ಮಹಿಳೆಯ ಆರೋಗ್ಯ ಕಾಪಾಡಿಕೊಳ್ಳಲು ಅನೇಕ ಸಂಗತಿಗಳು ಮುಖ್ಯ ಪಾತ್ರ ವಹಿಸುತ್ತವೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದರಿಂದ ವಿವಿಧ ದೀರ್ಘಕಾಲದ ಕಾಯಿಲೆಗಳನ್ನು ಕಡಿಮೆ ಮಾಡಬಹುದು. ಉತ್ತಮ ರೀತಿಯ ತೂಕ ಮಾನಸಿಕ ಆರೋಗ್ಯ, ನಿದ್ರೆಯ ಗುಣಮಟ್ಟ ಮತ್ತು ಒಟ್ಟಾರೆ ದೈಹಿಕ ಕಾರ್ಯನಿರ್ವಹಣೆಯ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದರೆ ತೂಕವು ಸರಿಯಾಗಿರಬೇಕು.