AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರದ ಯುವರಾಜರು; ರಾಹುಲ್ ಗಾಂಧಿ, ತೇಜಸ್ವಿ ಯಾದವ್ ವಿರುದ್ಧ ಪ್ರಧಾನಿ ಮೋದಿ ನೇರ ವಾಗ್ದಾಳಿ

ಬಿಹಾರದಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮುಜಫರ್‌ಪುರದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಆರ್‌ಜೆಡಿ-ಕಾಂಗ್ರೆಸ್ ಎರಡೂ ಎಣ್ಣೆ-ನೀರಿನಂತೆ. ಆದರೂ ಬಿಹಾರದಲ್ಲಿ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿವೆ ಎಂದು ಟೀಕಿಸಿದ್ದಾರೆ.

ಭ್ರಷ್ಟಾಚಾರದ ಯುವರಾಜರು; ರಾಹುಲ್ ಗಾಂಧಿ, ತೇಜಸ್ವಿ ಯಾದವ್ ವಿರುದ್ಧ ಪ್ರಧಾನಿ ಮೋದಿ ನೇರ ವಾಗ್ದಾಳಿ
Modi In Bihar Rally
ಸುಷ್ಮಾ ಚಕ್ರೆ
|

Updated on: Oct 30, 2025 | 3:57 PM

Share

ಪಾಟ್ನಾ, ಅಕ್ಟೋಬರ್ 30: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆ ಎರಡೂ ಪಕ್ಷಗಳು “ನೀರು ಮತ್ತು ಎಣ್ಣೆಯಂತೆ” ಎಂದು ಟೀಕಿಸಿದ್ದಾರೆ. ಮಹಾಘಟಬಂಧನ್ ಮೈತ್ರಿದಾರರ ನಡುವೆ ಆಳವಾದ ಆಂತರಿಕ ಬಿರುಕುಗಳಿವೆ. ಅಧಿಕಾರದ ದುರಾಸೆಯಿಂದ ಎರಡೂ ಪಕ್ಷಗಳು ಒಗ್ಗಟ್ಟಾಗಿರುವಂತೆ ನಾಟಕವಾಡುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಅವರನ್ನು ಗುರಿಯಾಗಿಸಿಕೊಂಡ ಪಿಎಂ ಮೋದಿ, ಅವರಿಬ್ಬರನ್ನು ಭ್ರಷ್ಟಾಚಾರದ ಯುವರಾಜರು ಎಂದು ಟೀಕಿಸಿದ್ದಾರೆ. ಬಿಹಾರವನ್ನು ಲೂಟಿ ಮಾಡಲು ಯಾವುದೇ ಬೆಲೆ ತೆತ್ತಾದರೂ ಅಧಿಕಾರವನ್ನು ಹಿಡಿಯಲು ಆರ್‌ಜೆಡಿ ಮತ್ತು ಕಾಂಗ್ರೆಸ್ ಕೈಜೋಡಿಸಿವೆ ಎಂದು ಮೋದಿ ಆರೋಪಿಸಿದರು.

ಇದನ್ನೂ ಓದಿ: ಮತಕ್ಕಾಗಿ ಮೋದಿ ಡ್ಯಾನ್ಸ್ ಬೇಕಿದ್ರೂ ಮಾಡುತ್ತಾರೆ; ಬಿಹಾರದಲ್ಲಿ ರಾಹುಲ್ ಗಾಂಧಿ ಲೇವಡಿ

“ಬಿಹಾರದ ಚುನಾವಣಾ ಯುದ್ಧದಲ್ಲಿ ತಮ್ಮನ್ನು ತಾವು ಯುವರಾಜ್ ಎಂದು ಪರಿಗಣಿಸುವ ಯುವರಾಜರ ಜೋಡಿ ಸುಳ್ಳು ಭರವಸೆಗಳ ಅಂಗಡಿಗಳನ್ನು ತೆರೆದಿದ್ದಾರೆ. ಒಬ್ಬರು ಭಾರತದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜನಾದರೆ ಇನ್ನೊಬ್ಬರು ಬಿಹಾರದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ. ಅವರಿಬ್ಬರೂ ಸಾವಿರಾರು ಕೋಟಿ ರೂಪಾಯಿಗಳ ಹಗರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಇಬ್ಬರೂ ನಿರಂತರವಾಗಿ ನನ್ನ ವಿರುದ್ಧ ನಿಂದನೆಗಳನ್ನು ಮಾಡುತ್ತಿದ್ದಾರೆ. ಆದರೆ ಇಂಥವರಿಂದ ನಾವು ಇನ್ನೇನು ನಿರೀಕ್ಷಿಸಬಹುದು? ನನ್ನ ಹೆಸರು ಜಪಿಸದಿದ್ದರೆ ಅವರಿಗೆ ಊಟ ಜೀರ್ಣವಾಗುವುದಿಲ್ಲ” ಎಂದು ಮೋದಿ ಲೇವಡಿ ಮಾಡಿದ್ದಾರೆ.

ವಿರೋಧ ಪಕ್ಷಗಳ ಮೈತ್ರಿಕೂಟವು ಹೀನಾಯಕರವಾದ ಸೋಲಿನತ್ತ ಸಾಗುತ್ತಿದೆ ಎಂದು ಸಮೀಕ್ಷೆಗಳು ತೋರಿಸಿವೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್ ಮತ್ತು ಆರ್​ಜೆಡಿ ನಾಯಕರು ತಮ್ಮ ಪ್ರಣಾಳಿಕೆಯ ಮೂಲಕ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ, ವಿನಾಕಾರಣ ಬಿಜೆಪಿ ಹಾಗೂ ಎನ್​ಡಿಎ ಮೈತ್ರಿಕೂಟದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕುರಿತ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು; ಧರ್ಮೇಂದ್ರ ಪ್ರಧಾನ್ ಒತ್ತಾಯ

“ಛತ್ ಪೂಜೆಯ ನಂತರ ಇದು ನನ್ನ ಮೊದಲ ಬಿಹಾರ ಪ್ರವಾಸ. ಇದು ಈಗ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಈ ಹಬ್ಬವು ಭಕ್ತಿಗಾಗಿ ಮಾತ್ರವಲ್ಲದೆ ಸಮಾನತೆಯ ದೃಷ್ಟಿಯಿಂದಲೂ ಮಹತ್ವದ್ದಾಗಿದೆ. ಈ ಹಬ್ಬಕ್ಕೆ ನಮ್ಮ ಸರ್ಕಾರ ಯುನೆಸ್ಕೋ ಪರಂಪರೆಯ ಟ್ಯಾಗ್ ಪಡೆಯಲು ಪ್ರಯತ್ನಿಸುತ್ತಿದೆ. ಆದರೆ, ರಾಹುಲ್ ಗಾಂಧಿ ಛತ್ ಪೂಜೆಗೆ, ಜನರ ಭಕ್ತಿಗೆ ಅವಮಾನ ಮಾಡಿದ್ದಾರೆ. ಇದನ್ನು ನೌಟಂಕಿ, ನಾಟಕ ಎಂದು ಕರೆದಿದ್ದಾರೆ” ಎಂದು ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!