ಕಾನ್ಪುರದಲ್ಲಿ ಝಿಕಾ ಸೋಂಕಿತರ ಸಂಖ್ಯೆ 79ಕ್ಕೆ ಏರಿಕೆ; ತುರ್ತು ಸಭೆ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್

Zika Virus: ಕಾನ್ಪುರದಲ್ಲಿ ಝಿಕಾ ವೈರಸ್​ ಸೋಂಕು  ವೇಗವಾಗಿ ಹರಡುತ್ತಿದೆ. ಇದರ ಗಂಭೀರತೆಯನ್ನು ಪರಿಗಣಿಸಿ ವಿಶೇಷ ಎಚ್ಚರಿಕೆ ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗಿದೆ.

ಕಾನ್ಪುರದಲ್ಲಿ ಝಿಕಾ ಸೋಂಕಿತರ ಸಂಖ್ಯೆ 79ಕ್ಕೆ ಏರಿಕೆ; ತುರ್ತು ಸಭೆ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್
ಸಿಎಂ ಯೋಗಿ ಆದಿತ್ಯನಾಥ್​
Follow us
TV9 Web
| Updated By: Lakshmi Hegde

Updated on: Nov 07, 2021 | 12:34 PM

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್​ (Zika Virus) ಸೋಂಕಿತರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಝಿಕಾ ವೈರಸ್​ ಹರಡುತ್ತಿರುವುದಕ್ಕೆ ಕಾರಣಗಳು, ನಿಯಂತ್ರಣಾ ಕ್ರಮಗಳ ಬಗ್ಗೆ ಅವರು ಚರ್ಚಿಸಿದ್ದಾರೆ.  ಶನಿವಾರ ಕಾನ್ಪುರದಲ್ಲಿ 13 ಹೊಸ ಝಿಕಾ ವೈರಸ್​ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿಗೆ ಒಟ್ಟು ಪ್ರಕರಣಗಳ ಸಂಖ್ಯೆ 79ಕ್ಕೆ ಏರಿದೆ.  

ನವೆಂಬರ್​ 6ರವರೆಗೆ ಒಟ್ಟು 79 ಝಿಕಾ ವೈರಸ್​ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ಈ ಬಗ್ಗೆ ಮುತುವರ್ಜಿ ವಹಿಸುತ್ತಿದೆ. ಝಿಕಾ ಸೋಂಕಿಗೆ ಒಳಗಾದವರ ಮನೆಗೆ ಆರೋಗ್ಯ ಇಲಾಖೆಯ ಆರ್​ಆರ್​ಟಿ (ಕ್ಷಿಪ್ರ ಪ್ರತಿಕ್ರಿಯೆ ತಂಡ) ಭೇಟಿ ನೀಡಿ, ಪರಿಸ್ಥಿತಿ ಪರಿಶೀಲನೆ ನಡೆಸುತ್ತಿದೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಕಾನ್ಪುರ ಜಿಲ್ಲಾಧಿಕಾರಿ ವಿಶಾಖ್​ ಜಿ ತಿಳಿಸಿದ್ದಾರೆ.

ಕಾನ್ಪುರದಲ್ಲಿ ಝಿಕಾ ವೈರಸ್​ ಸೋಂಕು  ವೇಗವಾಗಿ ಹರಡುತ್ತಿದೆ. ಇದರ ಗಂಭೀರತೆಯನ್ನು ಪರಿಗಣಿಸಿ ವಿಶೇಷ ಎಚ್ಚರಿಕೆ ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗಿದೆ. ಝಿಕಾ ಸೋಂಕಿಗೆ ಒಳಗಾದ ಪ್ರತಿಯೊಬ್ಬ ರೋಗಿಯ ಆರೋಗ್ಯವನ್ನೂ ತುಂಬ ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಭೆಯಲ್ಲಿ ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಈಡಿಸ್​ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಈ ಝಿಕಾ ಸೋಂಕು ತಗುಲುತ್ತದೆ. ಜ್ವರ, ಮೈಕೈನೋವು, ದದ್ದು, ಸ್ನಾಯು-ಕೀಲು ನೋವುಗಳು, ಅಸ್ವಸ್ಥತೆ, ತಲೆನೋವು ಇದರ ಸಾಮಾನ್ಯ ಲಕ್ಷಣಗಳು.   ಆಗಸ್ಟ್​​ನಲ್ಲಿ ಮಹಾರಾಷ್ಟ್ರದಲ್ಲಿ ಮೊದಲ ಝಿಕಾ ವೈರಸ್​ ಪ್ರಕರಣ ಪತ್ತೆಯಾಗಿತ್ತು. ಅದಕ್ಕೂ ಮೊದಲು ಕೇರಳದಲ್ಲಿ ಹಲವರಿಗೆ ಝಿಕಾ ಸೋಂಕು ಕಾಣಿಸಿಕೊಂಡಿತ್ತು.

ಇದನ್ನೂ ಓದಿ: ಪಾಲಿಕೆಯ ಹಗ್ಗಜಗ್ಗಾಟಕ್ಕೆ ಬ್ರೇಕ್: ಕಲಬುರಗಿ ಪಾಲಿಕೆ ಮೇಯರ್ ಆಯ್ಕೆಗೆ ದಿನಾಂಕ ನಿಗದಿ