಲಿ ಈ ಘಟನೆ ಸಂಭವಿಸಿದೆ. ಹಲವಾರು ಭಕ್ತರು ಮತ್ತು ದೇವಾಲಯದ ಸಿಬ್ಬಂದಿ ದಂಪತಿ ಬಳಿಗೆ ಬಂದು ತಮ್ಮ ಸೆಲ್ ಫೋನ್‌ಗಳೊಂದಿಗೆ ಸೆಲ್ಫಿ ತೆಗೆದುಕೊಂಡರು.

ಮತ್ತಷ್ಟು ಓದಿ:ಚಂದ್ರಬಾಬು ನಾಯ್ಡು ಜೊತೆ ಸೇರಿ ಎನ್​ಟಿಆರ್ ಅವರನ್ನು ಮತ್ತೆ ಕೊಂದಿದ್ದಾರೆ ರಜಿನೀಕಾಂತ್: ನಟಿ ರೋಜಾ

ಆ ಸಮಯದಲ್ಲಿ, ದೇವಸ್ಥಾನದಲ್ಲಿ ಕೆಲಸ ಮಾಡುವ ಇಬ್ಬರು ಮಹಿಳಾ ಶುಚಿಗೊಳಿಸುವ ಸಿಬ್ಬಂದಿ ಫೋಟೊಗಾಗಿ ರೋಜಾ ಅವರ ಬಳಿಗೆ ಬಂದಾಗ ಅವರು ಅಂತರ ಕಾಯ್ದುಕೊಳ್ಳುವಂತೆ ಸನ್ನೆ ಮಾಡಿದ್ದು ಸಿಬ್ಬಂದಿ ಮುಜುಗರಕ್ಕೀಡಾಗಿದ್ದಾರೆ.

ಮಹಿಳಾ ಕಾರ್ಮಿಕರು ತಮ್ಮ ಹಿಂದೆ ಕೈ ಕಟ್ಟಿಕೊಂಡು ರೋಜಾ ಅವರೊಂದಿಗೆ ಸೆಲ್ಫಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿತು. ವೈಎಸ್‌ಆರ್‌ಸಿಪಿ ಅಥವಾ ಆಂಧ್ರ ಪ್ರದೇಶ ಸರ್ಕಾರವು ವೀಡಿಯೊಗೆ ಪ್ರತಿಕ್ರಿಯಿಸಿಲ್ಲ.

ರೋಜಾ ಅವರ ನಡವಳಿಕೆಯಿಂದ ಬೇಸರಗೊಂಡ ಸಿಬ್ಬಂದಿ ದೂರದಲ್ಲೇ ನಿಂತು ಒಲ್ಲದ ಮನಸ್ಸಿನಿಂದ ಸೆಲ್ಫಿ ತೆಗೆದುಕೊಂಡು ತೆರಳಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ಎಲ್ಲರೂ ನಟಿಯನ್ನು ಟೀಕಿಸಲು ಶುರು ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:35 am, Wed, 17 July 24

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ