AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ZyCov-D Vaccine: ಅಕ್ಟೋಬರ್​ನಲ್ಲಿ 12ರಿಂದ 17 ವರ್ಷದೊಳಗಿನ ಮಕ್ಕಳಿಗೆ ಜೈಕೋವ್-ಡಿ ಲಸಿಕೆ ಲಭ್ಯ

Zydus Cadila Vaccine | ಮೂರು ಡೋಸ್​ಗಳನ್ನು ಹೊಂದಿರುವ ಜೈಕೊವ್-ಡಿ ಲಸಿಕೆಯನ್ನು ಅಕ್ಟೋಬರ್​ನಿಂದ 12ರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವುದು.

ZyCov-D Vaccine: ಅಕ್ಟೋಬರ್​ನಲ್ಲಿ 12ರಿಂದ 17 ವರ್ಷದೊಳಗಿನ ಮಕ್ಕಳಿಗೆ ಜೈಕೋವ್-ಡಿ ಲಸಿಕೆ ಲಭ್ಯ
ಜೈ ಕೋವ್ ಡಿ ಲಸಿಕೆ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 26, 2021 | 12:58 PM

Share

ನವದೆಹಲಿ: ಅಕ್ಟೋಬರ್ ತಿಂಗಳಿಂದ ಭಾರತದಲ್ಲಿ ಕೊವಿಡ್ ಕೇಸುಗಳು ವಿಪರೀತ ಹೆಚ್ಚಾಗಲಿದ್ದು, ಕೊರೊನಾ 3ನೇ ಅಲೆ ಶುರುವಾಗುವ ಸಾಧ್ಯತೆಯಿದೆ ಎಂದು ಈಗಾಗಲೇ ತಜ್ಞರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಈ ಕೊವಿಡ್ ಮೂರನೇ ಅಲೆ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳಿಗೆ ಅಪಾಯ ಉಂಟುಮಾಡುವುದರಿಂದ ಆದಷ್ಟು ಬೇಗ ಮಕ್ಕಳಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ (ಮಕ್ಕಳಿಗೆ) ಮತ್ತು ಜೈಡಸ್ ಕ್ಯಾಡಿಲಾದ ಜೈಕೋವ್-ಡಿ ಲಸಿಕೆಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ. ಭಾರತ ಮೂಲದ ಜೈಡಸ್ ಕ್ಯಾಡಿಲಾ (Zydus Cadila)  ಕಂಪನಿ ಅಭಿವೃದ್ಧಿಪಡಿಸಿರುವ ಜೈಕೊವ್-ಡಿ ಲಸಿಕೆಯ (ZyCov-D Vaccine) ತುರ್ತು ಬಳಕೆಗೆ ಈಗಾಗಲೇ ಅನುಮತಿ ಸಿಕ್ಕಿದೆ. ಮೂರು ಡೋಸ್​ಗಳನ್ನು ಹೊಂದಿರುವ ಈ ಲಸಿಕೆಯನ್ನು ಅಕ್ಟೋಬರ್ ಬಳಿಕ 12ರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವುದು. ಮುಖ್ಯವಾಗಿ ಆರೋಗ್ಯ ಸಮಸ್ಯೆಗಳಿರುವ ಮಕ್ಕಳಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರದ ಕೊವಿಡ್ ಪ್ಯಾನೆಲ್ ಮುಖ್ಯಸ್ಥರಾದ ಎನ್​ಕೆ ಅರೋರ ತಿಳಿಸಿದ್ದಾರೆ.

ಮಕ್ಕಳಿಗೆ 3ನೇ ಅಲೆಯಿಂದ ಹೆಚ್ಚು ಅಪಾಯವಾಗಲಿದೆ ಎಂಬ ಅಧ್ಯಯನದಂತೆಯೇ ವಯಸ್ಕರಿಗಿಂತ ಮಕ್ಕಳಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ಕಡಿಮೆ ಎಂದು ಸೆರೋ ಸರ್ವೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳು ಮತ್ತೆ ಆರಂಭವಾಗಬೇಕು. ಭಾರತದಲ್ಲಿ 12ರಿಂದ 18 ವರ್ಷದೊಳಗೆ ಸುಮಾರು 12 ಕೋಟಿ ಮಕ್ಕಳಿದ್ದಾರೆ ಎಂದು ಅಂದಾಜಿಸಲಾಗಿದೆ. ಇವರೆಲ್ಲರಿಗೂ ಅಕ್ಟೋಬರ್​ನಿಂದ ಕೊರೊನಾ ಲಸಿಕೆ ಲಭ್ಯವಾಗಲಿದೆ. ಈ 12 ಕೋಟಿಯಲ್ಲಿ ಶೇ. 1ರಷ್ಟು ಮಕ್ಕಳಿಗೆ ಮಾತ್ರ ಆರೋಗ್ಯ ಸಂಬಂಧಿ ಗಂಭೀರವಾದ ತೊಂದರೆಗಳಿವೆ. ಆ ಶೇ. 1ರಷ್ಟು ಮಕ್ಕಳಿಗೆ ಮೊದಲ ಆದ್ಯತೆಯಾಗಿ ಕೊವಿಡ್ ಲಸಿಕೆ ನೀಡಲಾಗುವುದು ಎಂದು ಅರೀರ ತಿಳಿಸಿದ್ದಾರೆ.

ಮಕ್ಕಳಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆಗಳು ಕಡಿಮೆ ಎಂಬುದು ಹೇಗೆ ಸತ್ಯವೋ ಅವರ ಮನೆಯಲ್ಲಿರುವ ಪೋಷಕರು ಅಥವಾ ಸೋದರ-ಸೋದರಿಯರಿಗೆ ಕೊರೊನಾ ಸೋಂಕು ತಗುಲಿದ್ದರೆ ಅದರಿಂದ ಮಕ್ಕಳಿಗೆ ಸೋಂಕು ತಗುಲುವ ಅಪಾಯಗಳಿರುತ್ತವೆ. ಅಥವಾ ಮಕ್ಕಳಿಗೆ ಕೊರೊನಾ ಬಂದರೆ ಅವರು ಸಾಯುವ ಸಾಧ್ಯತೆ ಅಥವಾ ಗಂಭೀರ ಪರಿಣಾಮಗಳಾಗುವ ಸಾಧ್ಯತೆ ಕಡಿಮೆಯಿದ್ದರೂ ಅವರಿಗೆ ಕೊರೊನಾ ರೋಗ ಲಕ್ಷಣಗಳು ಕಾಣಿಸಿಕೊಂಡರೆ ಅದರಿಂದ ಮನೆಯಲ್ಲಿರುವ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಹರಡುವ ಅಪಾಯಗಳು ಹೆಚ್ಚಿರುತ್ತವೆ. ಹೀಗಾಗಿ, ಮಕ್ಕಳಿಗೆ ಆದಷ್ಟು ಬೇಗ ಕೊರೊನಾ ಲಸಿಕೆ ಅಭಿಯಾನ ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಮೂರು ಡೋಸ್‌ನ ಜೈಕೊವ್-ಡಿ ಕೊರೊನಾ ಲಸಿಕೆಯನ್ನು ಅಹಮದಾಬಾದ್ ಮೂಲದ ಜೈಡಸ್ ಕ್ಯಾಡಿಲಾ ಕಂಪನಿ ತಯಾರಿಸಿದೆ. ಅಕ್ಟೋಬರ್ ತಿಂಗಳ ವೇಳೆಗೆ ತಿಂಗಳಿಗೆ 1 ಕೋಟಿ ಜೈಕೋವ್-ಡಿ ಲಸಿಕೆಯ ಡೋಸ್​ಗಳನ್ನು ಉತ್ಪಾದನೆ ಮಾಡುವುದಾಗಿ ಜೈಡಸ್ ಕ್ಯಾಡಿಲಾ ಸಂಸ್ಥೆ ಘೋಷಿಸಿದೆ. ಹಾಗೇ, 2022ರ ಜನವರಿ ಅಂತ್ಯದ ವೇಳೆಗೆ ಪ್ರತಿ ತಿಂಗಳಿಗೆ 4ರಿಂದ 5 ಕೋಟಿ ಕೊವಿಡ್ ಲಸಿಕೆಗಳನ್ನು ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಜೈಡಸ್ ಕ್ಯಾಡಿಲಾ ಕಂಪನಿ ತಿಳಿಸಿದೆ.

ಜೈಕೋವ್-ಡಿ ಕೊರೊನಾ ಲಸಿಕೆಗೆ ಎಷ್ಟು ಹಣ ನಿಗದಿ ಪಡಿಸಲಾಗುವುದು ಎಂಬ ಬಗ್ಗೆ ಮುಂದಿನ ತಿಂಗಳು ಕಂಪನಿ ಮಾಹಿತಿ ನೀಡಲಿದೆ. 12 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಈ ಜೈಕೋವ್-ಡಿ ಲಸಿಕೆ ಬಹಳ ಪರಿಣಾಮಕಾರಿಯಾಗಲಿದೆ. ಸೆಪ್ಟೆಂಬರ್ ಅಂತ್ಯದೊಳಗೆ ಈ ಲಸಿಕೆಗಳನ್ನು ಮಾರುಕಟ್ಟೆಗೆ ಬಿಡಲಾಗುವುದು. ಮುಂದಿನ ವರ್ಷ ಆಗಸ್ಟ್ ವೇಳೆಗೆ ಪ್ರತಿ ತಿಂಗಳು 5 ಕೋಟಿ ಜೈಕೋವ್-ಡಿ ಲಸಿಕೆಗಳನ್ನು ಉತ್ಪಾದನೆ ಮಾಡಲಾಗುವುದು. ಭಾರತ ಮೂಲಕ ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ಗೆ ಈಗಾಗಲೇ ಅನುಮತಿ ಸಿಕ್ಕು, ಎಲ್ಲೆಡೆ ವಿತರಣೆ ಮಾಡಲಾಗುತ್ತಿದೆ. ಅದರ ಬಳಿಕ ಭಾರತ ಮೂಲದ ಎರಡನೇ ಕೊವಿಡ್ ಲಸಿಕೆಯೆಂಬ ಹೆಗ್ಗಳಿಕೆಗೆ ಜೈಕೋವ್-ಡಿ ಲಸಿಕೆ ಪಾತ್ರವಾಗಿದೆ.

ಮಕ್ಕಳಿಗಾಗಿ ತಯಾರಿಸಿದ ಫೈಝರ್ ಲಸಿಕೆಗೆ ಈಗಾಗಲೇ ಅಮೆರಿಕದಲ್ಲಿ ಅನುಮೋದನೆ ಸಿಕ್ಕಿದೆ. ಮೂರನೇ ಅಲೆ ಆರಂಭವಾಗುವುದರೊಳಗೆ ಮಕ್ಕಳಿಗೂ ಕೋವಿಡ್ ಲಸಿಕೆ ಹಾಕಿಸುವ ಯೋಚನೆ ಕೇಂದ್ರ ಸರ್ಕಾರದ್ದಾಗಿದೆ. ಈಗಾಗಲೇ ಹಲವು ಕಂಪನಿಗಳು ಮಕ್ಕಳಿಗೆ ಕೋವಿಡ್‌ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ನಿರತವಾಗಿವೆ. ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಮತ್ತು ಜೈಡಸ್ ಕ್ಯಾಡಿಲಾ ಮಕ್ಕಳ ಕೋವಿಡ್ ಲಸಿಕೆಯ ಬಗ್ಗೆ ಪ್ರಯೋಗಗಳನ್ನು ನಡೆಸಿದ್ದವು. ಅದರಲ್ಲಿ ಜೈಡಸ್ ಕ್ಯಾಡಿಲಾ ಯಶಸ್ವಿಯಾಗಿದ್ದು, ಜೈಕೋವ್-ಡಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ಸಿಕ್ಕಿದೆ.

ಇದನ್ನೂ ಓದಿ: Covid Vaccine: 12 ವರ್ಷ ಮೇಲ್ಪಟ್ಟವರಿಗೆ ಶೀಘ್ರದಲ್ಲೇ ಕೊವಿಡ್ ಲಸಿಕೆ; ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಮೊದಲ ಆದ್ಯತೆ

ZyCov-D Vaccine: ಅಕ್ಟೋಬರ್ ಬಳಿಕ ಭಾರತದಲ್ಲಿ ಪ್ರತಿ ತಿಂಗಳಿಗೆ 1 ಕೋಟಿ ಡೋಸ್ ಜೈಕೋವ್-ಡಿ ಲಸಿಕೆ ಲಭ್ಯ

(ZyCov-D Vaccine Jabs For Children 12-17 Age Group From October In Zydus Cadila Rollout)