ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಶ್ರೇಣಿಯ ಭದ್ರತೆ
ಕೇಂದ್ರ ಚುನಾವಣಾ ಆಯೋಗ(Election Commission) ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ.
ಕೇಂದ್ರ ಚುನಾವಣಾ ಆಯೋಗ(Election Commission) ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್(Rajiv Kumar) ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ.
ಕೇಂದ್ರ ಅರೆಸೇನಾ ಪಡೆ ಸಿಆರ್‌ಪಿಎಫ್ ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಕೆಟಗರಿ ಭದ್ರತೆಯನ್ನು ಒದಗಿಸಲಿದೆ. ಸೋಮವಾರ ಚುನಾವಣಾ ಆಯೋಗದ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಟಿಎಂಸಿ ನಾಯಕರು ಮಂಗಳವಾರ ಬೆಳಗ್ಗೆ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಟಿಎಂಸಿ ನಿಯೋಗವು ಕೇಂದ್ರೀಯ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಆದಾಯ ತೆರಿಗೆ ಇಲಾಖೆ ಮುಖ್ಯಸ್ಥರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿತು. ನಂತರ ಚುನಾವಣಾ ಆಯೋಗದ ಕಚೇರಿಯ ಹೊರಗೆ 24 ಗಂಟೆಗಳ ಧರಣಿ ಕೂರುವುದಾಗಿ ಟಿಎಂಸಿ ನಾಯಕರು ಘೋಷಿಸಿದರು.
ನಿಯೋಗದಲ್ಲಿ ರಾಜ್ಯಸಭಾ ಸಂಸದರಾದ ಡೆರೆಕ್ ಓಬ್ರೇನ್, ಮೊಹಮ್ಮದ್ ನದಿಮುಲ್ ಹಕ್, ಡೋಲಾ ಸೇನ್, ಸಾಕೇತ್ ಗೋಖಲೆ, ಸಾಗರಿಕಾ ಘೋಷ್, ಶಾಸಕ ವಿವೇಕ್ ಗುಪ್ತಾ, ಮಾಜಿ ಸಂಸದರಾದ ಅರ್ಪಿತಾ ಘೋಷ್, ಶಂತನು ಸೇನ್ ಮತ್ತು ಅಬಿರ್ ರಂಜನ್ ಬಿಸ್ವಾಸ್ ಮತ್ತು ಟಿಎಂಸಿ ಪಶ್ಚಿಮ ಬಂಗಾಳದ ವಿದ್ಯಾರ್ಥಿ ವಿಭಾಗದ ಉಪಾಧ್ಯಕ್ಷ ಸುದೀಪ್ ರಾಹಾ ಇದ್ದರು.
ಮತ್ತಷ್ಟು ಓದಿ: ECI Press Conference Highlights: ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಏಪ್ರಿಲ್ 19 ರಂದು ಮೊದಲ ಹಂತದ ಮತದಾನ
ಪೊಲೀಸರು ನಾಯಕರನ್ನು ವಶಕ್ಕೆ ಪಡೆದು ಬಲವಂತವಾಗಿ ಅಲ್ಲಿಂದ ಕರೆದೊಯ್ದರು. ಸೋಮವಾರ ರಾತ್ರಿ ಟಿಎಂಸಿ ನಾಯಕರನ್ನು ಬಿಡುಗಡೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ, ಮುಖಂಡರು ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲಿಯೇ ಕುಳಿತು ಪ್ರತಿಭಟನೆ ಮುಂದುವರಿಸಿದರು.
ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ತನಿಖಾ ಸಂಸ್ಥೆಗಳು ವಿರೋಧ ಪಕ್ಷಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ