ಉದ್ಘಾಟನೆಯಾಯ್ತು 16ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವ, ಇಲ್ಲಿವೆ ಚಿತ್ರಗಳು

Updated on: Mar 01, 2025 | 10:38 PM

Bengaluru International Film Festival: 16ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವವು ಇಂದಿನಿಂದ (ಮಾರ್ಚ್ 1) ಮಾರ್ಚ್ 8 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆ ಇಂದು ನಡೆದಿದೆ. ಮಾರ್ಚ್ 1 ರಿಂದ ಮಾರ್ಚ್ 8ರವರೆಗೆ ಉತ್ಸವ ನಡೆಯಲಿದ್ದು, ಉದ್ಘಾಟನೆ ಸಮಾರಂಭದ ಚಿತ್ರಗಳು ಇಲ್ಲಿವೆ.

1 / 6
16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇಂದು (ಮಾರ್ಚ್ 01) ಅದ್ಧೂರಿಯಾಗಿ ಉದ್ಘಾಟನೆಯಾಯಿತು. ವಿಧಾನಸೌಧದ ಮುಂದೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇಂದು (ಮಾರ್ಚ್ 01) ಅದ್ಧೂರಿಯಾಗಿ ಉದ್ಘಾಟನೆಯಾಯಿತು. ವಿಧಾನಸೌಧದ ಮುಂದೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

2 / 6

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ರಿಜ್ವಾನ್, ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಚಲನಚಿತ್ರ ನಟ ಶಿವರಾಜ್ ಕುಮಾರ್, ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ನಟ ಕಿಶೋರ್, ನಟಿ ಪ್ರಿಯಾ ಮೋಹನ್ ಇನ್ನೂ ಹಲವರು ಭಾಗವಹಿಸಿದ್ದರು.

3 / 6

"ಸರ್ವ ಜನಾಂಗದ ಶಾಂತಿಯ ತೋಟ ಎಂಬ" ಪರಿಕಲ್ಪನೆಯಲ್ಲಿ 60 ದೇಶಗಳ ಸುಮಾರು 200 ಅತ್ಯುತ್ತಮ ಚಲನಚಿತ್ರಗಳು 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನಗೊಳ್ಳಲಿವೆ. ಸಿನಿಮಾಸಕ್ತರಿಗೆ ಹಾಗೂ ಸಿನಿಮಾ ಮಾಡುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ.

4 / 6

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಹೇಳಿದರು.

5 / 6

16ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವವು ಇಂದಿನಿಂದ (ಮಾರ್ಚ್ 1) ಮಾರ್ಚ್ 8 ರವರೆಗೆ ನಡೆಯಲಿದೆ. ವಿವಿಧ ಚಿತ್ರರಂಗದ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದು, ಸಿನಿಮಾ ಮೇಕಿಂಗ್ ಬಗ್ಗೆ ಒಂದರ ಹಿಂದೊಂದರಂತೆ ಅತ್ಯುತ್ತಮ ಉಪನ್ಯಾಸಗಳು ಇರಲಿವೆ.

6 / 6

ಒಂದು ವಾರಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ಹಲವಾರು ದೇಶಗಳ ಅತ್ಯುತ್ತಮ ಸಿನಿಮಾಗಳ ಪ್ರದರ್ಶನ ನಡೆಯಲಿದೆ. ಒರಾಯಿನ್ ಮಾಲ್​ನ ಸ್ಕ್ರೀನ್​ಗಳಲ್ಲಿ ಈ ಚಿತ್ರೋತ್ಸವ ನಡೆಯಲಿದ್ದು, ಚಿತ್ರೋತ್ಸವದ ಟಿಕೆಟ್​ಗಳು ಆನ್​ಲೈನ್ ಮತ್ತು ಆಫ್​ಲೈನ್​ನಲ್ಲಿ ಲಭ್ಯವಿವೆ.

Loading...
Unable to load recommendations.
Follow Us