AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ KSRTC ಬಸ್- ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಟ್ಟಿದ್ದಾರೆ. ಇನ್ನು ಮೂವರಿಗೆ ಗಾಯಗಳಾಗಿವೆ. ಹಾಗಾದ್ರೆ ಅಪಘಾತಕ್ಕೆ ಕಾರಣವೇನು? ಮೃತಪಟ್ಟವರು ಯಾರು? ಎಲ್ಲಿಯವರು? ಎಲ್ಲಿಗೆ ಹೋಗುತ್ತಿದ್ದರು ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on: May 03, 2025 | 3:51 PM

Share
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ.

1 / 7
ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

2 / 7
ಈ ಭೀಕರ ಅಪಘಾತದಲ್ಲಿ ಆಟೋ ಚಾಲಕ ಶ್ರೀನಿವಾಸ(40), ಪುಟ್ಟಮ್ಮ(55), ವರ್ಷಿಣಿ(13) ಸಾವನ್ನಪ್ಪಿದ್ದಾರೆ. ಇನ್ನು ಆಟೋದಲ್ಲಿದ್ದ ಲೇಖನ(11) ಸ್ಥಿತಿ ಗಂಭೀರವಾಗಿದ್ದು, ನಾಗರತ್ನಮ್ಮ(35), ವೆಂಕಟೇಶ(37) ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

3 / 7
ಕೆಎಸ್ಆರ್ ಟಿಸಿ ಬಸ್​ ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿದ್ದರೆ, ಆಟೋ  ಶಾಂತಿನಗರದಿಂದ ನೆಲಮಂಗಲಕ್ಕೆ ಹೋಗುತ್ತಿತ್ತು.  ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಒಂದೇ ಕುಟುಂಬದ ಆರು ಜನರು ಆಟೋದಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

4 / 7
ಪುಟ್ಟಮ್ಮ 55, ಶ್ರೀನಿವಾಸ್40, (ಆಟೋ ಚಾಲಕ ) ಸ್ಥಳದಲ್ಲೇ ಮೃತಪಟ್ಟಿದ್ದರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಪುಟ್ಟಮ್ಮ ಮಗಳು 13  ವರ್ಷದ ವರ್ಷಿಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಮತ್ತೋರ್ವ ಪುತ್ರಿ ಲೇಖನ (11) ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾಳೆ.

5 / 7
ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಿ, ಕ್ರೇನ್ ಮೂಲಕ ಆಟೋ ಮತ್ತು ಬಸ್‌ನ್ನು ತೆರವುಗೊಳಿಸಿ ಟ್ರಾಫಿಕ್ ನಿಯಂತ್ರಿಸಲಾಯಿತು. ಬಸ್‌ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರೂ, ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

6 / 7
ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಮಲ್ಲರಬಾಣವಾಡಿ ಕ್ರಾಸ್ ಬಳಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದ ಆಟೋ ಸಂಪೂರ್ಣ ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಗಿದೆ.

7 / 7
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ

RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ