7 star Sultan: ‘ಟಗರು ಪಲ್ಯ’ ಖ್ಯಾತಿಯ ‘7 ಸ್ಟಾರ್ ಸುಲ್ತಾನ್’ ಕುರುಬಾನಿ ಕ್ಯಾನ್ಸಲ್; ನಿಟ್ಟುಸಿರು ಬಿಟ್ಟ ಅಭಿಮಾನಿಗಳು
Tagaru Palya: ‘7 ಸ್ಟಾರ್ ಸುಲ್ತಾನ್’ ಕುರುಬಾನಿ ವಿರುದ್ಧ ದೊಡ್ಡ ಅಭಿಯಾನವೇ ಶುರುವಾಗಿತ್ತು. ‘ಟಗರು ಪಲ್ಯ’ ಚಿತ್ರತಂಡದವರು ಕೂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿದ್ದರು.
Updated on: Jun 27, 2023 | 2:52 PM

ನಟ ಡಾಲಿ ಧನಂಜಯ್ ಅವರು ‘ಡಾಲಿ ಪಿಕ್ಚರ್ಸ್’ ಮೂಲಕ ನಿರ್ಮಿಸುತ್ತಿರುವ ‘ಟಗರು ಪಲ್ಯ’ ಚಿತ್ರದಲ್ಲಿ ‘7 ಸ್ಟಾರ್ ಸುಲ್ತಾನ್’ ಎಂಬ ಟಗರು ನಟಿಸಿದೆ. ಇದಕ್ಕೆ ರಾಜ್ಯಾದ್ಯಂತ ಅಭಿಮಾನಿಗಳು ಇದ್ದಾರೆ.

ಬಾಗಲಕೋಟೆಯ ಸುತಗುಂಡಾರ ಗ್ರಾಮದ ಯುನೀಸ್ ಗಡೇದ್ ಅವರು ಎರಡೂವರೆ ವರ್ಷದ ಹಿಂದೆ ‘7 ಸ್ಟಾರ್ ಸುಲ್ತಾನ್’ ಟಗರನ್ನು 1.88 ಲಕ್ಷ ರೂಪಾಯಿ ನೀಡಿ ಖರೀದಿಸಿದ್ದರು. ಬಳಿಕ ಇದನ್ನು ಟಗರು ಕಾಳಗಕ್ಕೆ ಇಳಿಸಿದ್ದರು.

‘7 ಸ್ಟಾರ್ ಸುಲ್ತಾನ್’ ಹೆಸರಿನ ಈ ಟಗರನ್ನು ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಕುರುಬಾನಿ ನೀಡಲು ಅದರ ಮಾಲೀಕರು ತೀರ್ಮಾನಿಸಿದ್ದರು. ಆದರೆ ಇದನ್ನು ಕುರುಬಾನಿ ಕೊಡಬಾರದು ಎಂದು ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿತ್ತು.

ಕುರುಬಾನಿ ವಿರುದ್ಧ ದೊಡ್ಡ ಅಭಿಯಾನವೇ ಶುರುವಾಗಿತ್ತು. ‘ಟಗರು ಪಲ್ಯ’ ಚಿತ್ರತಂಡದವರು ಕೂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿದ್ದರು. ಅವರ ಮನವಿಗೆ ಈಗ ಫಲ ಸಿಕ್ಕಿದೆ. ಮಾಲೀಕರು ಮನಸ್ಸು ಬದಲಾಯಿಸಿದ್ದಾರೆ.

ನಾಗಭೂಷಣ್ ಹಾಗೂ ‘ನೆನಪಿರಲಿ’ ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ‘ಟಗರು ಪಲ್ಯ’ ಸಿನಿಮಾ ಈಗಾಗಲೇ ನಿರೀಕ್ಷೆ ಮೂಡಿಸಿದೆ. ಉಮೇಶ್ ಕೆ. ಕೃಪ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.

ಅಮೃತಾ ಪ್ರೇಮ್ಗೆ ಇದು ಮೊದಲ ಸಿನಿಮಾ. ‘ಟಗರು ಪಲ್ಯ’ ಮೂಲಕ ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಮಂಡ್ಯದ ಹಳ್ಳಿಗಳಲ್ಲಿ ನಡೆಯುವ ಆಚರಣೆಗಳ ಸುತ್ತ ಈ ಚಿತ್ರದ ಕಥೆ ಸಾಗಲಿದೆ.

‘ಟಗರು ಪಲ್ಯ’ ಸಿನಿಮಾದಲ್ಲಿ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ಅನೇಕರು ನಟಿಸಿದ್ದಾರೆ. ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಸದ್ಯ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



