Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಕೊರೋನಾ ಭೀತಿ: ಇಬ್ಬರಿಗೆ ಸೋಂಕು ದೃಢ
Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ. ಆದರೀಗ ಈ ಕ್ರೀಡಾಕೂಟಕ್ಕೆ ಕೊರೋನಾ ಭೀತಿ ಎದುರಾಗಿದೆ.