- Kannada News Photo gallery 6000mAh Battery Smartphone Samsung Galaxy F15 5G Launching Today in India
Galaxy F15 5G: ಭಾರತದಲ್ಲಿ ಇಂದು ಬರೋಬ್ಬರಿ 6,000mAh ಬ್ಯಾಟರಿಯ ಹೊಸ ಸ್ಯಾಮ್‌ಸಂಗ್ ಫೋನ್ ಬಿಡುಗಡೆ
Samsung Galaxy F15 5G India Launch Today: ಫ್ಲಿಪ್‌ಕಾರ್ಟ್‌ನಲ್ಲಿ ಮೀಸಲಾದ ಮೈಕ್ರೊಸೈಟ್ ಮುಂಬರುವ ಗ್ಯಾಲಕ್ಸಿ ಎಫ್-ಸರಣಿಯ ಸ್ಮಾರ್ಟ್‌ಫೋನ್‌ನ ವಿನ್ಯಾಸ ಮತ್ತು ಕೆಲವು ಫೀಚರ್ಸ್ ಬಗ್ಗೆ ಮಾಹಿತಿ ನೀಡಿದೆ. ಗ್ಯಾಲಕ್ಸಿ F15 5G ಅನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ನಲ್ಲಿ ರನ್ ಮಾಡಲಾಗುತ್ತದೆ. ಇದರಲ್ಲಿ ಬರೋಬ್ಬರಿ 6,000mAh ಬ್ಯಾಟರಿ ನೀಡಲಾಗಿದೆ.
Updated on: Mar 04, 2024 | 6:55 AM

ದಕ್ಷಿಣ ಕೊರಿಯಾ ಮೂಲದ ಸ್ಯಾಮ್‌ಸಂಗ್ ಕಂಪನಿ ಕೆಲವು ವಾರಗಳ ವಿರಾಮದ ಬಳಿಕ ಭಾರತೀಯ ಮಾರುಕಟ್ಟೆಗೆ ಹೊಸ ಸ್ಮಾರ್ಟ್ಫೋನ್ನೊಂದಿಗೆ ಬರುತ್ತಿದೆ. ಇಂದು ದೇಶದಲ್ಲಿ ಸ್ಯಾಮ್‌ಸಂಗ್ ತನ್ನ ಹೊಸ ಗ್ಯಾಲಕ್ಸಿ F15 5G (Samsung Galaxy F15 5G) ಅನ್ನು ಬಿಡುಗಡೆ ಮಾಡಲಿದೆ. ಈ ಬಗ್ಗೆ ಕಂಪನಿ ಅಧಿಕೃತವಾಗಿ ಮಾಹಿತಿ ನೀಡಿದೆ.

ಫ್ಲಿಪ್‌ಕಾರ್ಟ್‌ನಲ್ಲಿ ಮೀಸಲಾದ ಮೈಕ್ರೊಸೈಟ್ ಮುಂಬರುವ ಗ್ಯಾಲಕ್ಸಿ ಎಫ್-ಸರಣಿಯ ಸ್ಮಾರ್ಟ್‌ಫೋನ್‌ನ ವಿನ್ಯಾಸ ಮತ್ತು ಕೆಲವು ಫೀಚರ್ಸ್ ಬಗ್ಗೆ ಮಾಹಿತಿ ನೀಡಿದೆ. ಗ್ಯಾಲಕ್ಸಿ F15 5G ಅನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ನಲ್ಲಿ ರನ್ ಮಾಡಲಾಗುತ್ತದೆ. ಇದರಲ್ಲಿ ಬರೋಬ್ಬರಿ 6,000mAh ಬ್ಯಾಟರಿ ನೀಡಲಾಗಿದೆ.

ಈ ಹ್ಯಾಂಡ್‌ಸೆಟ್ ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಹೊಸ ಗ್ಯಾಲಕ್ಸಿ F ಸರಣಿಯ ಸ್ಮಾರ್ಟ್‌ಫೋನ್‌ನ ಆಗಮನದ ಬಗ್ಗೆ ಇ-ಕಾಮರ್ಸ್ ವೆಬ್‌ಸೈಟ್ ತನ್ನ ವೆಬ್‌ಸೈಟ್‌ನಲ್ಲಿ ಲ್ಯಾಂಡಿಂಗ್ ಪುಟವನ್ನು ಕೂಡ ರಚಿಸಿದೆ. ಇದು ಆಶ್ ಬ್ಲ್ಯಾಕ್, ಗ್ರೂವಿ ವೈಲೆಟ್ ಮತ್ತು ಜಾಝಿ ಗ್ರೀನ್ ಬಣ್ಣಗಳಲ್ಲಿ ಲಭ್ಯವಿದೆ ಎಂದು ಹೇಳಲಾಗಿದೆ.

ಫ್ಲಿಪ್‌ಕಾರ್ಟ್ ಪಟ್ಟಿಯ ಪ್ರಕಾರ ಗ್ಯಾಲಕ್ಸಿ F15 5G ಫೋನ್ ಸೂಪರ್ AMOLED ಡಿಸ್ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಚಿಪ್‌ಸೆಟ್‌ನಿಂದ ಚಾಲಿತವಾಗಿದೆ. 6,000mAh ಬ್ಯಾಟರಿಯು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ.

ಇದಲ್ಲದೆ, ಸ್ಯಾಮ್‌ಸಂಗ್ ಹೊಸ ಫೋನ್‌ಗೆ ನಾಲ್ಕು ತಲೆಮಾರುಗಳ ಆಂಡ್ರಾಯ್ಡ್ ನವೀಕರಣಗಳು ಮತ್ತು ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಒದಗಿಸುವುದಾಗಿ ಭರವಸೆ ನೀಡಿದೆ. ಗ್ಯಾಲಕ್ಸಿ ಎಫ್ 15 5 ಜಿ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಯೂನಿಟ್ ಅನ್ನು ಹೊಂದಿದೆ. ಹಾಗೆಯೆ ಸಿಂಗಲ್ ಸೆಲ್ಫಿ ಶೂಟರ್ ಅನ್ನು ಇರಿಸಲು ಡಿಸ್ಪ್ಲೇ ಮೇಲೆ ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ನೀಡಲಾಗಿದೆ. ಈ ಫೋನಿನ ಬೆಲೆ ರೂ. 15,000 ಇರಬಹುದೆಂದು ಅಂದಾಜಿಸಲಾಗಿದೆ.
























