ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.
Updated on: Dec 07, 2023 | 12:34 PM
Share

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Photo Gallery
ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು
ಐಪಿಎಲ್ ಹೊಸ ನಿಯಮ: 25 ಕೋಟಿಗೆ ಖರೀದಿಸಿದರೂ ಸಿಗುವುದು 18 ಕೋಟಿ ರೂ.
ಚಳಿಯ ಜೊತೆ ಕಳಪೆ ಏರ್ ಕ್ವಾಲಿಟಿ ನಿಮ್ಮ ಉಸಿರಿಗೆ ಮುಳುವಾದೀತು!
ಧ್ರುವಂತ್ನ ಸೀಕ್ರೆಟ್ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್ಗೆ ಬೇಸರ?
ವಿಜಯ್ ದಿವಸ್, ಭಾರತೀಯ ಸೇನೆಯು ಪಾಕ್ ವಿರುದ್ಧ ಐತಿಹಾಸಿಕ ವಿಜಯ ಸಾಧಿಸಿದ ದಿನ
ಧ್ರುವಂತ್ನ ಸೀಕ್ರೆಟ್ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಹಲವು ಬಸ್ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ



