ಬಿಜೆಪಿ ಸೇರಿದ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್, ರಾಷ್ಟ್ರೀಯ ಜವಾಬ್ದಾರಿ ನೀಡಿ ಸ್ವಾಗತಿಸಿ ಪಕ್ಷ

ಭಾರತೀಯ ಕ್ರಿಕೆಟಿಗ ಯುಜುವೇಂದ್ರ ಚಾಹಲ್ ಬಿಜೆಪಿ ಸೇರಿದ್ದಾರೆ. ಅವರನ್ನು ಬಿಜೆಪಿಯ ರಾಷ್ಟ್ರೀಯ ಒಬಿಸಿ ಮೋರ್ಚಾದ ವಿಶೇಷ ಆಹ್ವಾನಿತ ಸದಸ್ಯರಾಗಿ ನೇಮಿಸಲಾಗಿದೆ. ಈ ಬೆಳವಣಿಗೆ ಚಾಹಲ್ ಅವರನ್ನು ಕ್ರೀಡಾ ವಲಯದಿಂದ ರಾಜಕೀಯ ವಲಯಕ್ಕೆ ಪರಿಚಯಿಸಿದೆ. ಪಕ್ಷದ ಒಬಿಸಿ ಸಮುದಾಯದ ಸಂಘಟನೆಗೆ ಅವರ ಕೊಡುಗೆ ನಿರೀಕ್ಷಿಸಲಾಗಿದೆ. ಈ ಮೂಲಕ ಕ್ರಿಕೆಟ್ ಅಂಗಳದಲ್ಲಿ ಮಿಂಚಿದ ಚಾಹಲ್ ಈಗ ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಬಿಜೆಪಿ ಸೇರಿದ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್, ರಾಷ್ಟ್ರೀಯ ಜವಾಬ್ದಾರಿ ನೀಡಿ ಸ್ವಾಗತಿಸಿ ಪಕ್ಷ
ಚಾಹಲ್

Updated on: Nov 21, 2026 | 10:20 PM

ನವದೆಹಲಿ, ನವೆಂಬರ್ 21: ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಈಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾದ ಪರಿಷ್ಕೃತ ಕಾರ್ಯಕಾರಿ ಸಮಿತಿಯಲ್ಲಿ ಅವರನ್ನು ವಿಶೇಷ ಆಹ್ವಾನಿತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಶನಿವಾರ ಬಿಜೆಪಿ ಪ್ರಕಟಿಸಿದ ಹೊಸ ಪಟ್ಟಿಯಲ್ಲಿ ಚಾಹಲ್ ಹೆಸರು ಸೇರಿದೆ.

ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಅಮರಪಾಲ್ ಮೌರ್ಯ ಅವರು ಚಾಹಲ್ ಅವರನ್ನು ಪಕ್ಷದ ಸಂಘಟನೆಯೊಂದಿಗೆ ಸೇರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಯಿಂದ ಕ್ರಿಕೆಟ್ ಮೈದಾನದಲ್ಲಿ ತಮ್ಮ ಬೌಲಿಂಗ್ ಮೂಲಕ ಗಮನ ಸೆಳೆದಿದ್ದ ಚಾಹಲ್ ಈಗ ರಾಜಕೀಯ ವಲಯದಲ್ಲೂ ಚರ್ಚೆಗೆ ಬಂದಿದ್ದಾರೆ.

Loading...

ವಿಶೇಷ ಆಹ್ವಾನಿತ ಸದಸ್ಯರಾಗಿ ನೇಮಕ

ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾದ ಕಾರ್ಯಕಾರಿ ಸಮಿತಿಯನ್ನು ಪರಿಷ್ಕರಿಸಿ ಹೊಸ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ  ಯುಜ್ವೇಂದ್ರ  ಚಾಹಲ್ ಅವರಿಗೆ ವಿಶೇಷ ಆಹ್ವಾನಿತ ಸದಸ್ಯರ ಸ್ಥಾನ ನೀಡಲಾಗಿದೆ. ವಿಶೇಷ ಆಹ್ವಾನಿತ ಸದಸ್ಯರಾಗಿ ನೇಮಕವಾಗಿರುವುದನ್ನು ನೇರವಾಗಿ ಸಕ್ರಿಯ ರಾಜಕೀಯ ಪ್ರವೇಶ ಅಥವಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಎಂದು ಪರಿಗಣಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಪಕ್ಷದ ಒಬಿಸಿ ಮೋರ್ಚಾದ ಕಾರ್ಯಕಾರಿ ಸಮಿತಿಯಲ್ಲಿ ಅವರಿಗೆ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: “ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗಲೇ ಸಿಗಲಿಲ್ಲ, ಇನ್ನು ಕಾಂಗ್ರೆಸ್ ಇರುವಾಗ ಪರಿಹಾರ ಸಿಗುತ್ತಾ?”: ಸಚಿವ ಸಂತೋಷ್ ಲಾಡ್

ಯಾರು ಈ ಯುಜುವೇಂದ್ರ ಚಾಹಲ್?

35 ವರ್ಷದ ಯುಜ್ವೇಂದ್ರ ಚಾಹಲ್ ಹರಿಯಾಣ ಮೂಲದ ಭಾರತೀಯ ಕ್ರಿಕೆಟಿಗ. ಸ್ಪಿನ್ ಬೌಲರ್ ಆಗಿರುವ ಅವರು ಭಾರತ ತಂಡದ ಪರ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಆಡಿದ್ದಾರೆ. ಆರ್​ಸಿಬಿಯ ಮಾಜಿ ಆಟಗಾರ ಕೂಡ ಆಗಿದ್ದಾರೆ. ಐಪಿಎಲ್‌ನಲ್ಲಿಯೂ ತಮ್ಮ ಬೌಲಿಂಗ್ ಮೂಲಕ ಗಮನ ಸೆಳೆದಿದ್ದಾರೆ. 2024ರಲ್ಲಿ ಭಾರತ ಟಿ20 ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದ ಚಾಹಲ್, ದೇಶದ ಪ್ರಮುಖ ಸ್ಪಿನ್ ಬೌಲರ್‌ಗಳಲ್ಲಿ ಒಬ್ಬರು. ಇದೀಗ ಬಿಜೆಪಿಯ ಒಬಿಸಿ ಮೋರ್ಚಾದಲ್ಲಿ ಸ್ಥಾನ ಪಡೆಯುವ ಮೂಲಕ ಅವರ ಹೆಸರು ಕ್ರೀಡಾ ಸುದ್ದಿಗಳಿಂದ ರಾಜಕೀಯ ಸುದ್ದಿಗಳಿಗೂ ಬಂದಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ಹೊಸ ತಂಡ

ಬಿಜೆಪಿ ತನ್ನ ಒಬಿಸಿ ಮೋರ್ಚಾದ ಕಾರ್ಯಕಾರಿ ಸಮಿತಿಯಲ್ಲಿ ಹಲವು ಹೊಸ ನೇಮಕಾತಿಗಳನ್ನು ಮಾಡಿದೆ. ವಿವಿಧ ರಾಜ್ಯಗಳ ನಾಯಕರಿಗೆ ರಾಷ್ಟ್ರೀಯ ಮಟ್ಟದ ಜವಾಬ್ದಾರಿಗಳನ್ನು ನೀಡಲಾಗಿದೆ. ಪಕ್ಷದ ಒಬಿಸಿ ಸಮುದಾಯದ ಸಂಪರ್ಕ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ಬದಲಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಕ್ರಿಕೆಟ್‌ನಲ್ಲಿ ಗುರುತಿಸಿಕೊಂಡಿರುವ ಯುಜುವೇಂದ್ರ ಚಾಹಲ್ ಅವರಿಗೆ ಬಿಜೆಪಿ ಒಬಿಸಿ ಮೋರ್ಚಾದಲ್ಲಿ ವಿಶೇಷ ಆಹ್ವಾನಿತ ಸದಸ್ಯರ ಜವಾಬ್ದಾರಿ ಸಿಕ್ಕಿರುವುದು ಈಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:18 pm, Sat, 21 November 26

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us