ಹಾವೇರಿಯಲ್ಲಿ ಭೀಕರ ಅಪಘಾತ: ಆಡಿ ಕಾರು ಅಪ್ಪಚ್ಚಿ, ದುಬಾರಿ ಕಾರಿನ ಭಯಾನಕ ಫೋಟೋಗಳು

Updated on: May 08, 2025 | 3:36 PM

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ದುರಂತ ಅಂತ್ಯಕಂಡಿದ್ದಾರೆ. ಇನ್ನು ಗುದ್ದಿದ ರಭಸಕ್ಕೆ ಆಡಿ ಕಾರು ಸಂಪೂರ್ಣ ಅಪ್ಪಚ್ಚಿಯಾಗಿdfdu, ಒಂದೇ ಏಟಿಗೆ ದುಬಾರಿ ಕಾರಿನ ಸ್ಥಿತಿ ಹೇಗಾಗಿದೆ ಎನ್ನುವ ಫೋಟೋಗಳನ್ನು ನೋಡಿ

1 / 9
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

2 / 9
ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ಘಟನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾದ ದಾರುಣ ಘಟನೆ ನಡೆದಿದೆ.

3 / 9
ದುಬಾರಿ ಬೆಲೆ ಬಾಳುವ ಆಡಿ ಕಾರು ವೇಗವಾಗಿ ಹೋಗಿ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಭೀಕರ ದುರಂತ ಸಂಭವಿಸಿದ್ದು, ಕಾರಿನಲ್ಲಿದ್ದ 8 ಜನರ ಪೈಕಿ 6 ಜನ ಸ್ಥಳದಲ್ಲಿ ಉಸಿರು ಚೆಲ್ಲಿಸಿದ್ದಾರೆ.

4 / 9
ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರು. ತಷ್ಕಿನ್ ರಾಣೆಬೆನ್ನೂರು, ಪಿರೋಜ್ ಗಾಯಗೊಂಡವರು. ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿ ಅಶೋಕ್​ ಎಂಬುವವರ ಸಂಬಂಧಿಕರ ಮಕ್ಕಳು ಎಂದು ಹೇಳಲಾಗುತ್ತಿದೆ.

5 / 9
ಶಾಲೆ ರಜೆ ಇರುವ ಹಿನ್ನಲೆ ಸಂಬಂಧಿಕರೆಲ್ಲಾ ಸೇರಿ ರಾಣೇಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು. ಇಂದು ಅಗಡಿ ತೋಟಕ್ಕೆ ಹೋಗಿ ನಂತರ ಗೋವಾಕ್ಕೆ ಹೋಗುವ ಪ್ಲಾನ್​ನಲ್ಲಿದ್ದರು. ಆದರೆ ಅಷ್ಟರಲ್ಲೇ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಜಾಸ್ತಿ ವೇಗ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಕಾರು ಚಾಲಕ ಡಿಕ್ಕಿ ಹೊಡಿದಿದ್ದಾನೆ

6 / 9
ಈ ಭೀಕರ ಅಪಘಾತದಲ್ಲಿ ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಶವಗಳ ರವಾನೆ ಮಾಡಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

7 / 9
ಆಡಿ ಕಾರು ವೇಗವಾಗಿ ಹೋಗಿ ನಿಂತಿದ್ದ ಲಾರಿಯ ಹಿಂಬದಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಆಡಿ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದ್ರೆ, ಲಾರಿಗೆ ಒಂದು ಚೂರು ಯಾವುದೇ ಡ್ಯಾಮೇಜ್ ಆಗಿಲ್ಲ.

8 / 9
ಲಾರಿಯ ಹಿಂಬದಿಗೆ ಗುದ್ದಿದ ರಭಸಕ್ಕೆ ಆಡಿ ಕಾರು ಗುರುತೇ ಸಿಗದಂತಾಗಿದೆ. ಸಂಪುರ್ಣ ನಜ್ಜುಗುಜ್ಜಾಗಿದ್ದು, ಅಪಘಾತ ಭಾರೀ ಭಯಾನಕವಾಗಿದೆ. ಇನ್ನು ಘಟನೆ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

9 / 9
ಆಡಿ ಕಾರುಗಳು ಲಕ್ಷುರಿ ಫೀಚರ್ಸ್‌ಗಳನ್ನು ಹೊಂದಿರುತ್ತವೆ. ಕಾರಿನ ಮುಂಭಾಗ ಹಿಂಭಾಗ ಸ್ವಲ್ಪ ಜೋರಾಗಿ ಏನಾದರೂ ಟಚ್ ಆಗಿದರೂ ಸಹ ಏರ್ ಬ್ಯಾಗ್​ಗಳು ಓಪನ್​ ಆಗುತ್ತವೆ. ಆದ್ರೆ, ಈ ಅಪಘಾತದಲ್ಲಿ ಕಾರಿನ ಕಾರಿನೊಳಗಿದ್ದ ಆರು ಜನ ಮೃತಪಟ್ಟಿದ್ದು, ಯಾವುದೇ ಏರ್​ ಬ್ಯಾಗ್​ ಉಪಯೋಗವಾಗಿಲ್ಲ.

Published On - 3:33 pm, Thu, 8 May 25