AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಹೇಗಿತ್ತು ನೋಡಿ!

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಸಂವಿಧಾನ ರಕ್ಷಣೆ, ಸಾಮಾಜಿಕ ನ್ಯಾಯದ ಬಗ್ಗೆ ಸಂದೇಶ ನೀಡಿದರು. ಮೈದಾನದಲ್ಲಿ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಕವಾಯತು, ಭದ್ರತಾ ವ್ಯವಸ್ಥೆ ಹಾಗೂ ಕೈದಿಗಳ ಸಿಹಿ ವಿತರಣೆ ಫೋಟೋಗಳು ಇಲ್ಲಿವೆ ನೋಡಿ.

ಭಾವನಾ ಹೆಗಡೆ
|

Updated on: Jan 26, 2026 | 10:48 AM

Share
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಪೊಲೀಸ್ ಮತ್ತು ಸೇನಾಪಡೆಯಿಂದ ಗೌರವ ವಂದನೆ ಸ್ವೀಕರಿಸಿದರು, ತೆರೆದ ಜೀಪ್‌ನಲ್ಲಿ ಪರೇಡ್ ವೀಕ್ಷಣೆ ಮಾಡಿದರು.

1 / 6
77ನೇ ಗಣರಾಜ್ಯೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಸಂದೇಶ ನೀಡಿ, ಸಂವಿಧಾನ ರಕ್ಷಣೆ ಅಗತ್ಯ, ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣ ಹಾಗೂ ಶಕ್ತಿಶಾಲಿ ರಾಜ್ಯಕ್ಕಾಗಿ ಜನರ ಸಹಕಾರ ಕೋರಿದರು.

2 / 6
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 1,400 ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, 1,100 ಮಂದಿಯ ಕವಾಯತು, ತಮಿಳುನಾಡು ಪೊಲೀಸರ ಭಾಗವಹಿಸಸಿದರು.

3 / 6
ಕಾರ್ಯಕ್ರಮಕ್ಕೆ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, 100ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ, ಬೆಳಗ್ಗೆ 8.30ರಿಂದ 10.30ರವರೆಗೆ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಜಾರಿ ಮಾಡಲಾಗಿದೆ.

4 / 6
ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಪರಿವರ್ತನ ಬೇಕರಿಯಲ್ಲಿ ಖೈದಿಗಳು ತಯಾರಿಸಿದ ಸಿಹಿಗಳನ್ನು ವಿತರಿಸಲಾಯಿತು.

5 / 6
ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.

6 / 6