ಮರಳಿ ಶಾಲೆಗೆ: ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ, ಇಲ್ಲಿವೆ ಫೋಟೋಸ್​

Updated on: May 29, 2025 | 3:08 PM

ಕರ್ನಾಟಕದಲ್ಲಿ 2025-26ನೇ ಶೈಕ್ಷಣಿಕ ವರ್ಷ ಆರಂಭವಾಗಿದೆ. ಶಾಲೆಗಳು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲ್ಪಟ್ಟಿವೆ. ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಮೊದಲ ದಿನವೇ ಶಿಕ್ಷಣ ಇಲಾಖೆ ಮಕ್ಕಳಿಗೆ ಮೊಟ್ಟೆ ವಿತರಿಸಿದೆ. ಈ ಮಧ್ಯೆ ಗದಗಿನಲ್ಲಿ ಶಾಲಾ ಬಸ್ ಪಲ್ಟಿಯಾದ ಘಟನೆ ಸಂಭವಿಸಿದೆ.

1 / 7
ಕರ್ನಾಟಕದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭವಾಗಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳು ಇಂದಿನಿಂದ ಆರಂಭಗೊಂಡಿವೆ. ಆ ಮೂಲಕ ಬೇಸಿಗೆ ರಜೆ ಮುಗಿಸಿ ಮಕ್ಕಳು ಶಾಲೆಗಳತ್ತ ಮುಖ ಮಾಡಿದ್ದಾರೆ.

2 / 7
ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಛಗೊಳಿ, ತಳಿರು ತೋರಣ, ರಂಗೋಲೆ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರುಗಳಿಗೆ ಶಿಕ್ಷಣ ಇಲಾಖೆ ಸೂಚಿಸಿತ್ತು.

3 / 7
ಇಂದು ಬೆಂಗಳೂರಿನ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

4 / 7
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನೂರಾರು ಕನಸುಗಳನ್ನು ಹೊತ್ತು ಶಾಲೆಗಳತ್ತ ಹೆಜ್ಜೆಹಾಕುತ್ತಿರುವ ನಾಡಿನ ಮಕ್ಕಳಿಗೆ ಶುಭ ಕೋರಿದ್ದಾರೆ.

5 / 7
ಈ ವೇಳೆ 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ ಮಾಡಿದರು. ಬಳಿಕ ಶಾಲಾ ಕೊಠಡಿಗಳ ಪರಿಶೀಲನೆ ಕೂಡ ಮಾಡಿದ್ದಾರೆ.

6 / 7
ಇನ್ನು ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಾಗತಿಸಿದ್ದಾರೆ. ಇತ್ತ ಶಿಕ್ಷಣ ಇಲಾಖೆ ಕೂಡ ಮೊದಲ ದಿನವೇ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಿದೆ.

7 / 7
ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿಯಾದ ಘಟನೆ ಗದಗ ನಗರದ R.K.ನಗರ ಬಳಿಯ ಅಂಡರ್​ಪಾಸ್​ನಲ್ಲಿ ನಡೆದಿದೆ. ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸ್​​​ಗೆ ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಪಲ್ಟಿ ಹೊಡೆದಿತ್ತು. ವಿದ್ಯಾರ್ಥಿಗಳನ್ನು ಕರೆತರಲು ಹೊರಟಿದ್ದಾಗ ಅವಘಡ ಸಂಭವಿಸಿದ್ದು, ಭಾರೀ ದುರಂತ ತಪ್ಪಿದೆ.