ಉತ್ತರ ಪ್ರದೇಶದಲ್ಲಿ ಆಹಾರ ಕಲಬೆರಕೆ ಸಹಿಸಲು ಸಾಧ್ಯವೇ ಇಲ್ಲ; ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ
ಮಾನವ ತ್ಯಾಜ್ಯವನ್ನು ಒಳಗೊಂಡ ಇತ್ತೀಚಿನ ಆಹಾರ ಕಲಬೆರಕೆಯ ಘಟನೆಗಳನ್ನು ಸಿಎಂ ಯೋಗಿ ಆದಿತ್ಯನಾಥ್ ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ, ಕಡ್ಡಾಯ ಸಿಸಿಟಿವಿ ಅಳವಡಿಕೆ ಮತ್ತು ನಿಯಮಗಳನ್ನು ಉಲ್ಲಂಘನೆಯನ್ನು ಸಹಿಸಲು ಸಾಧ್ಯವಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.
ನೊಯ್ಡಾ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಜ್ಯೂಸ್, ಮಸೂರ ಮತ್ತು ಬ್ರೆಡ್‌ನಂತಹ ಸಾಮಾನ್ಯವಾಗಿ ಸೇವಿಸುವ ವಸ್ತುಗಳಲ್ಲಿ ಮಾನವ ತ್ಯಾಜ್ಯವನ್ನು ಒಳಗೊಂಡಿರುವ ಆಹಾರ ಕಲಬೆರಕೆಯ ಇತ್ತೀಚಿನ ಘಟನೆಗಳನ್ನು ಖಂಡಿಸಿದ್ದಾರೆ. ಈ ಕೃತ್ಯಗಳನ್ನು ಅಸಹ್ಯಕರ ಎಂದು ಟೀಕಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಇಂತಹ ಆಚರಣೆಗಳನ್ನು ಸಹಿಸಲು ಸಾಧ್ಯವಿಲ್ಲ. ಇದು ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯವನ್ನು ಉಂಟುಮಾಡುತ್ತವೆ ಎಂದು ಒತ್ತಿ ಹೇಳಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೆಸ್ಟೋರೆಂಟ್‌ಗಳು ಮತ್ತು ಡಾಬಾಗಳನ್ನು ಸರಿಯಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಆಹಾರ ಮತ್ತು ಪಾನೀಯ ಮಳಿಗೆಗಳ ಆವರಣದಲ್ಲಿ ವ್ಯವಸ್ಥಾಪಕರು ಮತ್ತು ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಜನರ ನಂಬಿಕೆಯನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ; ತಿರುಪತಿ ಲಡ್ಡು ಆರೋಪ ನಿರಾಕರಿಸಿದ ಜಗನ್ ಮೋಹನ್ ರೆಡ್ಡಿ
ಸಿಎಂಒ ಕಚೇರಿಯ ನಿರ್ದೇಶನಗಳ ಪ್ರಕಾರ ಅಡುಗೆಯವರು ಮತ್ತು ಮಾಣಿಗಳು ಕರ್ತವ್ಯದ ಸಮಯದಲ್ಲಿ ಮಾಸ್ಕ್ ಮತ್ತು ಗ್ಲೌಸ್ ಧರಿಸಬೇಕಾಗುತ್ತದೆ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಡಾಬಾಗಳು ಅಥವಾ ರೆಸ್ಟೋರೆಂಟ್‌ಗಳ ಸರಿಯಾದ ತಪಾಸಣೆ ಮತ್ತು ಎಲ್ಲಾ ಉದ್ಯೋಗಿಗಳ ಪೊಲೀಸ್ ಪರಿಶೀಲನೆಗೆ ನಿರ್ದೇಶನಗಳನ್ನು ನೀಡಿದ್ದಾರೆ.
Uttar Pradesh CM Yogi Adityanath gives directions for the proper inspection of dhabas/restaurants, as well as Police verification of all employees. The names and addresses of the manager, proprietor will have to be mandatorily displayed at the food and beverage outlets. Be it the… pic.twitter.com/TEnfFjKtta
— ANI UP/Uttarakhand (@ANINewsUP) September 24, 2024
ಆಹಾರ ಮತ್ತು ಪಾನೀಯ ಮಳಿಗೆಗಳಲ್ಲಿ ಮ್ಯಾನೇಜರ್ ಮತ್ತು ಮಾಲೀಕರ ಹೆಸರುಗಳು ಮತ್ತು ವಿಳಾಸಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಬಾಣಸಿಗರಾಗಿರಲಿ ಅಥವಾ ಮಾಣಿಯಾಗಿರಲಿ, ಮಾಸ್ಕ್ ಮತ್ತು ಗ್ಲೌಸ್ಗಳನ್ನು ಧರಿಸುವುದು ಕಡ್ಡಾಯವಾಗಿರುತ್ತದೆ. ಹೋಟೆಲ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಕಲಬೆರಕೆ ಪತ್ತೆಯಾದರೆ ಮ್ಯಾನೇಜರ್ ಅಥವಾ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಕಚೇರಿ ತಿಳಿಸಿದೆ.
ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಎಂದು ಕರೆಯುವುದು ದುರದೃಷ್ಟಕರ: ಯೋಗಿ ಆದಿತ್ಯನಾಥ್
ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಹೊಸ ನಿಯಮಾವಳಿಗಳನ್ನು ಪ್ರಕಟಿಸಲಾಗಿದೆ. ದೇಶದ ವಿವಿಧ ಪ್ರದೇಶಗಳಲ್ಲಿ ಆಹಾರ ಕಲಬೆರಕೆಯ ಆತಂಕಕಾರಿ ಘಟನೆಗಳಿಗೆ ಪ್ರತಿಕ್ರಿಯೆಯಾಗಿ, ಸಿಎಂ ಆದಿತ್ಯನಾಥ್ ಅವರು ರಾಜ್ಯದಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಹೆಚ್ಚಿಸುವ ಉದ್ದೇಶದಿಂದ ಕಟ್ಟುನಿಟ್ಟಿನ ನಿರ್ದೇಶನಗಳನ್ನು ಹೊರಡಿಸಿದ್ದಾರೆ. ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಹೋಟೆಲ್‌ಗಳು, ಡಾಬಾಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಎಲ್ಲಾ ಆಹಾರ ಸಂಸ್ಥೆಗಳ ಸಮಗ್ರ ತಪಾಸಣೆಯ ತುರ್ತು ಅಗತ್ಯವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒತ್ತಿ ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ