ದೆಹಲಿ: ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿಯು ಝೈಡಸ್ ಕ್ಯಾಡಿಲ್ಲಾ ಕಂಪನಿಯ ವಿರಾಫಿನ್ ಔಷಧವನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಲು ಅನುಮತಿ ನೀಡಿದೆ. ಲಘು ಕೊರೊನಾದಿಂದ ಬಳಲುತ್ತಿರುವವರಿಗೆ ಔಷಧ ರೂಪದಲ್ಲಿ ಝೈಡಸ್ ಕ್ಯಾಡಿಲ್ಲಾ ಕಂಪನಿಯ ವಿರಾಫಿನ್ ಔಷಧ ಬಳಸಲು ಅನುಮತಿ ದೊರೆತಿದ್ದು, ಒಂದು ಡೋಸ್ ಲಸಿಕೆಯ ಬಳಕೆಯು ಕೊರೊನಾ ಸೋಂಕಿತರಲ್ಲಿ ಚೇತರಿಕೆ ಉಂಟುಮಾಡಿದೆ ಎಂದು ಕಂಪನಿ ತಿಳಿಸಿದೆ.
ಚರ್ಮದ ಒಳಪದರಕ್ಕೆ ಕೊಡುವ ವಿರಾಫಿನ್ನಲ್ಲಿ PegIFN ಔಷಧವಿದೆ. ಈ ಸಿಂಗಲ್ ಡೋಸ್ ಔಷಧಿ ಇದು ವೈರಾಣು ಸೋಂಕು ನಿರೋಧಕ, ಕೊರೊನಾ ಸೋಂಕು ಪ್ರಕರಣಗಳಲ್ಲೂ ಪರಿಣಾಮಕಾರಿ ಎಂದು ಕ್ಲಿನಿಕಲ್ ಪರೀಕ್ಷೆಗಳಲ್ಲಿ ಸಾಬೀತಾಗಿದೆ ಎಂದು ಕಂಪನಿಯು ಹೇಳಿಕೊಂಡಿದೆ.
ಕೋವಿಡ್-19 ರೋಗಿಗಳಿಗೆ ಈ ಔಷಧಿ ನೀಡಿದಾಗ ಕೃತಕ ಆಮ್ಲಜನಕವನ್ನು ನೀಡಬೇಕಾದ ಅಗತ್ಯವೂ ಹೆಚ್ಚಿನ ಸಂದರ್ಭಗಳಲ್ಲಿ ಕಂಡುಬರಲಿಲ್ಲ. ಕೊರೊನಾ ಸೋಂಕಿನಿಂದ ಉಂಟಾಗುವ ಉಸಿರಾಟದ ಹಲವು ಸಮಸ್ಯೆಗಳನ್ನು ವಿರಾಫಿನ್ ಪರಿಣಾಮಕಾರಿಯಾಗಿ ತಡೆದದ್ದು ಪ್ರಯೋಗಗಳ ವೇಳೆ ದಾಖಲಾಗಿದೆ. ಕೊರೊನಾದಿಂದ ರೋಗಿಗಳು ಚೇತರಿಸಿಕೊಂಡ ನಂತರ ಕಾಣಿಸುವ ಕೆಲ ಇತರ ಆರೋಗ್ಯದ ಸಮಸ್ಯೆಗಳನ್ನೂ ಇದು ತಡೆಯಬಲ್ಲದು. ಎಂದು ಕಂಪನಿ ಹೇಳಿಕೊಂಡಿದೆ. ವಿರಾಫಿನ್ ಚಿಕಿತ್ಸೆಯ ನಂತರ ಕೊರೊನಾ ಸೋಂಕು ದೃಢಪಟ್ಟಿದ್ದ ಶೇ 91.15ರಷ್ಟು ರೋಗಿಗಳಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆ ವೇಳೆ 7 ದಿನಗಳಲ್ಲಿ ನೆಗೆಟಿವ್ ವರದಿ ಬಂದಿತ್ತು ಎಂದು ಕಂಪನಿ ಹೇಳಿಕೊಂಡಿದೆ.
ಇದನ್ನೂ ಓದಿ: Long Covid: ಕೊರೊನಾ ನೆಗೆಟಿವ್ ವರದಿಯಾದರೂ ನಿರ್ಲಕ್ಷಿಸದಿರಿ; ದೀರ್ಘಕಾಲದವರೆಗೆ ಲಕ್ಷಣಗಳಿರಬಹುದು
ಕೊವಿಡ್ನಿಂದ ಭಯಭೀತರಾದ ರೋಗಿಗಳಿಗೆ ಉತ್ಸಾಹ ತುಂಬಲು ವೈದ್ಯರಿಂದ ಮನೋರಂಜನೆ; ವಿಡಿಯೋ ವೈರಲ್
(Zydus cadila gets emergency approval for covid treatment in India GGD)
Published On - 3:46 pm, Fri, 23 April 21