ಖಲಿಸ್ತಾನಿಗಳಿಂದ ಜೀವ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ

ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ.

ಖಲಿಸ್ತಾನಿಗಳಿಂದ ಜೀವ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ
ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ
Rakesh Nayak Manchi

Updated on: May 26, 2023 | 6:50 AM

ಚಂಡೀಗಢ: ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ (Bhagwant Singh Mann) ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಟ್ಟು 55 ಸಿಆರ್​ಪಿಎಫ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, 10ಕ್ಕೂ ಹೆಚ್ಚು ಎನ್​ಎಸ್​ಜಿ ಕಮಾಂಡೋಗಳು ಇದರಲ್ಲಿ ಇರಲಿದ್ದಾರೆ. ಭಗವಂತ್ ಮಾನ್​ ಸಿಂಗ್ ಕುಟುಂಬದ ಸದಸ್ಯರಿಗೂ ಭದ್ರತೆ ನೀಡಲಾಗಿದೆ.

ಭದ್ರತೆಯಲ್ಲಿರುವ ಕಮಾಂಡೋಗಳು ಪರಿಣಿತ ಸಮರ ಕಲೆಗಳು ಮತ್ತು ನಿರಾಯುಧ ಯುದ್ಧ ತರಬೇತಿಯನ್ನು ಪಡೆದವರಾಗಿದ್ದಾರೆ. ಸಿಎಂ ಮಾನ್ ಅವರ ನಿವಾಸ, ಕಚೇರಿಗಳು, ರಾಜ್ಯ ಭೇಟಿಗಳ ಸ್ಥಳಗಳಲ್ಲಿ ಸ್ಕ್ರೀನಿಂಗ್ ಮತ್ತು ಭೌತಿಕ ತಪಾಸಣೆ ನಡೆಸಲಾಗುತ್ತದೆ. ಸಾರ್ವಜನಿಕ ಸಂಪರ್ಕದ ಸಮಯದಲ್ಲಿ ಸಾಕಷ್ಟು ಜನಸಂದಣಿ ನಿಯಂತ್ರಣ ಮತ್ತಿತರ ಕಡೆಗಳಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗತ್ತದೆ.

ಇದನ್ನೂ ಓದಿ: ಪಂಜಾಬ್‌ನ ಅಂತರಾಷ್ಟ್ರೀಯ ಗಡಿ ಬಳಿ ಮಾದಕ ವಸ್ತು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್‌ಎಫ್

‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಮತ್ತು ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗ್ ಬಂಧನದ ನಂತರ ಪಂಜಾಬ್ ಸಿಎಂ ಭದ್ರತೆಯನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಂಜಾಬ್‌ನಲ್ಲಿ ಸುಮಾರು 36 ದಿನಗಳ ಕಾಲ ಪರಾರಿಯಾಗಿದ್ದ ಅಮೃತಪಾಲ್ ಸಿಂಗ್​ನನ್ನು ಅಂತಿಮವಾಗಿ ಪಂಜಾಬ್ ಪೊಲೀಸರು ಜರ್ನೈಲ್ ಸಿಂಗ್ ಭಿಂದ್ರನ್‌ವಾಲಾ ಗ್ರಾಮದ ರೋಡ್‌ನಲ್ಲಿ ಬಂಧಿಸಿದ್ದರು. ಸದ್ಯ ಅಮೃತಪಾಲ್ ಸಿಂಗ್ ತನ್ನ 9 ಸಹಚರರೊಂದಿಗೆ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿದ್ದಾರೆ.

ಸಿಎಂ ಮಾನ್ ಪ್ರಸ್ತುತ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಮಹಾರಾಷ್ಟ್ರ ಪ್ರವಾಸದಲ್ಲಿದ್ದಾರೆ. ಗುರುವಾರ ಅವರು ಮುಂಬೈನ ಯಶವಂತರಾವ್ ಚವಾಣ್ ಸೆಂಟರ್‌ನಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಹಿಂತೆಗೆದುಕೊಳ್ಳಲು ಕೇಂದ್ರವು ದೆಹಲಿಯಲ್ಲಿ ತಂದಿರುವ ಸುಗ್ರೀವಾಜ್ಞೆಯ ವಿರುದ್ಧ ಸಂಸತ್ತಿನಲ್ಲಿ ಬೆಂಬಲ ಕೋರಿದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 am, Fri, 26 May 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us