ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.
Updated on: Dec 07, 2023 | 12:34 PM
Share

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಲ್ಪಿಜಿ ಪೂರೈಕೆ ವ್ಯತ್ಯಯ: ಮೈಸೂರಲ್ಲೂ ಹೋಟೆಲ್ ಬಂದ್ ಆತಂಕ
ಮಿಡಲ್ ಕ್ಲಾಸ್ ಹುಡುಗ UPSC ಪರೀಕ್ಷೆ ಪಾಸ್ ಮಾಡಿದ್ಹೇಗೆ?
ರೇಣುಕಾಸ್ವಾಮಿ ಅಲ್ಲ, ಶಿವಸ್ವಾಮಿ ಕೊಲೆ ಕೇಸ್; ‘ಬಾಸ್’ ಸಿನಿಮಾ ಕಥೆ ರಿವೀಲ್
ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್ಗಳು ಬಂದ್ ಸಾಧ್ಯತೆ
ಗೇಟ್ ತೆಗೆಯಲು ಬಾರದಂತೆ ವಾಹನ ಪಾರ್ಕ್ ಮಾಡ್ತಿದ್ದಾರಾ ಈ ಟ್ರಿಕ್ ನೋಡಿ
ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಬೆಂಗಳೂರಿನಲ್ಲಿ ಹೋಟೆಲ್ ಬಂದ್!
LPG ಸಿಲಿಂಡರ್ ಕೊರತೆ: ಹೋಟೆಲ್ ಮುಚ್ಚುವುದೇ ಕೊನೆಯ ದಾರಿ
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ