ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.
Updated on: Dec 07, 2023 | 12:34 PM
Share

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾರೇ ಗೆದ್ರು ಖುಷೀನೆ; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ
ವಸಂತ ಪಂಚಮಿ ಆಚರಣೆಯ ವಿಧಾನ ಹಾಗೂ ಮಹತ್ವ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?