- Kannada News Photo gallery 2025–26 Academic Session Begins in Karnataka: CM Inaugurates School Opening Ceremony
ಮರಳಿ ಶಾಲೆಗೆ: ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ, ಇಲ್ಲಿವೆ ಫೋಟೋಸ್
ಕರ್ನಾಟಕದಲ್ಲಿ 2025-26ನೇ ಶೈಕ್ಷಣಿಕ ವರ್ಷ ಆರಂಭವಾಗಿದೆ. ಶಾಲೆಗಳು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲ್ಪಟ್ಟಿವೆ. ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಮೊದಲ ದಿನವೇ ಶಿಕ್ಷಣ ಇಲಾಖೆ ಮಕ್ಕಳಿಗೆ ಮೊಟ್ಟೆ ವಿತರಿಸಿದೆ. ಈ ಮಧ್ಯೆ ಗದಗಿನಲ್ಲಿ ಶಾಲಾ ಬಸ್ ಪಲ್ಟಿಯಾದ ಘಟನೆ ಸಂಭವಿಸಿದೆ.
Updated on: May 29, 2025 | 3:08 PM

ಕರ್ನಾಟಕದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭವಾಗಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳು ಇಂದಿನಿಂದ ಆರಂಭಗೊಂಡಿವೆ. ಆ ಮೂಲಕ ಬೇಸಿಗೆ ರಜೆ ಮುಗಿಸಿ ಮಕ್ಕಳು ಶಾಲೆಗಳತ್ತ ಮುಖ ಮಾಡಿದ್ದಾರೆ.

ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಛಗೊಳಿ, ತಳಿರು ತೋರಣ, ರಂಗೋಲೆ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರುಗಳಿಗೆ ಶಿಕ್ಷಣ ಇಲಾಖೆ ಸೂಚಿಸಿತ್ತು.

ಇಂದು ಬೆಂಗಳೂರಿನ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನೂರಾರು ಕನಸುಗಳನ್ನು ಹೊತ್ತು ಶಾಲೆಗಳತ್ತ ಹೆಜ್ಜೆಹಾಕುತ್ತಿರುವ ನಾಡಿನ ಮಕ್ಕಳಿಗೆ ಶುಭ ಕೋರಿದ್ದಾರೆ.

ಈ ವೇಳೆ 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ ಮಾಡಿದರು. ಬಳಿಕ ಶಾಲಾ ಕೊಠಡಿಗಳ ಪರಿಶೀಲನೆ ಕೂಡ ಮಾಡಿದ್ದಾರೆ.

ಇನ್ನು ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಾಗತಿಸಿದ್ದಾರೆ. ಇತ್ತ ಶಿಕ್ಷಣ ಇಲಾಖೆ ಕೂಡ ಮೊದಲ ದಿನವೇ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಿದೆ.

ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿಯಾದ ಘಟನೆ ಗದಗ ನಗರದ R.K.ನಗರ ಬಳಿಯ ಅಂಡರ್ಪಾಸ್ನಲ್ಲಿ ನಡೆದಿದೆ. ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸ್ಗೆ ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಪಲ್ಟಿ ಹೊಡೆದಿತ್ತು. ವಿದ್ಯಾರ್ಥಿಗಳನ್ನು ಕರೆತರಲು ಹೊರಟಿದ್ದಾಗ ಅವಘಡ ಸಂಭವಿಸಿದ್ದು, ಭಾರೀ ದುರಂತ ತಪ್ಪಿದೆ.




