
ಪ್ರಧಾನಿ ಮೋದಿ ಅವರು ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದ ಪ್ರತಿಕೃತಿಯನ್ನು ಫ್ರೆಂಚ್ ಅಧ್ಯಕ್ಷರಿಗೆ ಉಡುಗೊರೆಯಾಗಿ ನೀಡಿದರು. ಉಭಯ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ.

ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಹವಾ ಮಹಲ್ ಎದುರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡರು.

ಇಮ್ಯಾನ್ಯುಯೆಲ್ ಮ್ಯಾಕ್ರನ್ ಜೈಪುರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಜತೆಗೂಡಿ ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ.

ಬಳಿಕ ಜೈಪುರದಲ್ಲಿ ಇಮ್ಯಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ.

2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತ ಭೇಟಿ ವೇಳೆ ಹೇಳಿದ್ದಾರೆ.

ಭಾರತದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಅವರು ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಯೋಜನೆ ಘೋಷಿಸಿದ್ದಾರೆ.

ಭಾರತದೊಂದಿಗೆ ಫ್ರಾನ್ಸ್‌ನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನದ ಭಾಗವಿದು ಎಂದೂ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.