AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಏಕಾಏಕಿ ಕಾರಿನ ಮೇಲೆ ಲಾರಿ ಪಲ್ಟಿ: 6 ಜನ ಅಪ್ಪಚ್ಚಿ!

ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ. ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿದೆ. ಇನ್ಜು ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ ಆರು ಜನರು ಸಹ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ಅಪ್ಪಚ್ಚಿಯಾಗಿದ್ದು. ಅಪಘಾತದ ಭೀಕರತೆ ಹೇಗಿದೆ ಎನ್ನುವುದನ್ನು ಫೋಟೋಗಳೇ ಹೇಳುತ್ತವೆ.

ಬಿ ಮೂರ್ತಿ, ನೆಲಮಂಗಲ
| Edited By: |

Updated on:Dec 21, 2024 | 2:13 PM

Share
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಮೃತಪಟ್ಟಿದ್ದಾರೆ.

1 / 12
ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.

2 / 12
ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ.

3 / 12
ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿದೆ.  ಇನ್ಜು ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ ಆರು ಜನರು ಸಹ ಮೃತಪಟ್ಟಿದ್ದಾರೆ.

4 / 12
ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ  ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ. ಫೋಟೋಗಳೇ ಹೇಳುತ್ತವೆ ಅಪಘಾತದ ಭೀಕರತೆ ಹೇಗಿದೆ ಎಂದು.

5 / 12
ಈ ಭೀಕರ ಅಪಘಾತ ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗ್ರಾಮ  ತಾಳೇಕೆರೆ ಗ್ರಾಮದ  ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.  ಸುಮಾರು 1 ಕಿಲೋ ಮೀಟರ್​​ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.

6 / 12
ಇನ್ನು ಸ್ಥಳಕ್ಕೆ  ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಸೇರಿದಂತೆ ಇತರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು,  ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು  ಹೊರತೆಗೆದಿದ್ದಾರೆ.  ಇನ್ನು ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

7 / 12
ಸಂಪೂರ್ಣ ಅಪ್ಪಚ್ಚಿಯಾಗಿರುವ ಕಾರು ಬೆಂಗಳೂರು ರಿಜಿಸ್ಟ್ರೇಷನ್ ಹೊಂದಿದ್ದು, ಮೃತ ಆರು ಜನರು ಮಹಾರಾಷ್ಟ್ರ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಆದ್ರೆ, ನಿಖರವಾಗಿ ಅವರ ಹೆಸರು ಸೇರಿದಂತೆ ವಿವರ ತಿಳಿದುಬರಬೇಕಿದೆ.

ಸಂಪೂರ್ಣ ಅಪ್ಪಚ್ಚಿಯಾಗಿರುವ ಕಾರು ಬೆಂಗಳೂರು ರಿಜಿಸ್ಟ್ರೇಷನ್ ಹೊಂದಿದ್ದು, ಮೃತ ಆರು ಜನರು ವಿಜಯಪುರ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಆದ್ರೆ, ನಿಖರವಾಗಿ ಅವರ ಹೆಸರು ಸೇರಿದಂತೆ ವಿವರ ತಿಳಿದುಬರಬೇಕಿದೆ.

8 / 12
ಕಾರಿನಲ್ಲಿದ್ದ ಮಕ್ಕಳ ಪುಸ್ತಕಗಳು ಸಿಕ್ಕಿದ್ದು, ದೀಕ್ಷಾ ಎಂಬ ವಿದ್ಯಾರ್ಥಿನಿಯ ಹೆಸರು ಇರುವ ಪುಸ್ತಕ ಪತ್ತೆಯಾಗಿದೆ. IAST ಕಂಪನಿ ಮಾಲೀಕನಾಗಿದ್ದ ಚಂದ್ರಮ್​ ಯೇಗಪ್ಪಗೋಳ್​ ಎಂದು ಗುರುತಿಸಲಾಗಿದೆ. ಇನ್ನು ಇಡಿ ಕುಟುಂಬವೇ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

9 / 12
ಲಾರಿ ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿತ್ತು. ಮುಂದೆ ಬಂದ ಕಾರಿಗೆ ಡಿಕ್ಕಿಯಾಗುವುದನ್ನ ​ತಪ್ಪಿಸಲು ಚಾಲಕ ಲಾರಿಯನ್ನು ರೈಟ್​​ ಸೈಡ್​​ಗೆ ತೆಗೆದುಕೊಂಡಿದ್ದಾನೆ. ಪರಿಣಾಮ ಲಾರಿ ಬೆಂಗಳೂರಿನಿಂದ ತುಮಕೂರಿಗೆ ಹೋಗುತ್ತಿದ್ದ ರಸ್ತೆಗೆ ಬಂದು ಕಾರಿನ ಮೇಲೆ ಬಿದ್ದಿದೆ.

10 / 12
KA 01 ND 1536 ವೋಲ್ವೋ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಜನರ ಗುರುತು ಪತ್ತೆ ಮಾಡಲಾಗಿದೆ. ಪತಿ ಚಂದ್ರಮ್​ ಏಗಪ್ಪಗೋಳ್(46), ಪತ್ನಿ ಧೋರಾಬಾಯಿ(40), ಪುತ್ರ ಗ್ಯಾನ್‌(16), ಪುತ್ರಿಯರಾದ ದೀಕ್ಷಾ(10), ಆರ್ಯ(6)
ಚಂದ್ರಮ್​ ಏಗಪ್ಪಗೋಳ್ ಸಹೋದರನ ಪತ್ನಿ ವಿಜಯಲಕ್ಷ್ಮೀ(35) ಮೃತ ದುರ್ವೈವಿಗಳು.

KA 01 ND 1536 ವೋಲ್ವೋ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಜನರ ಗುರುತು ಪತ್ತೆ ಮಾಡಲಾಗಿದೆ. ಪತಿ ಚಂದ್ರಮ್​ ಏಗಪ್ಪಗೋಳ್(46), ಪತ್ನಿ ಧೋರಾಬಾಯಿ(40), ಪುತ್ರ ಗ್ಯಾನ್‌(16), ಪುತ್ರಿಯರಾದ ದೀಕ್ಷಾ(10), ಆರ್ಯ(6) ಚಂದ್ರಮ್​ ಏಗಪ್ಪಗೋಳ್ ಸಹೋದರನ ಪತ್ನಿ ವಿಜಯಲಕ್ಷ್ಮೀ(35) ಮೃತ ದುರ್ವೈವಿಗಳು.

11 / 12
ಚಂದ್ರಮ್​ ಏಗಪ್ಪಗೋಳ್ ಮೂಲತಃ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮದ ನಿವಾಸಿಗಳಾಗಿದ್ದು,  ಇವರು ಬೆಂಗಳುರಿನ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿ ವಾಸವಿದ್ದರು. ಚಂದ್ರಮ್​ ಏಗಪ್ಪಗೋಳ್ IAST ಸಾಫ್ಟ್‌ವೇರ್‌ ಕಂಪನಿ ಮಾಲೀಕರಾಗಿದ್ದರು.

12 / 12

Published On - 12:59 pm, Sat, 21 December 24

ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ