- Kannada News Photo gallery 2 dies And two Injured after car hits to Lorry at Bengaluru Nice Road On October 3rd
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಸಾವು
ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು (ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭಿಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಎರಡು ವರ್ಷದ ಪುಟ್ಟ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿವೆ. ಘಟನೆ ನಡೆದಿದ್ದೇಗೆ? ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎನ್ನುವ ವಿವರ ಇಲ್ಲಿದೆ.
Updated on: Oct 03, 2023 | 8:43 AM

ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು(ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ .

ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಕಾರು ಗುದ್ದಿದ್ದರಿಂದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



