ಕೊಪ್ಪಳದ ಹುಲಿಗೆಮ್ಮದೇವಿ ಹುಂಡಿ ತುಂಬಿಸಿದ ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆ

Edited By:

Updated on: Jun 29, 2023 | 8:48 AM

ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಇದರಿಂದ ಹುಲಿಗೆಮ್ಮ ದೇವಿ ಹುಂಡಿಗೆ ಭರ್ಜರಿ ಕಾಣಿಕೆ ಹರಿದುಬಂದಿದೆ. ಹಣ ಮಾತ್ರವಲ್ಲದೇ ಚಿನ್ನ, ಬೆಳ್ಳಿ ಕಾಣಿಕೆಯಾಗಿ ಬಂದಿದೆ.

1 / 6
ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

2 / 6

ಇದರಿಂದ ಒಂದು ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂ. ಕಾಣಿಕೆ‌ ಸಂಗ್ರಹವಾಗಿದೆ

3 / 6

ಹುಲಿಗೆಮ್ಮ‌ದೇವಿಗೆ ಹುಂಡಿಗೆ ಹಣ ಮಾತ್ರವಲ್ಲ ಕಾಣಿಕೆಯಾಗಿ 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಬಂದಿದೆ.

4 / 6

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಹುಲಿಗೆಮ್ಮದೇವಿ ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

5 / 6

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಹುಲಿಗೆಮ್ಮ‌ದೇವಿ

6 / 6

ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಮೇ 12 ರಿಂದ 16 ರವರೆಗೆ ನಡೆದಿತ್ತು. ಮಹಾ ರಥೋತ್ಸವ ಮೇ 13 ರಂದು ಸಂಜೆ 5.30ಕ್ಕೆ ಜರುಗಿತ್ತು.

ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Loading...
Unable to load recommendations.
Follow Us