ಶಿವಮೊಗ್ಗ: ಅತಿವೃಷ್ಟಿಗೆ 65 ಮನೆ ಕುಸಿತ, ಹಾಳಾದ ಟ್ರಾನ್ಸಫಾರ್ಮಗಳೆಷ್ಟು?

ಶಿವಮೊಗ್ಗ:  ಜಿಲ್ಲೆಯಾದ್ಯಂತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಮಾರು 65 ಕ್ಕೂ ಹೆಚ್ಚು ಮನೆಗಳು ಧರೆಗುರುಳಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅತಿವೃಷ್ಟಿ ಏರ್ಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈಗಾಗಲೇ ಶಿವಮೊಗ್ಗ ನಗರದಲ್ಲಿ ಐದು ಕಡೆ ಕಾಳಜಿ ಕೇಂದ್ರ ತೆಗೆದಿದೆ. ಜೊತೆಗೆ ಮಳೆಯಿಂದಾಗಿ ಜಿಲ್ಲೆಯಲ್ಲಿ 3,500 ವಿದ್ಯುತ್ ಕಂಬಗಳು ಕುಸಿದುಬಿದ್ದಿದ್ದು, 60 ಟ್ರಾನ್ಸಫಾರ್ಮಗಳು ಹಾಳಾಗಿವೆ. ಈಗಾಗಲೇ ಮೆಸ್ಕಾಂ ಸಿಬ್ಬಂದಿ ಹಾಳಾಗಿರುವ ಟ್ರಾನ್ಸ್ಫಾರ್ಮರ್ ಹಾಗೂ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಸೊರಬ ತಾಲೂಕಿನಲ್ಲಿ ಹೆಚ್ಚು ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮಳೆಯಿಂದಾಗಿ ಸುಮಾರು 2361 ಹೆಕ್ಟೇರ್ ಮುಸುಕಿನ ಜೋಳ ಹಾಗೂ ಭತ್ತದ ಬೆಳೆಗೆ ಹಾನಿಯಾಗಿದೆ ಎಂದು ಸಚಿವ ಈಶ್ವರಪ್ಪ ನಡೆಸಿದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

Related Tags:

Related Posts :

Category: