ZyCov-D Vaccine: ಅಕ್ಟೋಬರ್ ಬಳಿಕ ಭಾರತದಲ್ಲಿ ಪ್ರತಿ ತಿಂಗಳಿಗೆ 1 ಕೋಟಿ ಡೋಸ್ ಜೈಕೋವ್-ಡಿ ಲಸಿಕೆ ಲಭ್ಯ

Zydus Cadila Vaccine | ಅಕ್ಟೋಬರ್ ತಿಂಗಳ ವೇಳೆಗೆ ತಿಂಗಳಿಗೆ 1 ಕೋಟಿ ಜೈಕೋವ್-ಡಿ ಲಸಿಕೆಯನ್ನು ಉತ್ಪಾದನೆ ಮಾಡುವುದಾಗಿ ಜೈಡಸ್ ಕ್ಯಾಡಿಲಾ ಸಂಸ್ಥೆ ಘೋಷಿಸಿದೆ.

ZyCov-D Vaccine: ಅಕ್ಟೋಬರ್ ಬಳಿಕ ಭಾರತದಲ್ಲಿ ಪ್ರತಿ ತಿಂಗಳಿಗೆ 1 ಕೋಟಿ ಡೋಸ್ ಜೈಕೋವ್-ಡಿ ಲಸಿಕೆ ಲಭ್ಯ
ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 21, 2021 | 6:32 PM

ನವದೆಹಲಿ: ಭಾರತದಲ್ಲಿ ಜೈಡಸ್ ಕ್ಯಾಡಿಲಾ (Zydus Cadila)  ಕಂಪನಿ ಅಭಿವೃದ್ಧಿಪಡಿಸಿರುವ ಜೈಕೊವ್-ಡಿ ಲಸಿಕೆಯ (ZyCov-D Vaccine) ತುರ್ತು ಬಳಕೆಗೆ ಅನುಮತಿ ಸಿಕ್ಕಿದೆ. ಮೂರು ಡೋಸ್‌ನ ಜೈಕೊವ್-ಡಿ ಕೊರೊನಾ ಲಸಿಕೆಯನ್ನು ಅಹಮದಾಬಾದ್ ಮೂಲದ ಜೈಡಸ್ ಕ್ಯಾಡಿಲಾ ಕಂಪನಿ ತಯಾರಿಸಿದೆ. ಅಕ್ಟೋಬರ್ ತಿಂಗಳ ವೇಳೆಗೆ ತಿಂಗಳಿಗೆ 1 ಕೋಟಿ ಜೈಕೋವ್-ಡಿ ಲಸಿಕೆಯ ಡೋಸ್​ಗಳನ್ನು ಉತ್ಪಾದನೆ ಮಾಡುವುದಾಗಿ ಜೈಡಸ್ ಕ್ಯಾಡಿಲಾ ಸಂಸ್ಥೆ ಘೋಷಿಸಿದೆ. ಹಾಗೇ, 2022ರ ಜನವರಿ ಅಂತ್ಯದ ವೇಳೆಗೆ ಪ್ರತಿ ತಿಂಗಳಿಗೆ 4ರಿಂದ 5 ಕೋಟಿ ಕೊವಿಡ್ ಲಸಿಕೆಗಳನ್ನು ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಜೈಡಸ್ ಕ್ಯಾಡಿಲಾ ಕಂಪನಿ ತಿಳಿಸಿದೆ.

ಜೈಕೋವ್-ಡಿ ಕೊರೊನಾ ಲಸಿಕೆಗೆ ಎಷ್ಟು ಹಣ ನಿಗದಿ ಪಡಿಸಲಾಗುವುದು ಎಂಬ ಬಗ್ಗೆ ಮುಂದಿನ ತಿಂಗಳು ಕಂಪನಿ ಮಾಹಿತಿ ನೀಡಲಿದೆ. 12 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಈ ಜೈಕೋವ್-ಡಿ ಲಸಿಕೆ ಬಹಳ ಪರಿಣಾಮಕಾರಿಯಾಗಲಿದೆ. ಸೆಪ್ಟೆಂಬರ್ ಅಂತ್ಯದೊಳಗೆ ಈ ಲಸಿಕೆಗಳನ್ನು ಮಾರುಕಟ್ಟೆಗೆ ಬಿಡಲಾಗುವುದು. ಮುಂದಿನ ವರ್ಷ ಆಗಸ್ಟ್ ವೇಳೆಗೆ ಪ್ರತಿ ತಿಂಗಳು 5 ಕೋಟಿ ಜೈಕೋವ್-ಡಿ ಲಸಿಕೆಗಳನ್ನು ಉತ್ಪಾದನೆ ಮಾಡಲಾಗುವುದು. ಭಾರತ ಮೂಲಕ ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ಗೆ ಈಗಾಗಲೇ ಅನುಮತಿ ಸಿಕ್ಕು, ಎಲ್ಲೆಡೆ ವಿತರಣೆ ಮಾಡಲಾಗುತ್ತಿದೆ. ಅದರ ಬಳಿಕ ಭಾರತ ಮೂಲದ ಎರಡನೇ ಕೊವಿಡ್ ಲಸಿಕೆಯೆಂಬ ಹೆಗ್ಗಳಿಕೆಗೆ ಜೈಕೋವ್-ಡಿ ಲಸಿಕೆ ಪಾತ್ರವಾಗಿದೆ.

3 ಡೋಸ್​ಗಳ ಈ ಜೈಕೊವ್-ಡಿ ಲಸಿಕೆಯ ಕುರಿತು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ಸಮಿತಿಯು ಸೂಚಿಸಿದೆ. ಜುಲೈ 1ರಂದು ಅಹಮದಾಬಾದ್​ನ ಔಷಧ ತಯಾರಿಕಾ ಸಂಸ್ಥೆಯಾದ ಕ್ಯಾಡಿಲಾ ಹೆಲ್ತ್​​ಕೇರ್ ಲಿಮಿಟೆಡ್ ಜೈಕೊವ್-ಡಿ ಲಸಿಕೆಯ ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಈ ಲಸಿಕೆ 12ರಿಂದ 18 ವರ್ಷದೊಳಗಿನ ಮಕ್ಕಳಿಗೂ ಅತ್ಯಂತ ಸುರಕ್ಷಿತವಾಗಿದೆ ಎಂದು ಸಂಸ್ಥೆ ಹೇಳಿದೆ.

ಭಾರತದಲ್ಲಿ ಈಗಾಗಲೇ ಕೊವ್ಯಾಕ್ಸಿನ್, ಕೋವಿಶೀಲ್ಡ್, ಸ್ಪುಟ್ನಿಕ್-ವಿ, ಮಾಡೆರ್ನಾ, ಜಾನ್ಸನ್ ಆ್ಯಂಡ್ ಜಾನ್ಸನ್ ಲಸಿಕೆಗಳ ಬಳಕೆಗೆ ಅನುಮತಿ ಸಿಕ್ಕಿದೆ. ಇದರ ಜೊತೆಗೆ ಜೈಕೊವ್-ಡಿ ಮೂರು ಡೋಸ್​ನ ಲಸಿಕೆಯ ತುರ್ತು ಬಳಕೆಗೂ ಅನುಮತಿ ಸಿಗುವ ಮೂಲಕ ಭಾರತದಲ್ಲಿರುವ ಕೊವಿಡ್ ಲಸಿಕೆಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಮಕ್ಕಳಿಗಾಗಿ ತಯಾರಿಸಿದ ಫೈಝರ್ ಲಸಿಕೆಗೆ ಈಗಾಗಲೇ ಅಮೆರಿಕದಲ್ಲಿ ಅನುಮೋದನೆ ಸಿಕ್ಕಿದೆ. ಮೂರನೇ ಅಲೆ ಆರಂಭವಾಗುವುದರೊಳಗೆ ಮಕ್ಕಳಿಗೂ ಕೋವಿಡ್ ಲಸಿಕೆ ಹಾಕಿಸುವ ಯೋಚನೆ ಕೇಂದ್ರ ಸರ್ಕಾರದ್ದಾಗಿದೆ. ಈಗಾಗಲೇ ಹಲವು ಕಂಪನಿಗಳು ಮಕ್ಕಳಿಗೆ ಕೋವಿಡ್‌ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ನಿರತವಾಗಿವೆ. ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಮತ್ತು ಜೈಡಸ್ ಕ್ಯಾಡಿಲಾ ಮಕ್ಕಳ ಕೋವಿಡ್ ಲಸಿಕೆಯ ಬಗ್ಗೆ ಪ್ರಯೋಗಗಳನ್ನು ನಡೆಸಿದ್ದವು. ಅದರಲ್ಲಿ ಜೈಡಸ್ ಕ್ಯಾಡಿಲಾ ಯಶಸ್ವಿಯಾಗಿದ್ದು, ಜೈಕೋವ್-ಡಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ಸಿಕ್ಕಿದೆ.

ಇದನ್ನೂ ಓದಿ: ZyCov-D Vaccine: ಭಾರತಕ್ಕೆ ಮತ್ತೊಂದು ಕೊವಿಡ್ ಲಸಿಕೆ ಲಭ್ಯ; ಝಿಕೊವ್-ಡಿ ತುರ್ತು ಬಳಕೆಗೆ ಅನುಮತಿ

Covid Vaccine: ಡಿಸೆಂಬರ್ ವೇಳೆಗೆ ಭಾರತದಲ್ಲಿ 12 ಕೋಟಿ ಕೊವಿಶೀಲ್ಡ್ ಹಾಗೂ 5.8 ಕೋಟಿ ಡೋಸ್ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ

(Zydus Cadila To Produce 1 Crore ZyCov-D Covid Vaccine Doses Per Month By October)

Published On - 6:30 pm, Sat, 21 August 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ